ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮುರುಗನ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೊದ್ಧಾರಕ್ಕೆ ರೂ.2 ಲಕ್ಷದ ನೆರವು

0
70

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕೋಟೇಶ್ವರದ ಮಾರ್ಕೋಡುವಿನಲ್ಲಿರುವ ಮುರುಗನ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪೂಜ್ಯ ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ರೂ.2 ಲಕ್ಷ ಅನುದಾನವನ್ನು ಮಂಜೂರು ಮಾಡಿದ್ದು, ತಾಲೂಕು ಯೋಜನಾಧಿಕಾರಿ ಸುಧೀರ್‌ ಹಂಗಳೂರುರವರು ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ವ್ಯವಸ್ಥಾಪನಾ ಸಮಿತಿಯವರಿಗೆ ಹಸ್ತಾಂತರಿಸಿದರು.

ಈ ಬಗ್ಗೆ ಸಂದರ್ಭ ಮಾತನಾಡಿದ ಯೋಜನಾಧಿಕಾರಿಯವರು ಗ್ರಾಮದಲ್ಲಿ ನೆಮ್ಮದಿಯ ವಾತಾವರಣ ಇರಬೇಕೆಂದರೆ ಎಲ್ಲಾ ಕಾರ್ಯಗಳು ನಿರ್ವೀಘ್ನವಾಗಿ ಜರುಗಲು ಆಧ್ಯಾತ್ಮಿಕ ಹಾಗೂ ಶ್ರದ್ಧಾ ಕೇಂದ್ರಗಳಾಗಿರುವ ದೇವಸ್ಥಾನಗಳು ಅತ್ಯಗತ್ಯವೆಂದು ಮನಗಂಡಿರುವ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧರ್ಮೋತ್ಥಾನ ಟ್ರಸ್ಟ್‌ ಮೂಲಕ ದೇಣಿಗೆಯನ್ನು ಒದಗಿಸಿಕೊಡುತ್ತಿದ್ದಾರೆ. ಇದಲ್ಲದೇ ಯೋಜನೆಯ ಸದಸ್ಯರ ಹಾಗೂ ಸ್ಥಳೀಯರ ಸಹಕಾರದಿಂದ ಗ್ರಾಮದ ದೇವಸ್ಥಾನದ, ಚರ್ಚ್‌, ಮಸೀದಿಗಳ ಸ್ವಚ್ಛತೆಯನ್ನು ವಾರ್ಷಿಕವಾಗಿ 02 ಬಾರಿ ಮಾಡಲಾಗುತ್ತಿದ್ದು, ಕಸಗಳ ವಿಲೇವಾರಿಗೆ ಕಸದ ಡಬ್ಬಿಯನ್ನು ಕೂಡ ಒದಗಿಸಿಕೊಡಲಾಗಿದ್ದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತೆಗೆ ಪ್ರಮುಖ ಆದ್ಯತೆ ನೀಡಲಾಗಿರುತ್ತದೆ.

ಕೇವಲ ತಮ್ಮ ಸ್ವಾರ್ಥಕ್ಕಾಗಿ ಜೀವನವನ್ನು ಸವಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ಇಡೀ ಗ್ರಾಮದ ಧಾರ್ಮಿಕ ಕಾರ್ಯಗಳಿಗೆಂದು ಸ್ಥಳೀಯ ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಿರುವ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರ ಕಾರ್ಯ ಶ್ಲಾಘನೀಯವಾದದ್ದು ಎಂದು ತಿಳಿಸಿದರು. ತಾಲೂಕಿನಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕಳೆದ 05 ವರ್ಷಂದೀಚೆಗೆ ಒಟ್ಟು 92 ಲಕ್ಷದ 35 ಸಾವಿರ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒದಗಿಸಿಕೊಡಲಾಗಿದ್ದು, ಇದು ನೆರವು ನೀಡುತ್ತಿರುವ 38 ನೇ ದೇವಸ್ಥಾನವಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಮುರುಗನ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ಶೆಟ್ಟಿ, ಗೋಪಾಡಿ ಚಿಕ್ಕು ಅಮ್ಮ ಸಪರಿವಾರ ದೇವಸ್ಥಾನದ ಅದ್ಯಕ್ಷರಾದ ಶ್ರೀನಿವಾಸ ಕುಂದರ್‌, ತಾಲೂಕು ಜನಜಾಗೃಥಿ ವೇದಿಕೆಯ ಅಧ್ಯಕ್ಷರಾದ ಸುಬ್ರಮಣ್ಯ ಶೆಟ್ಟಿ, ದೇವಸ್ಥಾನದ ಪ್ರಧಾನ ಅರ್ಚಕರಾದ ಮುರುಗನ್‌ ಸ್ವಾಮಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಂಕರ ಶೆಟ್ಟಿ, ಸುರೇಶ್‌ ಜೋಗಿ, ಜಯರಾಮ ಶೆಟ್ಟಿ, ವಿಷ್ಣುದಾಸ ಭಟ್‌, ಸುಬ್ಬಣ್ಣ ಶೆಟ್ಟಿ, ರಂಗನಾಥ ಭಟ್, ರತ್ನಾಕರ, ಕೋಟೇಶ್ವರ ಎ ಒಕ್ಕೂಟದ ಅಧ್ಯಕ್ಷರಾದ ಕೆ ರಾಮ, ಕೋಟೇಶ್ವರ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಶಾಂತ ಗೋಪಾಲಕೃಷ್ಣ, ವಲಯ ಮೇಲ್ವಿಚಾಕರಾದ ರೋಹಿಣಿ ಎ ಎನ್‌, ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ ಗೌಡ, ಸ್ಥಳೀಯ ಸೇವಾಪ್ರತಿನಿಧಿಗಳಾದ ಜಯಂತಿ ಶೆಟ್ಟಿ ಹಾಗೂ ಸುಶೀಲಾ ಕೆ ಎಸ್‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here