ನ.6ರಂದು ನಾಡೋಜ ಡಾ.ಜಿ ಶಂಕರ್ ರವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ – ಕೋಟದಲ್ಲಿ ನವೆಂಬರ್ 6ರಂದು ಗೌರವ ಪ್ರದಾನ ಕಾರ್ಯಕ್ರಮ

0
7

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2026ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ಇದೇ ಬರುವ ನವೆಂಬರ್ 6 ರಂದು ಶುಕ್ರವಾರ ಸಂಜೆ ಕೋಟದ ಮಾಂಗಲ್ಯಮಂದಿರದ ಎದುರಿನ ಮೈದಾನದಲ್ಲಿ ಜರಗಲಿದೆ.
ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ ಕಾರ್ಯಕ್ರಮ ಜರಗಲಿದ್ದು ಕನ್ನಡ ನಾಡು ಕಂಡ ಶ್ರೇಷ್ಠ ಸಮಾಜ ಸುಧಾರಕ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ ಶಂಕರ್ ಇವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಿದೆ. ಉದ್ಯಮ ಕ್ಷೇತ್ರದ ಸಾಧಕ ಕಂಡ್ಲೂರು ಕೆ.ಎನ್ ಶ್ರೀನಿವಾಸ ಜೋಗಿ ಬೆಂಗಳೂರು ಇವರಿಗೆ ವಿಶೇಷ ಪುರಸ್ಕಾರ, ಅಂತಾರಾಷ್ಟ್ರೀಯ ಕರಾಟೆಪಟು ವಿಜಯ ಪೂಜಾರಿ ಹರ್ತಟ್ಟು ಇವರಿಗೆ ವಿಶೇಷ ಅಭಿನಂದನೆ ಕಾರ್ಯಕ್ರಮಗಳು ನಡೆಯಲಿದೆ.ಎಂದು ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here