ಕುಂದಾಪುರ : ಫುಟ್ಬಾಲ್ ಪಂದ್ಯಾಟ – ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

0
323

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜು, ಶಿರೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿ ಶ್ರವಣ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿರುತ್ತಾರೆ.

ಶ್ರವಣ್ ಕುಂದಾಪುರ ಖಾರ್ವಿಕೇರಿ ನಿವಾಸಿಯಾಗಿದ್ದು ಕುಂದಾಪುರ ಪುರಸಭೆಯ ಸದಸ್ಯರಾದ ಚಂದ್ರಶೇಖರ ಖಾರ್ವಿ ಹಾಗೂ ವಡೇರ ಹೋಬಳಿ ಮಧುಸೂದನ ಜಿ.ಕುಶೆ ಫ್ರೌಢ ಶಾಲೆಯ ಸಹಶಿಕ್ಷಕಿ ವೀಣಾ ಕೆ.ವಿಯವರ ಸುಪುತ್ರ. ಎಸ್ ಎಸ್ ಎಲ್ ಸಿ ಯಲ್ಲಿ ಶೇ.97ರಷ್ಟು ಅಂಕ ಪಡೆದು ಓದಿನಲ್ಲೂ ಬೇಷ್ ಅನಿಸಿಕೊಂಡು ಆಟದ ಮೈದಾನದಲ್ಲೂ ಲವಲವಿಕೆಯಿಂದ ತೊಡಗಿಸಿಕೊಂಡು ರಾಜ್ಯಮಟ್ಟಕ್ಕೆ ಅಯ್ಕೆಯಾಗಿರುತ್ತಾನೆ.

LEAVE A REPLY

Please enter your comment!
Please enter your name here