ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃವಿಯೋಗ; ಜಯಮ್ಮ ಚಿನ್ನೇಗೌಡ ನಿಧನ

0
128

ರಾಘವೇಂದ್ರ ಅಡಿಗ ಎಚ್ಚೆನ್.

ಕುಂದಾಪುರ ಮಿರರ್ ಸುದ್ದಿ…
ಬೆಂಗಳೂರು :ನಟ ವಿಜಯ್ ರಾಘವೇಂದ್ರ ಮತ್ತು ನಟ ಶ್ರೀಮುರಳಿ ಅವರ ತಾಯಿ, ಹಿರಿಯ ನಟಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ  ಜಯಮ್ಮ ಚಿನ್ನೇಗೌಡ ನಿಧನರಾಗಿದ್ದಾರೆ. ಜಯಮ್ಮ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಯೋಸಹಜ ಕಾಯಿಲೆಗಳು ಮತ್ತು ಆರೋಗ್ಯದಲ್ಲಿನ ಏರುಪೇರಿನಿಂದಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಜಯಮ್ಮನವರು ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ. ಹಿರಿಯ ನಟ ಡಾ. ರಾಜ್‌ಕುಮಾರ್ ಅವರ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಜಯಮ್ಮ ಇಂದು ಬೆಳಗ್ಗೆ 7.05ಕ್ಕೆ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

LEAVE A REPLY

Please enter your comment!
Please enter your name here