ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸರಕಾರಿ ಶಾಲೆಗಳ ಉಳಿವಿಗೆ ಎಸ್ ಡಿ ಎಂ ಸಿ ಸಮಿತಿಗಳನ್ನು ಸಬಲೀಕರಣ ಗೊಳಿಸುವ ಉಡುಪಿ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಕಾರ್ಯ ಶ್ಲಾಘನೀಯ ಎಂದು ಹಾವೇರಿ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿಗಳಾದ ಮಹದೇವಪ್ಪ ಎಂ. ಡಿ ಯವರು ಹೇಳಿದರು.
ಅವರು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ರಿ.ಉಡುಪಿ ಜಿಲ್ಲಾ ಘಟಕ, ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಹಾವೇರಿ ಜಿಲ್ಲಾ ಘಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ ಹಾವೇರಿ, ಕರ್ನಾಟಕ ಶಿಕ್ಷಣ ಸಮನ್ವಯ ಮತ್ತು ತರಬೇತಿ ಸಂಸ್ಥೆ( ರಿ.) ಇವರ ಸಹಯೋಗದೊಂದಿಗೆ ಹಾವೇರಿ ಕ್ಷೇತ್ರ ಶಿಕ್ಷಣ ಸಮನ್ವಯಾಧಿ ಕಾರಿಗಳ ಕಚೇರಿಯ ತರಬೇತಿ ಹಾಲ್ ನಲ್ಲಿ ಉಡುಪಿ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯಿಂದ ತಾಲೂಕು ಮಟ್ಟದ ಸರಕಾರಿ ಶಾಲೆಗಳ ಎಸ್ ಡಿ ಎಂ ಸಿ ಸದಸ್ಯರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿ, ಮಕ್ಕಳ ಶಿಕ್ಷಣ ಪ್ರಾಥಮಿಕ ಹಂತದಲ್ಲಿರುವಾಗಲೇ ಕಾಲೇಜು ಶಿಕ್ಷಣದ ನಂತರ ವೃತ್ತಿಪರ ಶಿಕ್ಷಣಕ್ಕೆ ಸಂಬಂಧಿಸಿದಂತೆ
ಪೋಷಕರಿಗೆ ಅರಿವಿರಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರುವಲ್ಲಿ ಶಿಕ್ಷಕರೊಂದಿಗೆ ಎಸ್ ಡಿ ಎಂ ಸಿ, ಪೋಷಕರು ಮತ್ತು ಸಮುದಾಯ ಕೈಜೋಡಿಸಿದಾಗ ಮಾತ್ರ ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯ, ಹಾಗೆಯೇ ಎಸ್ ಡಿ ಎಂ ಸಿ ಸದಸ್ಯರು ಕಾನೂನಾತ್ಮಕ ಸಮಿತಿಯ ಸದಸ್ಯರಾಗಿದ್ದು ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ತರಬೇತಿಯ ಮೂಲಕ ಚೆನ್ನಾಗಿ ತಿಳಿದುಕೊಂಡು ನಿರಂತರವಾಗಿ ಮಾಸಿಕ ಸಭೆಗಳಲ್ಲಿ ಪಾಲ್ಗೊಂಡು ಶಾಲೆಯ ಅಭಿವೃದ್ಧಿಯಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿ ಕೊಂಡಾಗ ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದುವುದರೊಂದಿಗೆ ಎಲ್ಲಾ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುವುದರೊಂದಿಗೆ ತಾಲೂಕಿನ ಇನ್ನಷ್ಟು ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ನಿರ್ದೇಶಕರು, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ
ಸರಕಾರಿ ಶಾಲೆಗಳಲ್ಲಿ ಶಿಕ್ಷಕರೊಂದಿಗೆ ಎಸ್ ಡಿ ಎಂ ಸಿ ಮತ್ತು ಪೋಷಕರು ಕೈಜೋಡಿಸಿದಾಗ ಮಾತ್ರ ನಮ್ಮ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಮೌಲ್ಯಾಧಾರಿತವಾದ ಶಿಕ್ಷಣದೊಂದಿಗೆ ಉತ್ತಮ ಫಲಿತಾಂಶ ಬರಲು ಸಾಧ್ಯವಿದೆ, ಈಗಾಗಲೇ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಎಸ್ ಡಿ ಎಂ ಸಿ ಸದಸ್ಯರಿಗೆ ತರಬೇತಿಗಳನ್ನು ನೀಡಲಾಗಿದ್ದು , ಹಾವೇರಿ ಜಿಲ್ಲೆಯಲ್ಲಿ ಈಗಾಗಲೇ ತರಬೇತಿ ಪಡೆದಂತ ಸದಸ್ಯರು ಇನ್ನಷ್ಟು ಸರಕಾರಿ ಶಾಲೆಗಳ ಎಸ್ ಡಿ ಎಮ್ ಸಿ ಸದಸ್ಯರಿಗೆ ತರಬೇತಿ ನೀಡುವ ಮೂಲಕ ಅವರು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದಾಗ ಎಸ್ ಡಿ ಎಂ ಸಿ ಸಮಿತಿ ಗಳು ಸಬಲೀಕರಣಗೊಂಡು ತನ್ಮೂಲಕವಾಗಿ ಹಳೆ ವಿದ್ಯಾರ್ಥಿಗಳು, ದಾನಿಗಳು ಹಾಗೂ ಸಮುದಾಯವನ್ನು ಆ ಶಾಲೆಯೊಳಗೆ ತಂದಾಗ ಮಾತ್ರ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಉತ್ತಮ ದಾಖಲಾತಿಯೊಂದಿಗೆ ಅತ್ಯುತ್ತಮ ಫಲಿತಾಂಶ ಸಿಗಲು ಸಾಧ್ಯ ಎಂದರು,
ಹಾವೇರಿ ಜಿಲ್ಲಾ ವಿದ್ಯಾಂಗ (ಆಡಳಿತ) ಉಪನಿರ್ದೇಶಕರಾದ ಮೋಹನ್ ದಂಡಿನವರ್ ಮಾರ್ಗದರ್ಶನದಲ್ಲಿ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ. ಶ್ರೀನಿವಾಸ್ ರವರ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿಗಳು ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಸರಕಾರಿ ಶಾಲೆಗಳ ಎಸ್ ಡಿ ಎಂ ಸಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು,.
ರಾಜ್ಯಮಟ್ಟದ ತರಬೇತಿದಾರರು ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಎಸ್. ವಿ,ನಾಗರಾಜ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿದರು,
ಉಡುಪಿ ಜಿಲ್ಲಾ ಘಟಕದ ಪ್ರತಿನಿಧಿಗಳಾದ ಅಶ್ವಥ್ ಕುಮಾರ್ ಆಶಯ ಗೀತೆ ಹಾಡಿದರು. ಸಾಧಿಕ್ ಮಾವಿನಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ಪಾಕ್ ಮೂಡು ಗೋಪಾಡಿ ಧನ್ಯವಾದ ಸಮರ್ಪಿಸಿದರು, ಹಾವೇರಿ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿಯ ಬಿ ಆರ್ ಪಿ ವೀಣಾ ಶ್ರೀಧರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು,