ಕುಂದಾಪುರ ಮಿರರ್ ಸುದ್ದಿ…

ಕೋಟೇಶ್ವರ :ಮಕ್ಕಳ ಸೃಜನಶೀಲತೆ, ಪ್ರತಿಭೆ ಮತ್ತು ಉತ್ಸಾಹವನ್ನು ಸಂಭ್ರಮಿಸಲು ನ.1ರಂದು ಕೋಟೇಶ್ವರದ ವಕ್ವಾಡಿಯ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಅದ್ದೂರಿಯಾದ ಗುರುಕುಲ ಕಾರ್ನಿವಲ್-ಮಕ್ಕಳ ಹಬ್ಬವನ್ನು ಆಯೋಜಿಸಲಾಗಿದೆ.
ಪ್ರತಿಯೊಂದು ಮಕ್ಕಳಲ್ಲಿಯೂ ಆತ್ಮವಿಶ್ವಾಸವನ್ನು ತುಂಬಿ ಕಲಿಕೆ ಹಾಗೂ ಇನ್ನಿತರ ಸಮಾಜಮುಖಿ ಚಿಂತನೆಗಳಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸ್ಪರ್ಧಾತ್ಮಕ ಜಗತ್ತನ್ನು ಎದುರುಯಿಸುವುದಕ್ಕೆ ಬೇಕಾದ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಮಾಡುವುದು ಈ ಗುರುಕುಲ ಕಾರ್ನಿವಲ್ 2.0 ನ ಉದ್ದೇಶವಾಗಿದೆ.
ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿ ಕೊಳ್ಳುವುದಕ್ಕೆ ಬೇಕಾದ ಹೊಸ ಹೊಸ ರೀತಿಯ ಹಾದಿಗಳನ್ನು ಪರಿಚಯಿಸಿ ಸಮಾಜಕ್ಕೂ ಮತ್ತು ಪೋಷಕರಿಗೂ ಹೆಮ್ಮೆ ತರುವ ಮಕ್ಕಳಾಗಿ ರೂಪುಗೊಳ್ಳಬೇಕೆಂಬ ಸದಾಶಿವನು ಹೊಂದಿದ ಈ ಮಕ್ಕಳ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಸಂಯೋಜಿಸಲಾಗಿದೆ.
ಈ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮವು 9.30ಕ್ಕೆ ಸರಿಯಾಗಿ ಉದ್ಘಾಟನೆಗೊಳ್ಳಲ್ಲಿದ್ದು, ಕನ್ನಡ ಚಿತ್ರರಂಗದ ಮೇರು ಪ್ರತಿಭೆ, ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ರವಿ ಬಸ್ರೂರು ರವರು ವಿಶೇಷ ಅತಿಥಿಯಾಗಿ ಆಗಮಿಸಿ ಕಾರ್ಯವನ್ನು ತಮ್ಮ ಅಮೃತ ಹಸ್ತದಿಂದ ಉದ್ಘಾಟಿಸಲಿದ್ದಾರೆ. ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಕ್ಕಳ ಹಬ್ಬದಲ್ಲಿ ಮಕ್ಕಳ ಮನ ರಂಜನೆಗಾಗಿ ಹಲವಾರು ಆಕರ್ಷಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬೇಬಿ ಶಾರ್ಕ್ ಟ್ಯಾಂಕ್, ಫೇಸ್ ಪೇಂಟಿಂಗ್, ಸ್ಪಾಟ್ ಪೋರ್ಟೆಟ್ ಮತ್ತು ಕ್ಯಾರಿಕೇಚರ್, ಕಾರ್ಟೂನ್ ಮ್ಯಾಸ್ಕಾಟ್,ಸ್ಪೀಕಿಂಗ್ ವಾಲ್ , ಥ್ಯಾಂಕ್ ಯು ಕಾರ್ಡ್ ಮತ್ತು ಮೂರರಿಂದ ಹನ್ನೆರಡು ವರ್ಷದ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ನೃತ್ಯ ವೈವಿಧ್ಯ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು, ಹೊರಗಿನ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವಿದೆ.ಹಾಗೆಯೇ ವಿಶೇಷವಾಗಿ ಗುರುಕುಲ ವಿದ್ಯಾರ್ಥಿಗಳ ಪೋಷಕರಿಂದ ಸ್ವಾದಕರವಾದ ಆಹಾರ ಮಳಿಗೆಗಳನ್ನು ಆಯೋಜಿಸಲಾಗಿದೆ.
ಈ ಮಕ್ಕಳ ಹಬ್ಬಕ್ಕೆ ಸಾರ್ವಜನಿಕರು, ಪೋಷಕರು ಹಾಗೂ ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕಾಗಿ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಕೆ ಸುಭಾಶ್ವಂದ್ರ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ವರನ್ನು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ -9482098367 ನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.
Email…. info@bhandyagurukula.com