ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರದ ಕಾರ್ಯನಿರತ ಪತ್ರಕರ್ತನ ಮೇಲೆ ಸರಕಾರಿ ಆಸ್ಪತ್ರೆಯ ವೈದ್ಯ ಹಲ್ಲೆ ನಡೆಸಿದ ಘಟನೆ ಕುಂದಾಪುರ ಹೋಟೆಲ್‍ನಲ್ಲಿ ಶುಕ್ರವಾರ ಬೆಳಿಗ್ಗೆ ನೆಡೆದಿದೆ.
ಕನ್ನಡ ಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ತನ್ನ ಪತ್ನಿ ಹಾಗೂ ಸ್ನೇಹಿತರೊಂದಿಗೆ ಕುಂದಾಪುರದ ಶರೋನ್ ಹೋಟೆಲ್‍ನಲ್ಲಿ ಚಹಾ ಕುಡಿಯುತ್ತಿರುವ ಸಂದರ್ಭ ಹೋಟೆಲ್ ಆಗಮಿಸಿದ ಈ ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸಾ ವೈದ್ಯರಾಗಿ, ಪ್ರಸ್ತುತ ಕಾರ್ಕಳಕ್ಕೆ ವರ್ಗಾವಣೆಗೊಂಡಿರುವ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಪತ್ರಕರ್ತ ಶ್ರೀಕಾಂತ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ಈ ಸಂದರ್ಭ ಹಲ್ಲೆ ತಪ್ಪಿಸಲು ಶ್ರೀಕಾಂತ್ ಪತ್ನಿ ಹಾಗು ಸ್ನೇಹಿತರು ಪ್ರಯತ್ನಿಸಿದ್ದಾರೆ. ಆದರೂ ಕೂಡಾ ವೈದ್ಯ ಹಲ್ಲೆ ಮುಂದುವರಿಸಿದ್ದಾನೆ. ಘಟನೆ ಹೋಟೆಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹಲ್ಲೆಯಿಂದ ಗಾಯಗೊಂಡಿರುವ ಶ್ರೀಕಾಂತ್ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾ.ಮಹೇಂದ್ರ ಕುಮಾರ್ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಅವರ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ದೂರುಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಶ್ರೀಕಾಂತ್ ಪತ್ರಿಕೆಯಲ್ಲಿ ವರದಿ ಮಾಡಿದ್ದರು. ಆ ಬಳಿಕ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಕಾರ್ಕಳಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ದ್ವೇಷ ಸಾಧಿಸಿದ ಡಾ.ಮಹೇಂದ್ರ ಕುಮಾರ್ ಇಂದು ಬೆಳಿಗ್ಗೆ ಹೋಟೆಲ್‍ನಲ್ಲಿ ಹಲ್ಲೆ ನಡೆಸಿದ್ದಾನೆ.
