ಸಂಸದೀಯ ಸ್ಥಾಯಿ ಸಮಿತಿ ಅಧ್ಯಯನ ಪ್ರವಾಸ: ಸಿಕ್ಕಿಂ ರಾಜ್ಯಪಾಲ ಓಂ ಪ್ರಕಾಶ್ ಮಾಥುರ್ ಅವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ

0
29

ಕುಂದಾಪುರ ಮಿರರ್ ಸುದ್ದಿ…

ಬೈಂದೂರು : ಗೃಹ ವ್ಯವಹಾರಗಳ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಅಧ್ಯಯನ ಪ್ರವಾಸದ ಅಂಗವಾಗಿ ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂ ರಾಜ್ಯಗಳ ಅಧಿಕೃತ ಪ್ರವಾಸದಲ್ಲಿರುವ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಅವರು ಸಿಕ್ಕಿಂನ ಗೌರವಾನ್ವಿತ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಜಿ ಅವರನ್ನು ಇಂದು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಿಕ್ಕಿಂ ರಾಜ್ಯದ ಪ್ರಾಕೃತಿಕ ಸೌಂದರ್ಯದಷ್ಟೇ ಅಪ್ಯಾಯಮಾನವಾದ ಆತ್ಮೀಯ ಆತಿಥ್ಯಕ್ಕೆ ಘನತೆವೆತ್ತ ರಾಜ್ಯಪಾಲರಿಗೆ ಗೌರವಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

ಗೃಹ ವ್ಯವಹಾರಗಳ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಸಕ್ರಿಯ, ಹಿರಿಯ ಸದಸ್ಯರಾಗಿರುವ ಸಂಸದ ಬಿ.ವೈ.ರಾಘವೇಂದ್ರ ಅವರು, ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರಾದ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ, ಮೂರು ದಿನಗಳ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಅಧ್ಯಯನ ಪ್ರವಾಸದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಆಯಾ ರಾಜ್ಯಗಳ ಹಿರಿಯ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚೆಗಳನ್ನು ನಡೆಸಿ, ತಮ್ಮ ಸಂಸದೀಯ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಮುಖ ವಿಷಯಗಳ ಕುರಿತು ಪ್ರತ್ಯಕ್ಷ ಮಾಹಿತಿ ಮತ್ತು ಒಳನೋಟಗಳನ್ನು ಪಡೆದುಕೊಳ್ಳುವ ಅಧಿಕೃತ ಕಾರ್ಯಕ್ರಮದ ಭಾಗವಾಗಿ ಸಮಿತಿ ಅಧ್ಯಯನ ಪ್ರವಾಸ ಕೈಗೊಂಡಿದೆ.

LEAVE A REPLY

Please enter your comment!
Please enter your name here