ಕುಂದಾಪುರ: ಭಗವಂತನ ಆರಾಧನೆಯೇ ಮಾನವ ಯಶೋನ್ನತಿಯ ಮೆಟ್ಟಿಲು

0
324

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ದೇವಾಲಯಗಳು ಸಮಾಜದ ಅಮೂಲ್ಯ ಸಂಪತ್ತು. ಭಗವಂತನ ಅನುಗ್ರಹ ಪಡೆಯಲು ದೇವಸ್ಥಾನಗಳು ಬೇಕು ಭಗವಂತನ ಆರಾಧನೆಯಿಂದ ಮನುಷ್ಯ ತನ್ನ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದ ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.

ಅವರು ಕುಂದಾಪುರದ ಚಿಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಮೈಲಾರೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಪೇಟೆ ವೆಂಕಟರಮಣ ದೇವಸ್ಥಾನದ ಆಡಳಿತ ಧರ್ಮದರ್ಶಿ ರಾಧಾಕೃಷ್ಣ ಶಣೈ, ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ ಖಾರ್ವಿ, ಮೈಲಾರೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮೇಶ್ ಬಿಲ್ಲವ, ದೇವಸ್ಥಾನದ ಅರ್ಚಕರಾದ ಬಾಲಚಂದ್ರ ಭಟ್, ಕಾರ್ಯದರ್ಶಿ ಕೆ ಪಿ ಅರುಣ್ ಹಾಗೂ ಸಿ ಎಚ್ ಗಣೇಶ್ ಉಪಸ್ಥಿತರಿದ್ದರು.
ಸಮಿತಿಯ ಅಧ್ಯಕ್ಷ ಅಶೋಕ್ ಬೆಟ್ಟಿನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಿ ಸತೀಶ್ ಕಾರ್ಯಕ್ರಮ ನಿರೂಪಿಸಿ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ್ ವಂದಿಸಿದರು.

LEAVE A REPLY

Please enter your comment!
Please enter your name here