ಬಾಲಕರ ತಂಡ ದ್ವಿತೀಯ ಸ್ಥಾನ – ಸರ್ವೇಶ್, ಪ್ರೀತಮ್, ಶ್ರೀಶಾಂತ್ ರಾಜ್ಯ ಮಟ್ಟಕ್ಕೆ ಆಯ್ಕೆ
ವಿವಿಧ ಕ್ರೀಡಾ ಪಂದ್ಯಾಟದಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ಉಡಪಿ ಜಿಲ್ಲೆಯ ಪ್ರತಿಷ್ಠಿತ ವಿದ್ಯಾ ಸಂಸ್ಥೆ
ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕೆ.ಪಿ.ಎಸ್ ಮುನಿಯಾಲು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ಬಾಲಕಿಯರ ತಂಡದ ನವ್ಯ ಜೆ.ಎಲ್, ಮೋನಿಷಾ ಸಿಂಚನ, ಸಿಂಚನಾ ಎಸ್ ಪೂಜಾರಿ, ಲಿಖಿತಾ, ನಾಗಶ್ರೀ ಅತ್ಯುತ್ತಮ ಸಾಧನೆಯೊಂದಿಗೆ ರಾಜ್ಯ ಮಟ್ಟಕ್ಕೆ ಲಗ್ಗೆ ಇಟ್ಟು ಕ್ರೀಡಾ ಸ್ಫೂರ್ತಿ ಮೆರೆದಿದ್ದಾರೆ
ಶಿಕ್ಷಣದ ಜೊತೆಗೆ ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
