ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ 14ರ ವಯೋಮಾನದ ಹುಡುಗರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಈ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರತಿಭೆ ಮೆರೆದ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿಶ್ ಜಿ. ಹೆಗ್ಡೆ, ಲಿಯೋನ್ ಡಿ. ಹಾಗೂ ಎಂ. ಆತ್ಮಯ್ ಅವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಭಿನಂದಿಸಿದ್ದಾರೆ.
