ಕುಂದಾಪುರದಲ್ಲಿ ನ.22ರಂದು ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ -ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ

0
33

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಜಮೀಯತುಲ್ ಫಲಾಹ್ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಘಟಕದ ವತಿಯಿಂದ ಕರ್ನಾಟಕ ರಾಜ್ಯೋತ್ಸವ 2026–27ರ ಅಂಗವಾಗಿ ಹಾಗೂ ಮಕ್ಕಳ ದಿನಾಚರಣೆಯ ಸವಿನೆನಪಿಗಾಗಿ ನವೆಂಬರ್ 22ರಂದು ಮಧ್ಯಾಹ್ನ 2.30ಕ್ಕೆ ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಮೀಪದ ಯೂಸುಫಿಯ ಸಭಾಂಗಣದಲ್ಲಿ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಮಕ್ಕಳಿಗೆ ಪ್ರೀತಿ, ಮಮತೆ ಹಾಗೂ ವಾತ್ಸಲ್ಯದಿಂದ ಶಿಕ್ಷಣ ನೀಡುವುದರೊಂದಿಗೆ ಅವರಲ್ಲಿ ಶಿಸ್ತುಬದ್ಧತೆಯನ್ನು ಬೆಳೆಸಿ, ಶಿಕ್ಷಣದ ಜತೆಗೆ ಜೀವನ ಕೌಶಲ್ಯಗಳಿಗೆ ಒತ್ತು ನೀಡಿ, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರ ಸಾಧನೆಗೆ ವಿಶೇಷ ಪ್ರೋತ್ಸಾಹ ನೀಡಿದ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here