ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆ- 80ನೇ ಸ್ವಾತಂತ್ರ್ಯೋತ್ಸವ ಆಚರಣೆ

0
11

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗರವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು. ವಿದ್ಯಾರ್ಥಿಗಳಾದ ಮೇಘನಾ ಶ್ಯಾನುಬಾಗ್ ಹಾಗೂ ವಂಶಿಕ ವಿಶ್ವಾಸ್ ಪ್ರಭು ಇವರು ಸ್ವಾತಂತ್ರ್ಯೋತ್ಸವದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜರವರು ಉಪಸ್ಥಿತರಿದ್ದರು.

ಪ್ರೌಢ ಶಾಲಾ ವಿಭಾಗದ ಸಹಶಿಕ್ಷಕಿ ಪೂರ್ಣಿಮಾ ಶೇಟ್ ಸರ್ವರನ್ನು ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಸಹ ಶಿಕ್ಷಕಿ ವೀಣಾ ಪೂಜಾರಿಯವರು ಧನ್ಯವಾದ ಸಮರ್ಪಣೆಗೈದರು. ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಸಹಶಿಕ್ಷಕಿ ಮೇಧಾ ಪೈಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸುಸಂದರ್ಭದಲ್ಲಿ ಎನ್.ಸಿ.ಸಿ, ಸ್ಕೌಟ್ಸ್ –ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here