ಕುಂದಾಪುರ :ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

0
476

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಹಾಸನ ಮತ್ತು ಹೆಚ್. ಕೆ. ಎಸ್. ಪದವಿ ಪೂರ್ವ ಕಾಲೇಜು ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಡಿ.1 ರಂದು ಜರುಗಿದ ಮೈಸೂರು ವಿಭಾಗ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here