ಕೋಟ :ಅಖಿಲೇಶ್‍ಗೆ ರಾಷ್ಟ್ರ ಮಟ್ಟದಲ್ಲಿ ಅವಳಿ ಪದಕ

0
492

ಕುಂದಾಪುರ ಮಿರರ್ ಸುದ್ದಿ…

ಕೋಟ : ಇಲ್ಲಿನ ಕೋಟ ನಿವಾಸಿ ಅಖಿಲೇಶ್ ಗುಜರಾತ್‍ನಲ್ಲಿ ನಡೆದ ರಾಷ್ಟ್ರಮಟ್ಟದ 20ನೇ ನ್ಯಾಷನಲ್ ಫೆಡ್ ಕಪ್ ಜೂನಿಯರ್ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ತ್ರಿವಿಧ ಜಿಗಿತದಲ್ಲಿ ಬೆಳ್ಳಿ ಪದಕ ಹಾಗೂ ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ 4ನೇ ಖೇಲೋ ಇಂಡಿಯಾ ಯೂತ್ ಗೇಮ್‍ನಲ್ಲಿ ತ್ರಿವಿಧ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ಜಯಪ್ರಕಾಶ್ ಮತ್ತು ಸುಮನಾ ದಂಪತಿ ಪುತ್ರನಾಗಿರುವ ಅವರು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಸಂತ್ ಜೋಗಿ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಪ್ರಸ್ತುತ ಮಾಬುಕಳ ಬಿ.ಡಿ. ಶೆಟ್ಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

 

LEAVE A REPLY

Please enter your comment!
Please enter your name here