ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ‘ ಶ್ರೀ ಶಾರದಾ ಆಸರೆ ಯೋಜನೆ ‘ ಆರಂಭ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ ಕಾಲೇಜಿನ ಹಳೆ ವಿದ್ಯಾರ್ಥಿಗಳ ಹಾಗೂ ಶಿಕ್ಷಣಾಭಿಮಾನಿಗಳ ಸಹಕಾರದಿಂದ ವಿದ್ಯಾರ್ಥಿಗಳಿಗಾಗಿ ‘ ಶ್ರೀ ಶಾರದಾ ಆಸರೆ ‘ ಯೋಜನೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಸಂಚಾಲಕರಾದ ಅನುಪಮಾ ಎಸ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಲೇಜಿನ ಪದವಿ ತರಗತಿಗೆ ಸೇರ್ಪಡೆಯಾಗುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಬೇಕು ಎನ್ನುವ ಎನ್ನುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

ಈ ಶೈಕ್ಷಣಿಕ ವರ್ಷದಿಂದ ಪ್ರಥಮ ವರ್ಷದ ಪದವಿ ತರಗತಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳ ಕುಟುಂಬದ ಆರ್ಥಿಕ ಹಿನ್ನೆಲೆ ಹಾಗೂ ನೆರವಿನ ಅವಶ್ಯಕತೆಗಳನ್ನು ಪರಿಗಣಿಸಿ ಯೋಜನೆಯ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳ ಶಿಕ್ಷಣಾಭ್ಯಾಸದ ಖರ್ಚುಗಳನ್ನು ಭರಿಸಲು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳು ಹಾಗೂ ದಾನಿಗಳಿಂದ ‘ ಶ್ರೀ ಶಾರದಾ ಆಸರೆ ‘ ಯೋಜನೆಯಡಿ ದತ್ತು ಸ್ವೀಕಾರ ಮಾಡಿಕೊಳ್ಳಲು ನೆರವು ಪಡೆದುಕೊಳ್ಳಲಾಗುವುದು.

ಏ.19 ರ ಭಾನುವಾರದಂದು ಕಾಲೇಜಿನಲ್ಲಿ ನಡೆದ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಭೆಯಲ್ಲಿ ಉದ್ದೇಶಿತ ‘ ಶ್ರೀ ಶಾರದಾ ಆಸರೆ ‘ ಯೋಜನೆ ಬಗ್ಗೆ ವಿವರವಾಗಿ ಚರ್ಚಿಸಿ ಈ ಶೈಕ್ಷಣಿಕ ವರ್ಷದಿಂದಲೇ ಯೋಜನೆಯನ್ನು ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು, ಭವಿಷ್ಯದ ಶಿಕ್ಷಣಕ್ಕೆ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು ಕಾಲೇಜು ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಪ್ರವೇಶ ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ.

ಸಭೆಯಲ್ಲಿ ಕಾಲೇಜು ಆಡಳಿತ ಮಂಡಳಿ ಸದಸ್ಯ ಸುಭಾಶ್ಚಂದ್ರ ಶೆಟ್ಟಿ ಬಾಂಡ್ಯ, ಪ್ರಾಂಶುಪಾಲ ದಯಾನಂದ ಎನ್ ಬಾಯರ್, ಹಳೆ ವಿದ್ಯಾರ್ಥಿ ಸಂಘದ ಸಟ್ವಾಡಿ ವಿಜಯ್ ಶೆಟ್ಟಿ, ಸುಧಾಕರ ಶೆಟ್ಟಿ ಬಾಂಡ್ಯ, ಡಾ.ನಿತ್ಯಾನಂದ ಶೆಟ್ಟಿ ಅಂಪಾರು, ಸದಾನಂದ ಬಳ್ಕೂರ್, ರಾಮಕಿಶನ್ ಹೆಗ್ಡೆ, ಕೆ.ವಿಕಾಸ್ ಹೆಗ್ಡೆ, ಸೌಮ್ಯಾ ಬಸ್ರೂರು, ರಮೇಶ್ ಆಚಾರ್, ಶ್ರೀನಾಥ್ ಪೂಜಾರಿ ನರೇಶ್.ಬಿ, ನಿವೃತ್ತ ಪ್ರಾಂಶುಪಾಲರಾದ ಡಾ.ದಿನೇಶ್ ಹೆಗ್ಡೆ, ಪ್ರೊ.ರಾಧಾಕೃಷ್ಣ ಶೆಟ್ಟಿ, ಡಾ.ಚಂದ್ರಾವತಿ ಶೆಟ್ಟಿ ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts

Exit mobile version