ಯುವ ಜನೋತ್ಸವ-ರಸಪ್ರಶ್ನೆ ಸ್ಪರ್ಧೆ; ವಿದ್ಯಾರಣ್ಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

0
560

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್‌ಶನ್‌ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಯುವ ಜನೋತ್ಸವ-2026’ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಜಿತಾ ನಿಧಿ ಮತ್ತು ಪ್ರತೀಕ್‌ ಜಿ.ಎಂ. ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ವಿಜೇತರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಕುಮಾರ್‌ ಅವರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here