ತತ್ವ ಸಿದ್ದಾಂತ ಆಧಾರಿತ ರಾಜಕಾರಣ ಬಿಜೆಪಿಯ ಧ್ಯೇಯ- ಬೈಕಾಡಿ ಸುಪ್ರಸಾದ್ ಶಟ್ಟಿ

0
924

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಭಾರತೀಯ ಜನತಾ ಪಾರ್ಟಿಯು ಕಾರ್ಯಕರ್ತರ ಆಧಾರಿತ ಸಂಘಟನೆಯಾಗಿದ್ದು ದೇಶಭಕ್ತಿ ಮತ್ತು ರಾಷ್ಟ್ರವಾದಿ ರಾಜಕಾರಣವನ್ನು ಮಾಡಿ ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರನಿರ್ಮಾಣದ ತತ್ವವನ್ನು ನಂಬಿಕೊಂಡು ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಮೂಲ ತತ್ವದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ನಮ್ಮದು ಎಂದು ಜಿಲ್ಲಾ ಉಪಾಧ್ಯಕ್ಷರು ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.


ಹಾಲಾಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ಹಾಲಾಡಿ ಮಹಾಶಕ್ತಿ ಕೇಂದ್ರದ ಪಕ್ಷ ಸಂಘಟನೆಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು ಕುಂದಾಪುರ ವಿಧಾನಸಭಾ ಕ್ಷೇತ್ರ ಸಂಘಟನಾತ್ಮಕವಾಗಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಇಡೀ ರಾಜ್ಯಕ್ಕೆ ಮಾದರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಭೆಯಲ್ಲಿ ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು, ಕುಂದಾಪುರ ಮಂಡಲದ ಹಾಲಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಂಕರ ಮೊಗವೀರ ಅಧ್ಯಕ್ಷತೆಯನ್ನು ವಹಿಸಿದರು. ಕರ್ನಾಟಕ ರಾಜ್ಯ ಆಹಾರ ನಿಗಮ ಮಂಡಳಿಯ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಕುಂದಾಪುರದ ಬಿಜೆಪಿ ಕ್ಷೇತ್ರ ಅಧ್ಯಕ್ಷ ರಾದ ಶಂಕರ್ ಅಂಕದಕಟ್ಟೆ , ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಹಾಗೂ ಜಿಲ್ಲಾ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗೋಪಾಲ ಕಾಂಚನ ವೇದಿಕೆಯಲ್ಲಿದ್ದರು..

ಪಕ್ಷ ಸಂಘಟನೆಯ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಶಕ್ತಿಕೇಂದ್ರದ ಅಧ್ಯಕ್ಷರು ಪಕ್ಷದ ಮುಖಂಡರು, ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಾಲಾಡಿ ಬಿಜೆಪಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾದ ಶಂಕರ್ ಮೊಗವೀರ ಸ್ವಾಗತಿಸಿದರು. ವಂದೇ ಮಾತರಂ ಗೀತೆಯನ್ನು ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಸಂಗಮ್ ಹಾಡಿದರು.

ಹಾಲಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ ಹೆಂಗವಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here