ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರದ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭವು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ರವರ ಅಧ್ಯಕ್ಷತೆಯಲ್ಲಿ ಮತ್ತು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ.ರಾಧಾಕೃಷ್ಣ ಶೆಣೈ ಹಾಗೂ ಖಜಾಂಚಿ ಕೆ.ಲಕ್ಷ್ಮೀನಾರಾಯಣ ಶೆಣೈಯವರ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಚಂದ್ರ ನಾಯ್ಕ್, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ಬೈಂದೂರು ಮತ್ತು ಕುಂದಾಪುರ ತಾಲೂಕು ಹಾಗೂ ಸುಮಾ ಉಮೇಶ್ ಪುತ್ರನ್ ಚಿನ್ಮಯಿ ಆಸ್ಪತ್ರೆ ಇವರು ಆಗಮಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರು, ಉಪಪ್ರಾಂಶುಪಾಲರು , ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ಬಾಯಿ ಯವರು ಕಾರ್ಯಕ್ರಮವನ್ನು ನಿರೂಪಿಸಿ, ಸಂಸತ್ತಿನ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
