ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಚಿರಂತನ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಸಂಭ್ರಮದಿಂದ ಆಚರಿಸಲಾಯಿತು. ಪ್ರಥಮ ದರ್ಜೆ ಗುತ್ತಿಗೆದಾರರಾದ ಕಮಲ್ ಕಿಶೋರ್ ಹೆಗ್ಡೆ, ಮೊಳಹಳ್ಳಿ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಹಾಗೂ ಕೌನ್ಸಿಲಿಂಗ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಪ್ರಿಮ್ರೋಸ್ ಫೌಂಡೇಶನ್ ಸ್ಕೂಲ್‌ನ ವಿದ್ಯಾರ್ಥಿಗಳಿಂದ ಬಹುಭಾಷಾ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕಿ ಸುಲೋಚನಾ ಸರ್ವೋತ್ತಮ ಶೆಟ್ಟಿ,ನಿರ್ದೇಶಕಿ ಡಾ. ಚಿಂತನಾ ರಾಜೇಶ್, ಅಕಾಡೆಮಿಕ್ ಲೀಡ್ ಶ್ರೀಮತಿ ವಿಲ್ಮಾ ಡಿ ಸಿಲ್ವಾ ಹಾಗೂ ವಿನೋದಾ ಶೆಟ್ಟಿ ಕರಾಣಿಮನೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆ ಪ್ರಾಂಶುಪಾಲೆ ವಿನುತ ಬಿ ಶೆಟ್ಟಿ ನೆರವೇರಿಸಿದರು.
