ಎಸ್. ಜನಾರ್ಧನ ಮರವಂತೆ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ

0
457

ಕುಂದಾಪುರ ಮಿರರ್ ಸುದ್ದಿ…

ಬೈಂದೂರು :ಶಿಕ್ಷಣ, ಸಾಮಾಜಿಕ ಸೇವೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದ ಹಿರಿಯ ಚಿಂತಕ, ಲೇಖಕ, ಪತ್ರಕರ್ತ ಹಾಗೂ ಸಮಾಜಮುಖಿ ವ್ಯಕ್ತಿತ್ವದ ಶ್ರೀ ಎಸ್. ಜನಾರ್ಧನ ಮರವಂತೆ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಜನಾರ್ಧನ ಮರವಂತೆ ಅವರು ಶಿಕ್ಷಣ ಕ್ಷೇತ್ರದ ಜೊತೆಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಹಾಗೂ ಸಾಮಾಜಿಕ ಜಾಗೃತಿಗೆ ಮಹತ್ತರ ಕೊಡುಗೆ ನೀಡಿದ್ದರು. ತಮ್ಮ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿಕೊಂಡಿದ್ದ ಅವರು ಅನೇಕ ಸಂಘ-ಸಂಸ್ಥೆಗಳ ಮೂಲಕ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಾವಿರಾರು ಜನರಿಗೆ ಪ್ರೇರಣೆಯಾಗಿದ್ದರು.

ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಅವರ ಸೇವೆ ಸದಾ ಸ್ಮರಣೀಯವಾಗಿರುತ್ತದೆ. ಲೇಖಕ ಚಿಂತಕರಾಗಿ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಪತ್ರಕರ್ತ ಹಾಗೂ

ಅವರ ಅಗಲಿಕೆಯಿಂದ ಸಮಾಜಮುಖಿ ಚಿಂತಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು ಬಂಧು-ಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂಸದ ರಾಘವೇಂದ್ರ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.


 

LEAVE A REPLY

Please enter your comment!
Please enter your name here