ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಮೋಘ ಸಾಧನೆ

0
7

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ಇವರು ಜಂಟಿಯಾಗಿ ಆಯೋಜಿಸಿದ ಬೈಂದೂರು ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು 10 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಹಲವು ಪ್ರಶಸ್ತಿಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿರುತ್ತಾರೆ.

ವಿದ್ಯಾರ್ಥಿ ಗಳ ಈ ಅಮೋಘ ಸಾಧನೆ ಗೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು,ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ,ಪೋಷಕರು ಮತ್ತು ಊರಿನವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here