ನ.5ರಂದು ಜನತಾ ಪಿಯ ಕಾಲೇಜ್ ಹೆಮ್ಮಾಡಿಯಲ್ಲಿ ಉಡುಪಿ ಜಿಲ್ಲೆಯ ಬಹುದೊಡ್ಡ ಶೈಕ್ಷಣಿಕ ಉತ್ಸವ ಜನತಾ ಆವಿಷ್ಕಾರ್ 2026 – ವ್ಯವಹಾರ ದಿನ

0
23

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಜನತಾ ಪಿಯು ಕಾಲೇಜ್ ಹೆಮ್ಮಾಡಿಯಲ್ಲಿ ನವೆಂಬರ್ 05 ಗುರುವಾರ ವ್ಯವಹಾರ ಮೇಳ ಜನತಾ ಆವಿಷ್ಕಾರ್ 2026 ವಿಜ್ಞಾನ, ವ್ಯವಹಾರ, ಸಾಂಸ್ಕೃತಿಕ ಸಂಗಮ ನಡೆಯಲಿದೆ.
ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ವಿದ್ಯಾರ್ಥಿಗಳೇ ವ್ಯವಹಾರ ಮಾಡುವುದರ ಮೂಲಕ ಶೈಕ್ಷಣಿಕ ಸಂಚಲನ ಮೂಡಿಸಲಿದ್ದಾರೆ.

ಅದ್ದೂರಿಯ ಉದ್ಘಾಟನಾ ಕಾರ್ಯಕ್ರಮ
ಪೂರ್ವಹ್ನ ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ವಿ.ವಿ.ವಿ. ಮಂಡಳಿ (ರಿ.)ಹೆಮ್ಮಾಡಿ ಇದರ ಅಧ್ಯಕ್ಷರಾದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ವಹಿಸಲಿದ್ದು, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.)ಉಡುಪಿ ಇದರ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಆದಾನಿ ಗ್ರೂಪ್, ಕರ್ನಾಟಕ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವರವರು ವ್ಯವಹಾರ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ. ಕುಂದರ್, ರಕ್ತದ ಆಪದ್ಭಾಂಧವ ಸತೀಶ್ ಸಾಲ್ಯಾನ್ ಮಣಿಪಾಲ. ಜನಸೇವಾ ಟ್ರಸ್ಟ್ ಪ್ರವರ್ತಕರಾದ ವಸಂತ ಗಿಳಿಯಾರ್,ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು
ಉಡುಪಿ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಾಮೂಹಿಕ ನೃತ್ಯ ಸ್ಪರ್ಧೆ, ಚಿತ್ರ ಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ವಿಜ್ಞಾನ ಮೇಳ, ಕಿರು ಪ್ರಹಸನ ಸ್ಪರ್ಧೆ ನಡೆಯಲಿದೆ.

ವೈಭವದ ಜನತಾ ಕಲಾಂಜಲಿ
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರತಿಷ್ಠಿತ ಕಲಾತಂಡಗಳಿಂದ ಹೋಳಿ ಕುಣಿತ, ಹೌoದೇರಾಯನ ವಾಲಗ, ಹುಲಿ ಹೆಜ್ಜೆ,ವಿವಿಧ ನೃತ್ಯ ತಂಡಗಳಿಂದ ನೃತ್ಯ ಪ್ರದರ್ಶನ, ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಸತೀಶ್ ಹೆಮ್ಮಾಡಿ ತಂಡದವರಿಂದ ಜಾದೂ ವಿಸ್ಮಯ ನಡೆಯಲಿದೆ.ಆಸಕ್ತರು ಈ ವ್ಯವಹಾರ ಮೇಳದಲ್ಲಿ ಭಾಗವಹಿಸಿ ಉತ್ಪನ್ನಗಳನ್ನು ಖರೀದಿಸಬಹುದು ಎಂದು ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಮೊಗವೀರ ತಿಳಿಸಿರುತ್ತಾರೆ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನ ಶಿಕ್ಷಣದ ನಡುವೆಯೇ ಸ್ವ ಉದ್ಯೋಗ, ವ್ಯವಹಾರ ಕೌಶಲ್ಯ ಬೆಳೆಸಿಕೊಳ್ಳಬೇಕು. ಕೇವಲ ಅಂಕ ಗಳಿಕೆ ಮಾತ್ರವಲ್ಲದೆ ವ್ಯಾವಹಾರಿಕ ಕೌಶಲ್ಯ, ವ್ಯವಹಾರ ಜ್ಞಾನ ಬೆಳೆಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಸನ್ನದ್ದರಾಗಬೇಕು ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಇವೊಂದು ಅವಕಾಶ ಕಲ್ಪಿಸಿದ್ದೇವೆ.ಈ ವ್ಯವಹಾರ ಮೇಳದಲ್ಲಿ ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ವಿದ್ಯಾರ್ಥಿಗಳೆ ನಡೆಸಲಿದ್ದಾರೆ – ಗಣೇಶ್ ಮೊಗವೀರ, ಪ್ರಾಂಶುಪಾಲರು ಜನತಾ ಪಿಯು ಕಾಲೇಜ್ ಹೆಮ್ಮಾಡಿ

LEAVE A REPLY

Please enter your comment!
Please enter your name here