ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಔಷಧಿಗಳು ದೊರೆಯುವಂತೆ ಮಾಡುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜನೌಷಧಿ ಮಾಹಿತಿ ಕಾರ್ಯಾಗಾರವು ಕುಂಭಾಶಿಯಲ್ಲಿ ನಡೆಯಿತು.
ಲಯನ್ಸ್ ಕ್ಲಬ್ 317C, ಪ್ರಾಂತ IIರ ವ್ಯಾಪ್ತಿಯ 12 ಲಯನ್ಸ್ ಕ್ಲಬ್‌ಗಳು, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಗ್ರಾಮ ಪಂಚಾಯಿತಿ ಕುಂಭಾಶಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಂಭಾಶಿ ಹಾಗೂ ಮಕ್ಕಳ ಮನೆ ಕುಂಭಾಶಿ ಇವರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಶ್ರೀರಮಣ ಉಪಾಧ್ಯಾಯರು, ಅನುವಂಶಿಕ ಆಡಳಿತ ಧರ್ಮದರ್ಶಿಗಳು, ಶ್ರೀ ವಿನಾಯಕ ದೇವಸ್ಥಾನ, ಆನೆಗುಡ್ಡೆ, ಕುಂಭಾಶಿ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನೌಷಧಿ ಔಷಧಿಗಳ ಕುರಿತು ಸಾರ್ವಜನಿಕರಲ್ಲಿ ಇನ್ನಷ್ಟು ಸರಿಯಾದ ಮಾಹಿತಿ ಹಾಗೂ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್‌ಗಳು ಹಾಗೂ ಇತರ ಸೇವಾ ಸಂಸ್ಥೆಗಳು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದರು. ಜನೌಷಧಿ ಔಷಧಿಗಳು ಇತರ ಬ್ರಾಂಡೆಡ್ ಔಷಧಿಗಳಿಗಿಂತ ಗುಣಮಟ್ಟದಲ್ಲಿ ಯಾವುದೇ ರೀತಿಯಲ್ಲೂ ಕಡಿಮೆಯಿಲ್ಲ. ಸಂಬಂಧಪಟ್ಟ ಇಲಾಖೆಗಳ ಮೂಲಕ ಔಷಧಿಗಳ ಗುಣಮಟ್ಟವನ್ನು ಖಚಿತಪಡಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರದ ಸಭಾಪತಿ ಜಯಕರ ಶೆಟ್ಟಿ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿರುವ ಜನೌಷಧಿ ಕೇಂದ್ರದಲ್ಲಿ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ವಿತರಿಸಲಾಗುತ್ತಿದೆ. ಜನೌಷಧಿ ಔಷಧಿಗಳ ಕುರಿತು ಸಾರ್ವಜನಿಕರು ಹಾಗೂ ರೋಗಿಗಳಲ್ಲಿ ವಿಶ್ವಾಸ ಮೂಡಿಸುವಲ್ಲಿ ಸಂಸ್ಥೆ ಯಶಸ್ವಿಯಾಗಿದೆ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರ, ಕುಂಭಾಶಿಯ ವೈದ್ಯಾಧಿಕಾರಿ ಡಾ. ರಾಘವೇಂದ್ರ ಹೆಬ್ಬಾರ್ ಮಾತನಾಡಿ, ಜನೌಷಧಿ ಕೇಂದ್ರಗಳಲ್ಲಿ ದೊರೆಯುವ ಔಷಧಿಗಳು ಉನ್ನತ ಗುಣಮಟ್ಟದ್ದಾಗಿದ್ದು, ವೈದ್ಯರ ಸಲಹೆಯಂತೆ ಯಾವುದೇ ಸಂಶಯ ಅಥವಾ ಹಿಂಜರಿಕೆಯಿಲ್ಲದೆ ಬಳಸಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಲಯನ್ ಸರಸ್ವತಿ ಜಿ. ಪುತ್ರನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಪಂಚಾಯಿತಿಯ ವಿವಿಧ ಕಾರ್ಯಕ್ರಮಗಳೊಂದಿಗೆ ಜೋಡಿಸಿಕೊಂಡು ನಡೆಸಲು ಸಹಕಾರ ನೀಡುವುದಾಗಿ ತಿಳಿಸಿದರು.
ಕುಂದಾಪುರ ಕೊರಗ ಶ್ರೇಯೋಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಕೆ. ಮಾತನಾಡಿ, ಕೊರಗ ಸಮುದಾಯದ ಆರೋಗ್ಯದ ದೃಷ್ಟಿಯಿಂದ ಇಂತಹ ಮಾಹಿತಿ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿದ್ದು, ಸಮುದಾಯದ ಹೆಚ್ಚಿನ ಜನರಿಗೆ ಇಂತಹ ಕಾರ್ಯಕ್ರಮಗಳ ಪ್ರಯೋಜನ ದೊರೆಯಬೇಕು ಎಂದರು. ಎಂಜಿನಿಯರ್ ರವೀಂದ್ರ ಕಾವೇರಿ ಶುಭ ಹಾರೈಸಿದರು.
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಪ್ರಾಂತೀಯ ಅಧ್ಯ್ಕಕ್ಷೆ ಸರಸ್ವತಿ ಜಿ ಪುತ್ರನ್ ವಹಿಸಿದ್ದರು, ರಮಾ ಬೋಳಾರ್ ಪ್ರಾರ್ಥಿಸಿದರು. ವಲಯಾಧ್ಯಕ್ಷ ಪ್ರವೀಣ್ ಹೆಗ್ಡೆ ಸ್ವಾಗತಿಸಿದರು..
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್‌ನ ಶಿವರಾಮ ಶೆಟ್ಟಿ, ಗಣೇಶ್ ಆಚಾರ್, ಸಮಾಜಸೇವಕ ಕೊರ್ಗಿ ವಿಠಲ ಶೆಟ್ಟಿ, ಕೊಂಕಣ ರೈಲ್ವೆ ಸಲಹಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್, ಮಹಿಳಾ ಹೋರಾಟಗಾರ್ತಿ ರಾಧಾ ದಾಸ್, ಗ್ರಾಮ ಪಂಚಾಯಿತಿ ಸದಸ್ಯೆ ಶೋಭಾ ಮೆಂಡನ್, ಲಯನ್ಸ್ ಹಿರಿಯರಾದ ಏಕನಾಥ್ ಬೋಳಾರ್, ರಮಾ ಬೋಳಾರ್, ಕೋಟೇಶ್ವರ ಲಯನ್ಸ್ ಕ್ಲಬ್ ಅಧ್ಯಕ್ಷೆ ಪ್ರೇಮಲತಾ ದಿನಕರ್, ಕೋಟ ಗಿಳಿಯಾರು ಕ್ಲಬ್ ಅಧ್ಯಕ್ಷ ಸುರೇಶ್ ಕಾರಂತ್, ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ವಿಜಯ ಶೆಟ್ಟಿ, ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಕಾರ್ಯದರ್ಶಿ ಸುಭಾಷ್ ಚಂದ್ರ ಶೆಟ್ಟಿ, ಖಜಾಂಜಿ ಸುಗುಣಾಕರ್ ಶೆಟ್ಟಿ, ಲಯನ್ಸ್ ಕ್ಲಬ್ ಕುಂದಾಪುರದ ಕಾರ್ಯದರ್ಶಿ ದಿನಕರ್ ಆರ್. ಶೆಟ್ಟಿ, ಕೋಶಾಧಿಕಾರಿ ಶಂಕರ್ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ,ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಕೋಶಾಧಿಕಾರಿ ಶುಭ ಶೇಟ್ ಸದಸ್ಯರಾದ ಗೀತಾಂಜಲಿ ನಾಯಕ್, ಪ್ರತಿಮಾ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಆಶಾ ಶಿವರಾಂ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.ಕಾರ್ಯಕ್ರಮ ವನ್ನು ದಿನಕರ್ ಶೆಟ್ಟಿ ನಿರೂಪಿಸಿದರು
ಲಯನ್ಸ್ ಸದಸ್ಯರು, ಸಾರ್ವಜನಿಕರು ಹಾಗೂ ಸ್ಥಳೀಯ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
