ಅಂಪಾರು :ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ನೋಟ್‌ಬುಕ್ ವಿತರಣೆ

0
273

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ (ರಿ.) ಅಂಪಾರು ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಅಂಪಾರು‌ ಇದರ ವತಿಯಿಂದ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ ನಡೆಯಿತು.

ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಅಂಪಾರು ತನ್ನ ಸಾಮಾಜಿಕ ಕಳಕಳಿಯ ಭಾಗವಾಗಿ ಅನೇಕ ಶಿಕ್ಷಣ ಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ಶೈಕ್ಷಣಿಕ ವರ್ಷದ ಅವಧಿಗೆ ಅಗತ್ಯವಿರುವ ನೋಟ್‌ಬುಕ್‌ಗಳನ್ನು ಉಚಿತವಾಗಿ ದೇಣಿಗೆಯಾಗಿ ನೀಡುತ್ತಿದ್ದು, ಈ ದಿನ ಅಂಪಾರಿನ ಮೂರು ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಿದ್ದು, ಈ ಉದಾರ ಕೊಡುಗೆ ವಿದ್ಯಾರ್ಥಿಗಳಲ್ಲಿ ಅಪಾರ ಸಂತಸವನ್ನುಂಟು ಮಾಡಿತು. ಶಿಕ್ಷಣಕ್ಕೆ ಪ್ರೋತ್ಸಾಹ ಹಾಗೂ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗುವ ಈ ಕಾರ್ಯವನ್ನು ಎಲ್ಲರೂ ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಂಪಾರು ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಅಂಪಾರು ಇದರ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ನವೀನ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ಕಿರಣ್ ಹೆಗ್ಡೆ, ಅರುಣ್ ಕುಮಾರ್ ಶೆಟ್ಟಿ, ಮನೋಹರ ಶೆಟ್ಟಿ, ಜಯರಾಮ್ ಶೆಟ್ಟಿ, ಉಮೇಶ್ ಕೊಠಾರಿ, ಜ್ಯೋತಿ ಉದಯಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ಸಂಜಯ ಗಾಂಧಿ ಫಂಡ್ ಸಮಿತಿ ಅಧ್ಯಕ್ಷೆ ಶಾರದಾ, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಖಜಾಂಚಿ ಸುಭಾಶ್ಚಂದ್ರ ಶೆಟ್ಟಿ ಕೊಡ್ಲಾಡಿ, ಸಂಜಯ ಗಾಂಧಿ ಇಂಗ್ಲಿಷ್ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ, ಸಂಜಯ ಗಾಂಧಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಉದಯಕುಮಾರ್ ಬಿ., ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಪಾರದ ಶಿಕ್ಷಕಿ ಲತಾ ಉಪಸ್ಥಿತರಿದ್ದರು.

ವೇದಿಕೆಯಲ್ಲಿದ್ದ ಗಣ್ಯರು ಮೂರು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಶ್ರೀ ನವೀನ್ ಕುಮಾರ್ ಶೆಟ್ಟಿ, ಶ್ರೀ ಕಿರಣ್ ಹೆಗ್ಡೆ ಹಾಗೂ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಮಾತನಾಡಿ, ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು. ಪ್ರದೀಪ್ ಕುಮಾರ್ ಶೆಟ್ಟಿ ಇವರು ಸಮಾಜಮುಖಿ ಕಾರ್ಯಗಳ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ನಿರಂತರವಾಗಿ ಸಹಕಾರ ನೀಡುವುದಾಗಿ ಅವರು ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳ ಮುಖದಲ್ಲಿ ಸಂತಸ ಮೂಡಿಸುವುದರ ಜೊತೆಗೆ ಶಿಕ್ಷಣದತ್ತ ಇನ್ನಷ್ಟು ಆಸಕ್ತಿ ಮತ್ತು ಆತ್ಮವಿಶ್ವಾಸ ಬೆಳೆಸುವಲ್ಲಿ ಮಹತ್ವದ ಹೆಜ್ಜೆಯಾಯಿತು.

LEAVE A REPLY

Please enter your comment!
Please enter your name here