ಕುಂದಾಪುರ: ಕೋಟೇಶ್ವರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ

0
10

ಕುಂದಾಪುರ ಮಿರರ್ ಸುದ್ದಿ….

ಕುಂದಾಪುರ :ಕೋಟೇಶ್ವರ ಪೇಟೆಯಲ್ಲಿರುವ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರಾಘವೇಂದ್ರ ಜೋಗಿ (48) ಅವರು ಹೆಮ್ಮಾಡಿ ಕಟ್ ಬೆಲ್ಲೂರಿನ ಮನೆ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 24 ರಂದು ವರದಿಯಾಗಿದೆ.

ಅವರು ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 18 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಇವರು ಕಟ್ ಬೆಲ್ಲೂರಿನಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಿದ್ದರು. ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ತನ್ನ ಸಾವಿಗೆ ತಾನೇ ಕಾರಣ ಎನ್ನುವುದಾಗಿ ಬರೆದಿರುವುದಾಗಿ ತಿಳಿದು ಬಂದಿದೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here