ಪಂಚವರ್ಣದಿಂದ ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ತೆರವು – ಹರ್ಷ ಪೂಜಾರಿ ಪ್ರಶಂಸೆ

ಕುಂದಾಪುರ ಮಿರರ್ ಸುದ್ದಿ…

ಕೋಟ: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚಿದ್ದು ಇದರ ಬಗ್ಗೆ ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಇಒ ಹರ್ಷ ಪೂಜಾರಿ ಖೇಧ ವ್ಯಕ್ತಪಡಿಸಿದ್ದಾರೆ.
ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ 299ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿ, ಪಂಚವರ್ಣದ ಈ ಸ್ವಚ್ಛತಾ ಅಭಿಯಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗುವ ದೊಡ್ಡ ಪ್ರಮಾಣದ ತ್ಯಾಜ್ಯದ ಕೊಂಪೆಯನ್ನು ಇನ್ನಿಲ್ಲದಂತ್ತಾಗಿಸಿದ್ದಾರೆ. ಆದರೆ ಕಸ ಎಸೆಯುವ ಮನಸ್ಥಿತಿ ಅತ್ಯಂತ ಹೀನ ವ್ಯವಸ್ಥೆ ತಳ್ಳಲ್ಪಟ್ಟಿದೆ ಎಂದು ಪಂಚವರ್ಣ ನಿತ್ಯನಿರಂತ ಪಕೃತಿ ಮಾತೆಯ ಸೇವೆಯನ್ನು ಮುಕ್ತಕಂಠದಿಂದ ಪ್ರಶಂಸಿದರು.
ಈ ಸಂದರ್ಭದಲ್ಲಿ ಪಂಚವರ್ಣ ಯುವಕ‌ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಟ್ರಾವೆಲಿಂಕ್ಸ್ ಫ್ರೆಂಡ್ಸ್ ನ ನಾಗರಾಜ್ ಅಮೀನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts

Exit mobile version