ಕೋಟ- ನೆರೆ ಸಂತ್ರಸ್ತರಿಗೆ ಕಿಟ್ ವಿತರಣೆ

0
489

ಕುಂದಾಪುರ ಮಿರರ್ ಸುದ್ದಿ…

ಕೋಟ : ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಗಿಳಿಯಾರು ನೆರೆ ಸಂತ್ರಸ್ತರಿಗೆ ಕೋಟ ಗ್ರಾಮಪಂಚಾಯತ್ ಹಾಗೂ ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟ ವತಿಯಿಂದ ಜಂಟಿಯಾಗಿ ದಿನಸಿ ಕಿಟ್ ವಿತರಿಸಿದರು.

ಸಂತ್ರಸ್ತರಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮ ಎಂ ರಾವ್ ದಿನಸಿ ಕಿಟ್ ವಿತರಿಸಿ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ನೆರೆ ಪೀಡಿತ ಪ್ರದೇಶಗಳನ್ನು ಅಧ್ಯಯನ ಮಾಡಿದ್ದೇನೆ ಒಳ್ಳೆಯ ಮುಂಜಾಗೃತ ಕ್ರಮಗಳ ಜೊತೆ ಕಿಟ್ ವಿತರಿಸಿ ಮಾನವೀಯ ಕೈಗೊಂಡಿದ್ದಾರೆ. ಈ ರೀತಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸುವ ಮನೋಭಾವನೆಯನ್ನು ಪ್ರಶಂಸಿಸಿದರು.
ಈ ವೇಳೆ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ,ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here