Category: ಸುದ್ದಿ

  • ಕೋಟ :ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ

    ಕೋಟ :ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್), ಧಾರವಾಡ, ಇವರ ಸಹಯೋಗದೊಂದಿಗೆ ಕೃಷಿ ಇಲಾಖೆ ಕುಂದಾಪುರ, ಉಡುಪಿ ಮತ್ತು ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿ, ಕೋಟ ಇವರ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲನಯನ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ಹದಿನೈದು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಗುರುವಾರ ಕೋಟದ ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿ ಇಲ್ಲಿ ಆರಂಭಗೊಂಡಿತು.

    ಕಾರ್ಯಕ್ರಮವನ್ನು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕ ಅರವಿಂದ.ಡಿ ಬಾಳೇರಿಯವರು ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರಲ್ಲದೆ ಸ್ವಉದ್ಯೋಗದ ಮೂಲಕ ನಿರೋದ್ಯೋಗಕ್ಕೆ ಮೂಲ ಪರಿಹಾರ ಎಂದು ಹೇಳುವ ಮೂಲಕ ಸಿಡಾಕ್ ಸಂಸ್ಥೆಯ ಕಾರ್ಯವೈಖರಿ, ಸಿಡಾಕ್ ಸಂಸ್ಥೆ ನಡೆಸುವ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡಿ ಉದ್ಯಮದಾರರು ಸದಾ ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸುವುದು ಉತ್ತಮ ಎಂದು ತಿಳಿಸಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೋಟ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸುಪ್ರಭ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಇರುವ ಉದ್ಯಮ ಅವಕಾಶಗಳ ಬಗ್ಗೆ ತಿಳಿಸಿದರು.

    ಉಡುಪಿ ಜಲಾನಯನ ಸಂಯೋಜಕಿ ಉಷಾ ಪ್ರಸ್ತುತ ಪರಿಸ್ಥಿತಿಯಲ್ಲಿ ಎಲ್ಲರಿಗೂ ಉದ್ಯೋಗ ನೀಡಲು ಸರ್ಕಾರಕ್ಕೆ ಅಸಾಧ್ಯದ ಮಾತಾಗಿದೆ. ಆದ್ದರಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬರಬೇಕೆಂದು ತಿಳಿಸಿದರು.

    ಸಂಪನ್ಮೂಲ ವ್ಯಕ್ತಿ ಜ್ಯೋತಿ ಪ್ರಶಾಂತ, ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿ, ಕೋಟ ಇದರ ಕೇಂದ್ರ ಮುಖ್ಯಸ್ಥರಾದ ಚೇತನ. ಎಂ,ಸಿಡಾಕ್ ಉಡುಪಿ ಕಛೇರಿಯ ತರಬೇತುದಾರ ಪೃಥ್ವಿರಾಜ್ ಎಂ ನಾಯಕ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಿಡಾಕ್ ಉಡುಪಿ ಕಛೇರಿಯ ತರಬೇತುದಾರೆ ಶ್ರುತಿ ಸ್ವಾಗತಿಸಿ ನಿರೂಪಿಸಿದರು.

  • ಮಣೂರು – ಪಡುಕರೆಯ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮೆರಿಟ್ ಸ್ಕಾಲರ್ ಶಿಪ್ ಆಯ್ಕೆ

    ಮಣೂರು – ಪಡುಕರೆಯ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮೆರಿಟ್ ಸ್ಕಾಲರ್ ಶಿಪ್ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ರಾಷ್ಟ್ರೀಯ ಮೆರಿಟ್ ಸ್ಕಾಲರ್ ಶಿಪ್ (ಎನ್‍ಎಂಎಂಎಸ್) 2023-24ನೇ ಸಾಲಿನ ಪರೀಕ್ಷೆಯಲ್ಲಿ ಬ್ರಹ್ಮಾವರ ತಾಲೂಕಿನ ಮಣೂರು-ಪಡುಕರೆಯ ಸರಕಾರಿ ಸಂಯುಕ್ತ ಪ್ರೌಢಶಾಲೆಯ 8ನೇ ತರಗತಿಯ ಆಂಗ್ಲ ಮಾಧ್ಯಮದ 4 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಮೂಲಕ ಮಾಸಿಕ 1000 ರೂ. ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿ ಹರ್ಷಿತ್.ಆರ್ ಶೆಟ್ಟಿ(ಜಿಲ್ಲೆಗೆ ತೃತೀಯ ಸ್ಥಾನ) 118 ಅಂಕ ಗಳಿಸುವುದರ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

    ಎಲ್ಲಾ ವಿದ್ಯಾರ್ಥಿಗಳಿಗೂ ಗೀತಾನಂದ ಪೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್. ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರು -ಸದಸ್ಯರು ಮುಖ್ಯೋಪಾಧ್ಯಾಯರು. ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

  • ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪಾರಂಪಳ್ಳಿ ನರಸಿಂಹ ಐತಾಳರಿಗೆ ಆಮಂತ್ರಣ

    ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪಾರಂಪಳ್ಳಿ ನರಸಿಂಹ ಐತಾಳರಿಗೆ ಆಮಂತ್ರಣ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇದೇ ಬರುವ ಜೂನ್ 11ನೆಯ ಮಂಗಳವಾರ ಸಾಲಿಗ್ರಾಮದ ಪಾರಂಪಳ್ಳಿಯ ಶ್ರೀ ವಿಷ್ಣುಮೂರ್ತಿ ಸಭಾಭವನದಲ್ಲಿ ನಡೆಯಲಿರುವ ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಪಾರಂಪಳ್ಳಿ ನರಸಿಂಹ ಐತಾಳರ ಮನೆಗೆ ತೆರಳಿದ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಐತಾಳ ದಂಪತಿಗಳನ್ನು ಗೌರವಿಸಿ ಸಮ್ಮೇಳನದ ಆಮಂತ್ರಣ ಪತ್ರವನ್ನು ನೀಡಿದರು. ಈ ಹೊಣೆಗಾರಿಕೆಯನ್ನು ಸ್ವೀಕರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಸಾಲಿಗ್ರಾಮ ಪ.ಪಂ ಸದಸ್ಯ ಅನುಸೂಯ ಹೇರ್ಳೆ, ಕಸಾಪ ಜಿಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್, ಸಾಹಿತ್ಯ ಪರಿಷತ್‍ನ ಪ್ರಮುಖರಾದ ಅಚ್ಯುತ್ ಪೂಜಾರಿ, ಶ್ರೀಪತಿ ಹೇರ್ಳೆ, ಉಪೇಂದ್ರ ಸೋಮಯಾಜಿ, ಸತೀಶ್ ವಡ್ಡರ್ಸೆ, ಹಿರಿಯ ಕೃಷಿಕರಾದ ಪಾರಂಪಳ್ಳಿ ರಘು ಮಧ್ಯಸ್ಥ ಮತ್ತಿತರರು ಇದ್ದರು.

  • ಕೋಟ ಪಡುಕರೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

    ಕೋಟ ಪಡುಕರೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಮತ್ತು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

    ಈ ಕಾರ್ಯಕ್ರಮದಲ್ಲಿ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜಯಕರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯು ಮಾಡುತ್ತಿರುವ ಸಾಮಾಜಿಕ ಸೇವೆಗಳ ಬಗ್ಗೆ ತಿಳಿಯ ಪಡಿಸಿ ರಕ್ತದಾನದ ಮಹತ್ವವನ್ನು ತಿಳಿಸಿದರು.

    ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುನೀತ.ವಿ ವಿದ್ಯಾರ್ಥಿಗಳಿಗೆ ರಕ್ತದಾನದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಬಿಟ್ಟು ರಕ್ತದಾನ ಮಾಡಿ ಜೀವ ಉಳಿಸಿ ಇತರರನ್ನು ಪ್ರೇರೇಪಿಸಿ ಎಂದು ಕರೆ ನೀಡಿದರು.

    ಕಾರ್ಯಕ್ರಮವನ್ನು ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ರಾಜಣ್ಣ ಎಂ ಸಂಘಟಿಸಿದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಶಂಕರ ನಾಯ್ಕ ಬಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮುರಳಿ ಎಂ.ಜಿ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡು ರಕ್ತದಾನ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲೆ ಡಾ. ಸುನೀತಾ ಕೃತಜ್ಞತೆ ಸಲ್ಲಿಸಿದರು.

  • ಸರಕಾರಿ ಪ್ರೌಢಶಾಲೆ ನೆಂಪು ವಂಡ್ಸೆ: 2000-2001ನೇ ಸಾಲಿನ ಹಳೆ ವಿದ್ಯಾರ್ಥಿಗಳ ಪುನರ್ಮಿಲನ

    ಸರಕಾರಿ ಪ್ರೌಢಶಾಲೆ ನೆಂಪು ವಂಡ್ಸೆ: 2000-2001ನೇ ಸಾಲಿನ ಹಳೆ ವಿದ್ಯಾರ್ಥಿಗಳ ಪುನರ್ಮಿಲನ

    ಕುಂದಾಪುರ ಮಿರರ್ ಸುದ್ದಿ…

    ವಂಡ್ಸೆ: ಸರಕಾರಿ ಪ್ರೌಢಶಾಲೆ ನೆಂಪು ವಂಡ್ಸೆ ಇದರ 2000-2001ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಮೇ 19ರಂದು ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ ದಿ| ಸಂಜೀವಿ ಭಾಸ್ಕರ ಶೆಟ್ಟಿ ಆಡಿಟೋರಿಯಂನಲ್ಲಿ ಜರಗಿತು.

    ಪ್ರೇಮಾನಂದ ಆಚಾರ್ಯ ವಂಡ್ಸೆ ಪ್ರಾರ್ಥನೆ ಮಾಡಿದರು. 23 ವರ್ಷಗಳ ಹಿಂದಿನ ಸವಿ ಸವಿ ನೆನಪುಗಳ ಮೆಲುಕು, ವಾಸ್ತವದ ಸ್ಥಿತಿಗತಿ, ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆಯ ಕುರಿತು ಅಭಿಪ್ರಾಯಗಳು ವ್ಯಕ್ತವಾದವು. ವಿವಿಧ ಆಟಗಳು, ಸ್ಪರ್ಧೆಗಳು, ಸಂಗೀತ, ನೃತ್ಯ ಕಾರ್ಯಕ್ರಮ ನೆರವೇರಿತು.

    ಹರೀಶ್ ಭಟ್ ಗುಡ್ರಿ ಹಾಗೂ ಉದಯ ಆಚಾರ್ ಕಾರ್ಯಕ್ರಮ ನಿರ್ವಹಿಸಿದರು. ಕಳೆದ ವರ್ಷ ಇದೇ ತಂಡ 22 ವರ್ಷಗಳ ನಂತರ ಮಕರ ಸಂಕ್ರಾಂತಿಯ ಹೊತ್ತಿನಲ್ಲಿ ಭೇಟಿಯಾಗಿ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ನೆರವೇರಿಸಿತ್ತು. ಇದರ ಸವಿನೆನಪಿನ ಕಾರ್ಯಕ್ರಮದ ಮುಂದುವರಿದ ಭಾಗವನ್ನು ಅರ್ಥಪೂರ್ಣವಾಗಿ ನಡೆಸಲಾಯಿತು.

  • ಉಡುಪಿ :ಜೂನ್ 4 ರಂದು ಮತ ಎಣಿಕೆ – ಬೆಳಗ್ಗೆ5 ರಿಂದ ರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿ

    ಉಡುಪಿ :ಜೂನ್ 4 ರಂದು ಮತ ಎಣಿಕೆ – ಬೆಳಗ್ಗೆ5 ರಿಂದ ರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ :ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯವು ಜೂನ್ 4 ರಂದು ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.

    ಮತ ಎಣಿಕೆ ಕಾರ್ಯವನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಮತ್ತು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಣೆಗೊಂಡು, ಫಲಿತಾಂಶದ ಪ್ರಭಾವದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳು ಮತ್ತು ಬೆಂಬಲಿಗರು, ಗುಂಪು ಗುಂಪಾಗಿ ಸೇರಿ ಮೆರವಣಿಗೆ/ ವಿಜಯೋತ್ಸವಗಳನ್ನು ಆಚರಿಸಲು ಅವಕಾಶ ನೀಡಿದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳಿರುವ ಹಿನ್ನೆಲೆ, ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು, ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂತಿಯನ್ನು ಕಾಪಾಡುವ ಸಲುವಾಗಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144 (1) ರ ಅನ್ವಯ ಜಿಲ್ಲೆಯಾದ್ಯಂತ ಜೂನ್ 4 ರಂದು ಬೆಳಗ್ಗೆ 5 ಗಂಟೆಯಿAದ ಮಧ್ಯರಾತ್ರಿ 12 ರ ವರೆಗೆ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

    ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗುವುದನ್ನು ಹಾಗೂ ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇದಿಸಲಾಗಿರುತ್ತದೆ.
    ಮತ ಎಣಿಕೆ ಕೇಂದ್ರದ ಆವರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ.

    ಮತ ಎಣಿಕೆ ಕೇಂದ್ರದ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿರುತ್ತದೆ. (ಮುಖ್ಯ ಚುನಾವಣಾಧಿಕಾರಿ, ಮುಖ್ಯ ಚುನಾವಣಾಧಿಕಾರಿಯವರ ಕಛೇರಿ ಬೆಂಗಳೂರು ಇವರಿಂದ ಅನುಮತಿ ಪಡೆದ ಚುನಾವಣಾ ಕಾರ್ಯನಿರತ ಅಧಿಕಾರಿಗಳು/ ಸಿಬ್ಬಂದಿಗಳು ಹೊರತುಪಡಿಸಿ)
    ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ಹಾಗೂ ಚುನಾವಣೆಯ ಮತ ಎಣಿಕೆ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿರುತ್ತದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

    ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಗಧೆ, ಕೋಲು, ಚೂರಿ, ದೊಡ್ಡ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಧರಿಸುವುದನ್ನು ಮತ್ತು ಯಾವುದೇ ಕ್ಷಾರಕ ಯಾ ಸ್ಫೋಟಕ ವಸ್ತುಗಳು, ಪಟಾಕಿ, ಸಿಡಿಮದ್ದು ಹೊಂದುವುದನ್ನು ನಿಷೇಧಿಸಲಾಗಿರುತ್ತದೆ.

    ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಕ್ಷಿಪಣಿಗಳು ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಾಗ್ರಿಗಳನ್ನು ಧರಿಸುವುದನ್ನು ನಿಷೇಧಿಸಲಾಗಿರುತ್ತದೆ.
    ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿರುತ್ತದೆ.

    ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇದ್ದು, ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
    ಈ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನಿನ್ವಯ ಕ್ರಮ ಕೈಗೊಳ್ಳುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

  • ಉಡುಪಿ :ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ

    ಉಡುಪಿ :ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ

    ಕುಂದಾಪುರ ಮಿರರ್ ಸುದ್ದಿ…


    ಉಡುಪಿ :ಕರ್ನಾಟಕ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಇಂದು ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ವಿದ್ಯಾಸಂಸ್ಥೆಯ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಸೈಂಟ್ ಸಿಸಿಲೀಸ್ ವಿದ್ಯಾಸಂಸ್ಥೆಯಲ್ಲಿ ಮತಯಂತ್ರಗಳನ್ನು ಭದ್ರತೆಯಲ್ಲಿ ಇಟ್ಟಿರುವ ಸ್ಟ್ರಾಂಗ್ ರೂಂ, ಸಿ.ಸಿ.ಟಿ.ವಿ ಕ್ಯಾಮೆರಾಗಳ ವೀಕ್ಷಣಾ ಕೇಂದ್ರ, ವಿವಿಧ ಹಂತಗಳಲ್ಲಿ ಭದ್ರೆತಯನ್ನು ಒದಗಿಸಿರುವ ಪೋಲೀಸರ ಪಹರೆ ಸೇರಿದಂತೆ ಮತ್ತಿತರ ಭದ್ರತೆಯ ಬಗ್ಗೆ ವೀಕ್ಷಿಸಿದರು.

    ಇದೇ ಸಂದರ್ಭದಲ್ಲಿ ಮತ ಎಣಿಕೆಗೆ ನಡೆಸಿರುವ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯಿಂದ ಮಾಹಿತಿ ಪಡೆದ ಅವರು ಪ್ರತೀ ಎರಡು ಮತ ಎಣಿಕೆ ಟೇಬಲ್‌ಗೆ ಸಿ.ಸಿ.ಟಿ.ವಿ ಅಳವಡಿಕೆ ಆಗಬೇಕು ಹಾಗೂ ಮಹಡಿಗಳ ಮೇಲೆ ಮತ ಎಣಿಕೆ ಕೇಂದ್ರಗಳ ಮೆಟ್ಟಿಲುಗಳಿಗೂ ಸಿ.ಸಿ.ಟಿ.ವಿ ಅಳವಡಿಸುವಂತೆ ಸೂಚನೆ ನೀಡಿದರು.

    ಐ.ಜಿ.ಪಿ ಬೋರಲಿಂಗಯ್ಯ, ಎಸ್.ಪಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

  • ಮೇ 25ಕ್ಕೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಅರಿವು ನಿಮ್ಮಗಿರಲಿ ನೆರವು 9ನೇ ಮಾಲಿಕೆ

    ಮೇ 25ಕ್ಕೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಅರಿವು ನಿಮ್ಮಗಿರಲಿ ನೆರವು 9ನೇ ಮಾಲಿಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಾತೃಸಂಸ್ಥೆ ಕೋಟ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ಇದೇ ಮೇ .25ರಂದು ಸಾಮಾಜಿಕ ಕಾರ್ಯಕ್ರಮ ಹದಿಹರೆಯದವರ ಸಮಸ್ಯೆಗಳು ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ.

    9ನೇ ಮಾಲಿಕೆ ಅರಿವು ನಿಮಗಿರಲಿ ನೆರವು ಶೀರ್ಷಿಕೆಯಡಿ ಕೋಟ ಗ್ರಾ.ಪಂ ಪ್ರಕೃತಿ ಸಂಜೀವಿನಿ ಒಕ್ಕೂಟದ ಸಂಯೋಜನೆಯೊಂದಿಗೆ ಇಲ್ಲಿನ ಕೋಟ ಗ್ರಾ.ಪಂ.ಸಭಾಭವನದಲ್ಲಿ ಪೂರ್ವಾಹ್ನ 10-00ಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದೆ.

    ಸಂಪನ್ಮೂಲ ವ್ಯಕ್ತಿಯಾಗಿ ತೆಕ್ಕಟ್ಟೆ ಪರಿಸರದ ಪ್ರಸಿದ್ಧ ಶ್ರೀ ದೇವಿ ಕ್ಲಿನಿಕ್ ಇದರ ವೈದ್ಯೆ ಡಾ.ಸುಮಂಗಲ ಭಾಗವಹಿಸಲಿದ್ದಾರೆ ಎಂದು ಪಂಚವರ್ಣ ಮಹಿಳಾ ಮಂಡಲದ ಆಧ್ಯಕ್ಷೆ ಲಲಿತಾ ಗಿಳಿಯಾರು ತಿಳಿಸಿದ್ದಾರೆ.

  • ಬೈಂದೂರು :ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶಾಸಕ ಗುರುರಾಜ ಗಂಟಿಹೊಳೆ

    ಬೈಂದೂರು :ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶಾಸಕ ಗುರುರಾಜ ಗಂಟಿಹೊಳೆ

    ಕುಂದಾಪುರ ಮಿರರ್ ಸುದ್ದಿ…
    ಬೈಂದೂರು: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಶಿರೂರು ವಿದ್ಯಾರ್ಥಿಯ ಮನೆಗೆ ಶಾಸಕರಾದ ಗುರುರಾಜ ಗಂಟಿಹೊಳೆಯವರು ಭೇಟಿ ಮಾಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಇಂತಹ ನೋವಿನ ಪರಿಸ್ಥಿತಿ ಯಾರಿಂದಲೂ ಸಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂಬುದನ್ನು ತಿಳಿಸಿ ಕುಟುಂಬವನ್ನು ಸಂತೈಸಿದರು.
    ಯಾರು ಯಾವುದೇ ಸಂದರ್ಭದಲ್ಲೂ ದುಡುಕಿ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಶಾಸಕರು ಬಾವುಕರಾದರು.
    ಶೈಕ್ಷಣಿಕ ಜೀವನ ಎಲ್ಲರ ಜೀವನದಲ್ಲೂ ಅಮೂಲ್ಯವಾಗಿರುತ್ತದೆ. ಬೈಂದೂರು ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದೇವೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ದೃಷ್ಟಿಯಿಂದಲೂ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಗ್ರಾಾಮೀಣ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕು. ಯಾವುದೇ ಕ್ಷಣದಲ್ಲೂ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ವಿದ್ಯಾರ್ಥಿ ಸಮೂಹಕ್ಕೆ ಸಲಹೆ ನೀಡಿದರು.
    ಮಕ್ಕಳ ಓದಿನ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಬೇಕು. ಈ ರೀತಿಯ ಕೆಟ್ಟ ನಿರ್ಧಾರ ಯಾವುದೇ ಮಗುವಿನಲ್ಲೂ ಬರಬಾರದು. ಆ ನಿಟ್ಟಿನಲ್ಲಿ ಸಮಾಜ ನಿರ್ಮಾಣ ಮಾಡುವ ಜವಾಬ್ದಾಾರಿ ನಮ್ಮೆಲ್ಲರ ಮೇಲೂ ಇದೆ. ವಿದ್ಯಾರ್ಥಿಗಳನ್ನು ಈ ಸಮಾಜದ ಸಂಪತ್ತಾಗಿ ರೂಪಿಸಬೇಕು. ಅವರಿಗೆ ಸೂಕ್ತ ಮಾರ್ಗದರ್ಶನ ಎಲ್ಲ ಕಡೆಯಿಂದಲೂ ಸಿಗಬೇಕು. ಮನೆ, ಶಾಲೆ, ಕಾಲೇಜು, ಸಮಾಜ ಹೀಗೆ ಎಲ್ಲ ಕಡೆಗಳಲ್ಲೂ ಸಕಾರಾತ್ಮಕವಾದ ವಾತಾವರಣವನ್ನು ಕಲ್ಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆಯೂ ಎಲ್ಲರೂ ಒಟ್ಟಾಗಿ  ಯೋಚನೆ ಮಾಡುವ ಅಗತ್ಯವಿದೆ ಎಂದರು.
    ಯಾವುದೇ ಸಂದರ್ಭ ಅಥವಾ ಎಷ್ಟೇ ಕಠಿಣ ಪರಿಸ್ಥಿತಿ ಇದ್ದರೂ ಯಾರೂ ಕೂಡ ಆತ್ಮಹತ್ಯೆ ಅಂತಹ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ಶಾಸಕರಾದ ಗುರುರಾಜ ಗಂಟಿಹೊಳೆ ಮನವಿ ಮಾಡಿದರು.
  • ಕುಂದಾಪುರ :ವಿ.ವಿ. ಮಟ್ಟದ ಅಂತರ್ ಕಾಲೇಜು ‘ದಿಗಂತ’ ಸ್ಪರ್ಧೆಯಲ್ಲಿ ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿಗೆ 2ಪ್ರಥಮ, 5 ದ್ವಿತೀಯ ಬಹುಮಾನ

    ಕುಂದಾಪುರ :ವಿ.ವಿ. ಮಟ್ಟದ ಅಂತರ್ ಕಾಲೇಜು ‘ದಿಗಂತ’ ಸ್ಪರ್ಧೆಯಲ್ಲಿ ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿಗೆ 2ಪ್ರಥಮ, 5 ದ್ವಿತೀಯ ಬಹುಮಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಸುರತ್ಕಲ್‌ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ’ದಲ್ಲಿ 2 ಪ್ರಥಮ ಹಾಗೂ 5 ದ್ವಿತೀಯ ಬಹುಮಾನಗಳನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ. ಅಭಿನಂದಿಸಿದ್ದಾರೆ.