ಮಂಜುನಾಥ್ ಭಂಡಾರಿ ಅವರು ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ನೇಮಕ – ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಿಸಿದ ಕುಂದಾಪುರ ಯುವ ಕಾಂಗ್ರೆಸ್

0
35

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರನ್ನು ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ನೇಮಿಸಿದ್ದು, ಈ ಪ್ರಯುಕ್ತ ಹಾಗೂ ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸಂಖ್ಯೆಯಲ್ಲಿ ಜಯಗಳಿಸಿದ್ದರ ಪ್ರಯುಕ್ತ ಕುಂದಾಪುರ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಕುಂದಾಪುರ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿಜಿತ್ ಪೂಜಾರಿ ಹೇರಿಕುದ್ರು, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶೆಟ್ಟಿ ಕಾಳವಾರ ತಾಲೂಕು ಕೆಡಿಪಿ ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ, ಪುರಸಭಾ ನಿಕಟಪೂರ್ವ ಸದಸ್ಯರಾದ ಚಂದ್ರಶೇಖರ ಖಾರ್ವಿ, ಪ್ರಾಧಿಕಾರದ ಸದಸ್ಯರಾದ ಚಂದ್ರ ಅಮೀನ್, ಪುರಸಭೆ ನಾಮನಿರ್ದೇಶನ ಸದಸ್ಯರಾದ ಅಶೋಕ್ ಸುವರ್ಣ, ಸುನೀಲ ಪೂಜಾರಿ ಕೋಡಿ, ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸವಿತಾ ಬಿಲ್ಲವ ಮಾಜಿ ಉಪಾಧ್ಯಕ್ಷೆ ಗೀತಾ ಎಸ್, ಹಂಗಳೂರು ಗ್ರಾಮ ಪಂಚಾಯತ್ ಸದಸ್ಯರಾದ ರೋಶನ್ ಬರೆಟ್ಟೋ, ರವೀಂದ್ರ ನಾಯ್ಕ , ದಿವಾಕರ ಕುಲಾಲ್, ರವಿ ಕುಲಾಲ್ ಶಾರುಖ್ ಕೋಡಿ, ಸಾದೀಕ್ ಕೋಡಿ, ಸುಲೈಮಾನ್ ಕೋಡಿ, ಮುನಾಫ್ ಕೋಡಿ, ಪೈರುಶ್ ಗೋಪಾಡಿ, ರವೀಂದ್ರ ಶೆಟ್ಟಿ ಹೈಕಾಡಿ, ಅಜಯ್, ಅಮರ್, ಮನೋಜ್ ಕುಲಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here