ಟೇಬಲ್ ಟೆನ್ನಿಸ್ ಸ್ಪರ್ಧೆ; ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

0
13

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಶಾರದಾ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಹುಡುಗಿಯರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದಿದ್ದಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆ:
ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಯೋಲಾ ಕಾರ್ವಲ್ಲೋ ಶ್ರೇಷ್ಠ ಸಾಧನೆಯ ಮೂಲಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮೌರಿಸ್ ಕಾರ್ವಲ್ಲೋ ಹಾಗೂ ಮಾಯಾ ಎಂ ಕಾರ್ವಲ್ಲೋ ದಂಪತಿಯ ಪುತ್ರಿ

ಹಾಗೇ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಶ್ರಾವ್ಯ ಶೆಟ್ಟಿ ಮತ್ತು ಅನುಷ್ಕಾ .ಎನ್ ಕಾಲೇಜಿನ ಟೇಬಲ್ ಟೆನ್ನಿಸ್ ತಂಡದಲ್ಲಿ ಪ್ರತಿನಿದಿಸಿ ದ್ವಿತೀಯ ಪ್ರಶಸ್ತಿ ಪಡೆದು ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ

ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರಂಜನ್‌ ಶೆಟ್ಟಿ ಅವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್‌ ಕುಮಾರ್ ಮತ್ತು ಲಲಿತಾ ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here