ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

0
62

ಕುಂದಾಪುರ ಮಿರರ್ ಸುದ್ದಿ…

ಕೋಟ: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಶ್ರೀ ಅಮೃತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ.ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ‌ ಮುಖ್ಯ ಅತಿಥಿಗಳಾಗಿ ನಾಥಪಂಥ ಅಲೆಮಾರಿ ಜೋಗಿ ಮಹಿಳಾ ಸಂಘದ ಅಧ್ಯಕ್ಷೆ ಅನುಪಮ ಜೋಗಿ ಶುಭ ಹಾರೈಸಿದರು.

ಈ‌ ವೇಳೆ ಅಮೃತೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಿಕೆಯ ಗೌರವಾಧ್ಯಕ್ಷ ಸುಬ್ರಾಯ ಜೋಗಿ, ದೇವಸ್ಥಾನದ ಅರ್ಚಕ ಉದಯ್ ಜೋಗಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಭವಾನಿ ಕೆ, ಕಾರ್ಯದರ್ಶಿ ರೇಖಾ ಕೆ., ಕೋಶಾಧಿಕಾರಿ ಗೀತಾ ಜೋಗಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ನಂತರ ಅಮೃತೇಶ್ವರೀ ದೇವಸ್ಥಾನದಲ್ಲಿ ಜೋಗಿ ಮಹಿಳಾ ವೇದಿಕೆಯ ಸದಸ್ಯರಿಂದ ಭಗವದ್ಗೀತೆ ಪಾರಾಯಣಗೈದರು.

LEAVE A REPLY

Please enter your comment!
Please enter your name here