ಉಡುಪಿ ಜಿಲ್ಲೆಯಲ್ಲಿ ನಾಳೆ(ಜುಲೈ 11) ಶಾಲೆಗಳಿಗೆ ರಜೆ ಘೋಷಣೆ

0
3151

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 11ರ ಸೋಮವಾರದಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಪಿಯುಸಿ, ಸೇರಿದಂತೆ ಕಾಲೇಜುಗಳಿಗೆ ರಜೆ ಘೊಷಣೆ ಮಾಡಿಲ್ಲ. ನಾಳೆ ಪಿಯುಸಿ ಸೇರಿದಂತೆ ಕಾಲೇಜುಗಳು ಪುನರಾರಂಭಗೊಳ್ಳಲಿದೆ. ಅಂಗನವಾಡಿ, ಖಾಸಗಿ/ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಣೆಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here