ಮೈಸೂರು ದಸರಾ ಕ್ರೀಡಾಕೂಟದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ಆಕಾಂಕ್ಷ ಜೋಗಿ ಚಿನ್ನದ ಸಾಧನೆ

0
9

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕುಸ್ತಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ಆಕಾಂಕ್ಷ ಜೋಗಿ ಚಿನ್ನದ ಪದಕ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾಳೆ. ತನ್ನ ಪ್ರತಿಭೆ ಹಾಗೂ ಪರಿಶ್ರಮದಿಂದ ಅಖಾಡದಲ್ಲಿ ಎದುರಾಳಿಗಳನ್ನು ಮಣಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ.
ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಛಲದೊಂದಿಗೆ ಕಾಲೇಜಿನಲ್ಲಿ ಕ್ರೀಡಾ ತರಬೇತಿ ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಭೋಧಕ, ಭೋದಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here