ಕೋಟೇಶ್ವರ :ಪ್ರಿಮ್‌ರೋಸ್ ಫೌಂಡೇಶನ್ ಶಾಲೆಯಲ್ಲಿ ವೈದ್ಯರ ದಿನಾಚರಣೆ ಆಚರಣೆ

0
79

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಚಿರಂತನ ಶಿಕ್ಷಣ ಸಂಸ್ಥೆಗಳ ಅಂಗ ಸಂಸ್ಥೆಯಾದ ಪ್ರಿಮ್‌ರೋಸ್ ಫೌಂಡೇಶನ್ ಶಾಲೆಯಲ್ಲಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ರಶ್ಮಿ ಅವರು ಮಕ್ಕಳಿಗೆ ಆರೋಗ್ಯಕರ ಆಹಾರ, ವೈಯಕ್ತಿಕ ಸ್ವಚ್ಛತೆ, ಉತ್ತಮ ಅಭ್ಯಾಸಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಸರಳವಾಗಿ ಮತ್ತು ಪ್ರಾಯೋಗಿಕವಾಗಿ ತಿಳಿಸಿದರು. ಮಕ್ಕಳೊಂದಿಗೆ ಸಂವಾದ ನಡೆಸಿ, ಆರೋಗ್ಯ ಕಾಪಾಡಿಕೊಳ್ಳುವ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವಂತೆ ಪ್ರೇರೇಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕಿ ಚಿಂತನಾ ರಾಜೇಶ್ ವಹಿಸಿದ್ದರು.

ಈ ಸಂದರ್ಭದಲ್ಲಿ ಅಕಾಡೆಮಿಕ್ ಲೀಡ್ ವಿಲ್ಮಾ ಡಿ’ಸಿಲ್ವಾ ಹಾಗೂ ಪ್ರಾಂಶುಪಾಲೆ ವಿನುತಾ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮಂಜುಳಾ ನಿರೂಪಿಸಿದರು. ರೇಷ್ಮಾ ಅತಿಥಿಗಳನ್ನು ಸ್ವಾಗತಿಸಿದರು. ಶ್ರೇಯಾ ವಂದಿಸಿದರು.

LEAVE A REPLY

Please enter your comment!
Please enter your name here