ಉಡುಪಿ: ಜಿಲ್ಲೆಯಲ್ಲಿ ನಾಳೆ (ಜುಲೈ 7) ಶಾಲೆ, ಕಾಲೇಜುಗಳಿಗೆ ರಜೆ

0
431

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರವೂ (ಜುಲೈ 7)ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಬುಧವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪೌಢ ಶಾಲೆ ಪದವಿ ಪೂರ್ವ, ಪದವಿ, ಸಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ, ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ

LEAVE A REPLY

Please enter your comment!
Please enter your name here