ಟಿ.ಎ.ಪಿ.ಸಿ.ಎಂ.ಎಸ್. ವತಿಯಿಂದ ವರ್ಗಾವಣೆಗೊಂಡ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್‌ವರಿಗೆ ಗೌರವಾರ್ಪಣೆ

0
211

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಉಪವಿಭಾಗದಲ್ಲಿ ಸಹಾಯಕ ಕಮೀಷನರ್ ಆಗಿ ದಕ್ಷತೆಯಿಂದ ಕೆಲಸ ನಿರ್ವಹಿಸಿದ ರಶ್ಮಿ ಎಸ್.ಆರ್.ರವರಿಗೆ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಕುಂದಾಪುರ ಉಪ ವಿಭಾಗದಲ್ಲಿ ಕಳೆದ ಎರಡು ಅವಧಿಗಳಲ್ಲಿ ಉಪ ವಿಭಾಗಾಧಿಕಾರಿಯಾಗಿ ಕೆಲಸ ನಿರ್ವಹಿಸಿ, ಸಾರ್ವಜನಿಕರ ಪ್ರೀತಿ ವಿಶ್ವಾಸವನ್ನು ಗಳಿಸಿ, ಇದೀಗ ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿ ವರ್ಗಾವಣೆಯಾದ ಬಗ್ಗೆ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷರಾದ ಹೆಚ್. ಹರಿಪ್ರಸಾದ್ ಶೆಟ್ಟಿ ವಹಿಸಿ, ಶುಭ ಕೋರಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಎಂ. ಮಹೇಶ್ ಹೆಗ್ಡೆ ಶುಭ ಕೋರಿ ಮಾತನಾಡಿದರು.
ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್. ನ ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ನಿರ್ದೇಶಕರಾದ ಎಂ. ಮೋಹನದಾಸ್ ಶೆಟ್ಟಿ, ಆನಂದ ಬಿಲ್ಲವ, ಎಸ್. ಜಯರಾಮ ಶೆಟ್ಟಿ, ಪ್ರಭಾಕರ ಶೆಟ್ಟಿ ಜಡ್ಕಲ್, ಉಮೇಶ್ ಶೆಟ್ಟಿ ಕಲ್ಗದ್ದೆ, ಸದಾನಂದ ಬಳ್ಕೂರು, ಎ. ಕಿರಣ್ ಹೆಗ್ಡೆ ಅಂಪಾರು, ಪ್ರಭಾಕರ ಶೆಟ್ಟಿ ಕೆರಾಡಿ, ಸತೀಶ್ ಶೆಟ್ಟಿ ಕುಂದಾಪುರ. ರಕ್ಷಿತ್ ಶೆಟ್ಟಿ ಕಾಳಾವರ ಉಪಸ್ಥಿತರಿದ್ದರು.
ಸನ್ಮಾನವನ್ನು ಸ್ವೀಕರಿಸಿ ಶ್ರೀಮತಿ ರಶ್ಮಿಯವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here