ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ಶಸ್ತ್ರ ಚಿಕಿತ್ಸಾ ವೈದ್ಯ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ಅಧ್ಯಕ್ಷ
ನಾಗರಾಜ ರಾಯಪ್ಪನ ಮಠ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ
