ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0
10

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜರವರು ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂಧಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here