ಆನೆಗುಡ್ಡೆಯಲ್ಲಿ ಪ್ರಧಾನಿ ಮೋದಿಜೀ ಜನ್ಮದಿನದ ಪ್ರಯುಕ್ತ ವಿಶೇಷ ಪ್ರಾರ್ಥನೆ

0
15

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬಿಜೆಪಿ ಕುಂಭಾಶಿ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜೀ ಅವರ ಜನ್ಮದಿನಾಚರಣೆ ಹಾಗೂ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಪಯಣದ ಪ್ರಯುಕ್ತ ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು, ನರೇಂದ್ರ ಮೋದಿಜೀ ಅವರ ಹುಟ್ಟುಹಬ್ಬದ ಸಂಭ್ರಮ ಹಾಗೂ 25 ವರ್ಷಗಳ ರಾಜಕೀಯ ಪಯಣವು ತ್ಯಾಗ, ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿತವಾದ ಪಯಣ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಆರಂಭಿಸಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕನಾಗಿ ಬೆಳೆದಿರುವ ಅವರ ಬದುಕು ನಮಗೆಲ್ಲರಿಗೂ ಪ್ರೇರಣೆ. ಅವರಿಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಆನೆಗುಡ್ಡೆ ವಿನಾಯಕನಲ್ಲಿ ಪ್ರಾರ್ಥಿಸಿದ್ದೇವೆ ಎಂದರು.
ಈ ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಮಂಡಲ ಉಪಾಧ್ಯಕ್ಷೆ ರೂಪಾ ಬಾಬು ಪೈ, ಕುಂಭಾಶಿ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಶೆಣೈ, ಪ್ರಮುಖರಾದ ರಾಜೇಶ್ ಕಾವೇರಿ, ಕಿರಣ್ ಪೂಜಾರಿ ತೆಕ್ಕಟ್ಟೆ, ಸುರೇಂದ್ರ ಕಾಂಚನ್ ಸಂಗಮ್, ಸೌರಭಿ ಪೈ, ಶ್ರೀಲತಾ ಸುರೇಶ್ ಶೆಟ್ಟಿ, ಶ್ವೇತಾ ಶ್ರೀನಿಧಿ ಉಪಾಧ್ಯಾಯ, ರೋಹಿಣಿ ಪೈ, ನಾಗರಾಜ್ ಆಚಾರ್ಯ, ವಿನೋದ್ ದೇವಾಡಿಗ, ಸಂತೋಷ್ ಶೆಟ್ಟಿ, ಪ್ರಸನ್ನ ಗೋಪಾಡಿ,,ಶೇಖರ್ ಮೊಗವೀರ,, ದ್ರುವ ತೆಕ್ಕಟ್ಟೆ,,ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here