ನೀಟ್ ಪರೀಕ್ಷೆ: ಸುಪ್ರಭ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ಸಾಧನೆ, ಪಲ್ಲವಿಗೆ 720ರಲ್ಲಿ 568 ಅಂಕ

0
557

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್‍ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಪ್ರಭ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ನೀಟ್ / ಸಿಇಟಿ ಅಕಾಡೆಮಿಯ ವಿದ್ಯಾರ್ಥಿನಿ ಪಲ್ಲವಿ 720ರಲ್ಲಿ 568 ಅಂಕಗಳಿಸುವುದರೊಂದಿಗೆ ಕುಂದಾಪುರ ತಾಲೂಕಿನಲ್ಲೇ ಶ್ರೇಷ್ಠ ಸಾಧನೆ ಗೈದಿದ್ದಾರೆ.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಅಂಗ ಸಂಸ್ಥೆಯಾಗಿರುವ ಸುಪ್ರಭ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯು ಸಿಇಟಿ / ನೀಟ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ಹೈದರಾಬಾದ್, ಮೂಡುಬಿದಿರೆ, ಮಂಗಳೂರು, ಮುಂಬೈ ಮುಂತಾದ ಭಾಗಗಳ ಅನುಭವಿ ಶಿಕ್ಷಕರಿಂದ ತರಬೇತಿ ನೀಡಿ ಪರೀಕ್ಷೆಗೆ ಸಿದ್ಧಗೊಳಿಸಲಾಗಿತ್ತು ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮತ್ತು ಸಂಸ್ಥೆಯ ವತಿಯಿಂದ ಸಾಧಕಿ ಪಲ್ಲವಿ ಅವರನ್ನು ಸನ್ಮಾನಿಸಲಾಯಿತು.

 

LEAVE A REPLY

Please enter your comment!
Please enter your name here