ಉಡುಪಿ: ಜಿಲ್ಲೆಯಲ್ಲಿ ಜು.8, 9 ಶಾಲೆ, ಕಾಲೇಜುಗಳಿಗೆ ರಜೆ

0
922

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಜುಲೈ 8 ಹಾಗೂ 9ರ ಶುಕ್ರವಾರ ಶನಿವಾರದಂದು ಶಾಲಾ ಕಾಲೇಜುಗಳಿಗೆ ರಜೆ ಘೊಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಉಡುಪಿ ಜಿಲ್ಲೆಯ ಎಲ್ಲಾ ಸರ್ಕಾರಿ ಖಾಸಗಿ ಶಾಲಾ ಕಾಲೇಜಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಎರಡು ದಿನ ರಜೆ ಘೋಷಿಸಿದ ಉಡುಪಿ ಡಿಸಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಈಗಾಗಲೇ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

LEAVE A REPLY

Please enter your comment!
Please enter your name here