ಶಿವಮೊಗ್ಗ ಮಕ್ಕಳ ದಸರಾ 2022 ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಎಕ್ಸಲೆಂಟ್ ವಿದ್ಯಾರ್ಥಿಗಳು

0
378

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಿವಮೊಗ್ಗ ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಪ್ರಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ಅಂಗವಾಗಿ 2ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯು ನೆಹರು ಒಳಾಂಗಣ ಕ್ರೀಡಾಂಗಣ ಶಿವಮೊಗ್ಗ ಇಲ್ಲಿ ಸೆಪ್ಪಂಬರ್ 27 ರಂದು ನಡೆದಿದ್ದು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ನಾಯಕ್ 45 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದÀ ಮೊಹಮ್ಮದ್ ಅನೀಸ್ 55 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಾಣಿಜ್ಯ ವಿಭಾಗದ ಸುಜನ್ ಶೆಟ್ಟಿ 50 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಆಯುಷ್ ಪುತ್ರನ್ 60 ಕೆಜಿ ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ..

LEAVE A REPLY

Please enter your comment!
Please enter your name here