ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳು ಮತ್ತು ತಮಿಳುನಾಡಿನ ಡಿಸಿಸಿ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಅಧಿಕಾರಿಗಳ ಭೇಟಿ

0
302

ಕುಂದಾಪುರ ಮಿರರ್ ‌ಸುದ್ದಿ…

ಕೋಟ: ನಬಾರ್ಡ್‍ನ ಡಿಜಿಎಮ್ ಎಲ್. ಸಂಜೀವಿ ಇವರ ನೇತೃತ್ವದಲ್ಲಿ ತಮಿಳುನಾಡಿನ ರಾಜ್ಯ ಸಹಕಾರಿ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ವ್ಯವಹಾರದ ಅಭಿವೃದ್ಧಿ ಕುರಿತು ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮಾಹಿತಿ ನೀಡಿ ಸಂಘವು ನಡೆದು ಬಂದ ದಾರಿ, ಸಂಘದ ಸ್ವಂತ ಕಟ್ಟಡಗಳು, ಗೋದಾಮುಗಳು, ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಯೋಜನೆಗಳು ಮತ್ತು ಸಂಘದಿಂದ ರೈತ ಸದಸ್ಯರಿಗಾಗಿ ದೊರಕುವ ರೈತ ಸಂಜೀವಿನಿ ಕ್ರೆಡಿಟ್ ಕಾರ್ಡ್ ಸೌಲಭ್ಯದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಸದಸ್ಯತ್ವ, ಸ್ವ ಸಹಾಯ ಸಂಘ ರಚನೆ, ಸದಸ್ಯರ ಸಂಖ್ಯೆ, ಉಳಿತಾಯ ಕ್ರೋಢೀಕರಣ, ಸ್ವಸಹಾಯ ಸಂಘಗಳ ಸಾಲಗಳ ಮಿತಿ, ಸಾಲ ವಿತರಣೆ, ವಸೂಲಾತಿ ಮತ್ತು ಸಂಘದ ಮೇಲ್ವಿಚಾರಣೆ ಕುರಿತು ಚರ್ಚಿಸಲಾಯಿತು. ಸಾಲದ ಮಿತಿ, ಉದ್ದೇಶ ಮತ್ತು ಮಂಜೂರಾತಿ ಹಾಗೂ ಸದಸ್ಯರ ಕಲ್ಯಾಣ ನಿಧಿ, ಸಮೃದ್ಧಿ ಕ್ಷೇಮ ನಿಧಿಗಳ ಜೋಡಣೆ ಮತ್ತು ಅನುಷ್ಠಾನದ ಕುರಿತು ವಿವರವಾಗಿ ಚರ್ಚಿಸಲಾಯಿತು. ಭೇಟಿ ನೀಡಿದ ಅಧಿಕಾರಿಗಳು ಚರ್ಚೆಯ ಮೂಲಕ ವಿಚಾರ ವಿನಿಮಯ ಮಾಡಿಕೊಂಡು ಸಂಘದ ವ್ಯವಸ್ಥಿತ ಕಾರ್ಯವೈಖರಿ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿವೃದ್ಧಿಯನ್ನು ಶ್ಲಾಘಿಸಿದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಇವರು ಭೇಟಿ ನೀಡಿದ ಅಧಿಕಾರಿಗಳನ್ನು ಸ್ವಾಗತಿಸಿದರು. ಸಂಘದ ಸಿಬ್ಬಂದಿ ಶಾಲಿನಿ ಹಂದೆ ವಂದನಾರ್ಪಣೆ ನೆರವೇರಿಸಿದರು.

LEAVE A REPLY

Please enter your comment!
Please enter your name here