ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು: ಪ್ರತಿಭಾ ಕಾರಂಜಿಯಲ್ಲಿ ಸಂಜಯ ಗಾಂಧಿ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ – 27 ಬಹುಮಾನಗಳೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆ!

0
192

ಕುಂದಾಪುರ ಮಿರರ್ ಸುದ್ದಿ…

ಅಂಪಾರು: ನವೆಂಬರ್ 12ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಡ್ಲೂರಿನಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅಂಪಾರು ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಒಟ್ಟು 27 ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ 10 ಪ್ರಥಮ, 8 ದ್ವಿತೀಯ ಹಾಗೂ 9 ತೃತೀಯ ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇವರಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆಗೆ ಮತ್ತಷ್ಟು ಹೆಮ್ಮೆಯ ಸಂಗತಿಯಾಗಿದೆ.
ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಅವರ ಪ್ರತಿಭೆ, ಪರಿಶ್ರಮ ಹಾಗೂ ತರಬೇತಿ ನೀಡಿದ ಶಿಕ್ಷಕರ ಮಾರ್ಗದರ್ಶನ ಕಾರಣವಾಗಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ ಮುಕ್ತಕಂಠದಿಂದ ಶ್ಲಾಘಿಸಿದೆ.
ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ (ರಿ.), ಅಂಪಾರಿನ ಅಧ್ಯಕ್ಷರು ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಶೈಕ್ಷಣಿಕ ಸಂಚಾಲಕ ಶ್ರೀ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಎಲ್ಲಾ ನಿರ್ದೇಶಕರು, ಆಡಳಿತಾಧಿಕಾರಿ ಶ್ರೀಮತಿ ಚೈತ್ರಾ ಯಡಿಯಾಳ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳು ಎಲ್ಲಾ ವಿಜೇತರನ್ನು ಅಭಿನಂದಿಸಿ, ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆ ಶಾಲೆಯ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿನ ಪ್ರಗತಿಗೆ ಸಾಕ್ಷಿಯಾಗಿದ್ದು, ಮುಂದಿನ ಹಂತದಲ್ಲಿಯೂ ಇನ್ನಷ್ಟು ಯಶಸ್ಸು ಗಳಿಸಲಿ ಎಂಬುದು ಎಲ್ಲರ ಆಶಯವಾಗಿದೆ.

LEAVE A REPLY

Please enter your comment!
Please enter your name here