ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ

0
323

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘವು ಪ್ರಾರಂಭಗೊಂಡು 64 ವರ್ಷಗಳ ಸಾರ್ಥಕ ಸೇವೆಯನ್ನು ನೀಡುತ್ತಿದ್ದು, ಈ ಸಂದರ್ಭ ಸಂಘವು 176 ಕೋಟಿಗೂ ಮಿಕ್ಕಿ ಠೇವಣಾತಿ ಹೊಂದಿ, 128 ಕೋಟಿಗೂ ಮಿಕ್ಕಿ ಸಾಲ ನೀಡಿದ್ದು, 185 ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳದೊಂದಿಗೆ ಸತತ 12 ವರ್ಷಗಳಿಂದ ‘ಅ’ ತರಗತಿ ಆಡಿಟ್ ವರ್ಗೀಕರಣ ಹೊಂದಿದೆ. 2021-22ನೇ ಸಾಲಿನಲ್ಲಿ ಶೇ.96.25ರಷ್ಟು ಸಾಲ ವಸೂಲಾತಿಯೊಂದಿಗೆ 3.25ಕೋಟಿ ಲಾಭವನ್ನು ಗಳಿಸಿ ಇನ್ನಿತರ ಸಹಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿs ಸಂಘವು ಮುಂಚೂಣಿಯಲ್ಲಿದೆ. 2021-22ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಲಿ. ಮಂಗಳೂರು (ಸ್ಕ್ಯಾಡ್ಸ್) ಇದರ ಕುಂದಾಪುರ ಶಾಖೆಯಿಂದ ಸಂಘವು ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿಭಾಗಗಳನ್ನು ಖರೀದಿಸಿ ತನ್ನ ಸದಸ್ಯರಿಗೆ ವಿತರಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿರುತ್ತದೆ.

ಈ ಬಗ್ಗೆ ಸೆ.21.ರಂದು ಜರಗಿದ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಲಿ. ಮಂಗಳೂರು (ಸ್ಕ್ಯಾಡ್ಸ್) ಇದರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ ರವೀಂದ್ರ ಕಂಬಳಿ ಇವರು ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಎಚ್. ನಾಗರಾಜ ಹಂದೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಇವರಿಗೆ ಅಭಿನಂದನಾ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿತು.

LEAVE A REPLY

Please enter your comment!
Please enter your name here