Category: ಸುದ್ದಿ

  • ಕೇಂದ್ರ ಬಜೆಟ್ – ಸಮಕಾಲಿಕ, ವಾಸ್ತವಿಕ, ವಿಕಸಿತ ಭಾರತಕ್ಕೆ ಪೂರಕ –ಬಿ.ವೈ.ರಾಘವೇಂದ್ರ

    ಕೇಂದ್ರ ಬಜೆಟ್ – ಸಮಕಾಲಿಕ, ವಾಸ್ತವಿಕ, ವಿಕಸಿತ ಭಾರತಕ್ಕೆ ಪೂರಕ –ಬಿ.ವೈ.ರಾಘವೇಂದ್ರ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಸಕಾಲಿಕ, ವಾಸ್ತವ ಹಾಗೂ ವಿಕಸಿತ ಭಾರತಕ್ಕೆ ಪೂರಕವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜನಪ್ರಿಯ ಘೋಷಣೆಗಳ ಮೊರೆ ಹೋಗತ್ತದೆ ಎಂದು ಪ್ರತಿಪಕ್ಷಗಳು ಭಾವಿಸಿದ್ದವು ಆದರೆ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯ ಘೋಷಣೆಗಳಿಂದ ದೇಶದ ಆರ್ಥಿಕತೆ ಹಾಳಾಗುತ್ತದೆ ಎಂಬುದನ್ನು ಮನಗಂಡು ದೇಶದ ಭವಿಷ್ಯಕ್ಕೆ ಪೂರಕವಾದ ಮಧ್ಯಂತರ ಬಜೆಟ್ ಗೆ ಒತ್ತು ನೀಡಿದ್ದಾರೆ.

    ಆರು ದಶಕಗಳಿಗೂ ಹೆಚ್ಚು ಕಾಲದಿಂದ ಬಗೆಹರಿಯದ ತೆರಿಗೆ ಸಂಬಂಧಿತ ವ್ಯಾಜ್ಯಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. 41,000 ರೈಲುಗಳ ಬೋಗಿಗಳನ್ನು ವಂದೇ ಭಾರತ್ ರೈಲಿನ ಭೋಗಿಯ ಗುಣಮಟ್ಟಕ್ಕೆ ವಿಸ್ತರಿಸಲು ಚಿಂತನೆ ನಡೆಸಿರುವುದು ಖುಷಿ ವಿಚಾರ. ಬಂದರುಗಳ ಅಭಿವೃದ್ಧಿ, ಲಕ್ಷದ್ವೀಪ ಪ್ರವಾಸಿ ತಾಣದ ಅಭಿವೃದ್ಧಿ, ಗೂಡ್ಸ್ ರೈಲುಗಳಿಗೆ ಪ್ರತ್ಯೇಕ ಕಾರಿಡಾರ್, ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ವಿಮಾನಯಾನ ಸೌಕರ್ಯ, 500ಕ್ಕೂ ಹೆಚ್ಚು ಉಡಾನ್ ಮಾರ್ಗಗಳನ್ನು ಗುರುತಿಸಿರುವುದು ಇವುಗಳು ಮೂಲ ಸೌಕರ್ಯದ ವಿಸ್ತರಣೆಯಲ್ಲಿ ಮಹತ್ವದ ಪಾತ್ರ ವಹಿಸಲಿವೆ. ಧಾರ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಿರುವುದು ವಿಶೇಷ ಎಂದಿದ್ದಾರೆ.

    ಮನೆಗಳಿಗೆ ಸೋಲಾರ್ ವಿದ್ಯುತ್ ಒದಗಿಸುವುದು, ಹೊಸದಾಗಿ ಎರಡು ಕೋಟಿ ಮನೆಗಳ ನಿರ್ಮಾಣ ಇದೆಲ್ಲವೂ ಜನಪರ ಚಿಂತನೆಗೆ ನಿದರ್ಶನವಾಗಿದೆ. ರಕ್ಷಣಾ ಇಲಾಖೆಗೆ 11 ಲಕ್ಷ ಕೋಟಿ ರೂ. ನಿಗದಿಪಡಿಸಿರುವುದು ದೇಶದ ರಕ್ಷಣೆಗೆ ಕೇಂದ್ರ ಸರ್ಕಾರ ನೀಡಿರುವ ಪ್ರಾಶಸ್ತ್ಯಕ್ಕೆ ನಿದರ್ಶನವಾಗಿದೆ ಎಮದಿರುವ ಅವರು, ನ್ಯಾನೋ ಯೂರಿಯಾ ಬಳಿಕ ಇದೀಗ ನ್ಯಾನೋ ಡಿಎಪಿ ಒದಗಿಸಲು ಬಜೆಟ್ ನಲ್ಲಿ ನಿರ್ಧರಿಸಲಾಗಿದೆ. ಡೈರಿಗಳಿಗೆ ಶಕ್ತಿ ತುಂಬಲು ಯೋಜನೆ ಘೋಷಣೆಯಾಗಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಆರೋಗ್ಯ ವಿಮೆ ಒದಗಿಸಲಾಗಿದೆ. ಒಂದು ಕೋಟಿ ಮನೆಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಕೆಗೆ ನಿರ್ಧರಿಸಲಾಗಿದೆ. ವಿಶ್ವದ ಅನೇಕ ರಾಷ್ಟ್ರಗಳು ಆರ್ಥಿಕ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ನಮ್ಮ ಆರ್ಥಿಕತೆ ಸದೃಢವಾಗಿದೆ ಇದೇ ಕಾರಣದಿಂದ ಆದಾಯ ತೆರಿಗೆಯಲ್ಲಿ ಹೆಚ್ಚಳ ಮಾಡಿಲ್ಲ. ಲೋಕಸಭೆ ಚುನಾವಣೆ ಬಳಿಕ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರಲಿದ್ದು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಆಗ ಮಂಡನೆಯಾಗುವ ಪೂರ್ಣ ಪ್ರಮಾಣದ ಬಜೆಟ್ ನಲ್ಲಿ ದೇಶಕ್ಕೆ ಇನ್ನಷ್ಟು ಉತ್ತಮ ಕೊಡುಗೆಗಳು ಸಿಗಲಿವೆ ಎಂದು ತಿಳಿಸಿದ್ದಾರೆ.

  • ಕೋಟ :ಪಂಚಾಯತ್ ರಾಜ್ ಸಬಲೀಕರಣಕ್ಕೆ ಹೊಳಪು ಕಾರ್ಯಕ್ರಮ ಸಹಕಾರಿ – ಸುಧೀರ್ ಶೆಟ್ಟಿ

    ಕೋಟ :ಪಂಚಾಯತ್ ರಾಜ್ ಸಬಲೀಕರಣಕ್ಕೆ ಹೊಳಪು ಕಾರ್ಯಕ್ರಮ ಸಹಕಾರಿ – ಸುಧೀರ್ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ :ಪಂಚಾಯತ್ ರಾಜ್ ಸಬಲೀಕರಣಕ್ಕೆ ಹೊಳಪು ಕಾರ್ಯಕ್ರಮ ಸಹಕಾರಿಯಾಗಿದ್ದು, ಪಕ್ಷಭೇದ ಮರೆತು ನಾವೆಲ್ಲರೂ ಒಂದೇ ತಂಡ ಎನ್ನುವ ಭಾವನೆ ಮೂಲಕ ತಂಡದ ಗೆಲುವಿಗಾಗಿ ಪಣತೊಟ್ಟು ಸಂಭ್ರಮದಿಂದ ಭಾಗವಹಿಸುತ್ತಿರುವುದು ಸಂತಸದ ವಿಷಯ, ಇಂತಹ ಕಾರ್ಯಕ್ರಮಗಳು ದೇಶಕ್ಕೆ ಮಾದರಿ ಎಂದು ಮಂಗಳೂರು ಮಹಾನಗರ ಪಾಲಿಕೆ ಅಧ್ಯಕ್ಷ ಸುಧೀರ್ ಶೆಟ್ಟಿ ಅವರು ಹೇಳಿದರು.

    ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಅವರ ಆಶ್ರಯದಲ್ಲಿ ನಡೆಯುವ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ – ಸಾಂಸ್ಕೃತಿಕ ಸ್ಪರ್ಧೆ ಹೊಳಪು-2024( ಗ್ರಾಮ ಸರಕಾರದ ದಿಬ್ಬಣ) ಕಾರ್ಯಕ್ರಮದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    ಕಾರ್ಯಕ್ರಮದ ಸಂಚಾಲಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಪಂಚಾಯತ್ ರಾಜ್ ವ್ಯವಸ್ಥೆ ಗಟ್ಟಿತನದತ್ತ ಒಂದು ಹೆಜ್ಜೆ ಹೊಳಪು ಕಾರ್ಯಕ್ರಮ. ಹಬ್ಬದಂತೆ ಕಾರ್ಯಕ್ರಮದಲ್ಲಿ ಜೊತೆಗೂಡಿ ಸಂಭ್ರಮಿಸಿ ಯಶಸ್ವಿಗೊಳಿಸಬೇಕಾಗಿ ಕೋರಿದರು.
    ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಶೆಟ್ಟಿ, ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ರವೀಂದ್ರ ರಾವ್, ವಿವೇಕ ವಿದ್ಯಾ ಸಂಸ್ಥೆಯ ಶಿಕ್ಷಕ ವೃಂದ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು ಮತ್ತಿತ್ತರರು ಉಪಸ್ಥಿತರಿದ್ದರು.
    ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ನಿರೂಪಿಸಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ ಪ್ರಸ್ತಾಪಿಸಿದರು.

  • ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಉಚಿತ ಸಾಮೂಹಿಕ ವಿವಾಹ – ದಾಂಪತ್ಯ ಜೀವನಕ್ಕೆ ಪಾದಾರ್ಪಣೆಗೈದ ಐದು ಜೋಡಿಗಳು

    ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಉಚಿತ ಸಾಮೂಹಿಕ ವಿವಾಹ – ದಾಂಪತ್ಯ ಜೀವನಕ್ಕೆ ಪಾದಾರ್ಪಣೆಗೈದ ಐದು ಜೋಡಿಗಳು

    ಕುಂದಾಪುರ ಮಿರರ್ ಸುದ್ದಿ…

    Video:

    ಕುಂದಾಪುರ: ಕರ್ನಾಟಕ ಸರ್ಕಾರದ ಮಾಂಗಲ್ಯ ಭಾಗ್ಯ ಯೋಜನೆಯಡಿಯಲ್ಲಿ ಕೊಲ್ಲೂರು ಶ್ರೀ ಮಾಕಾಂಬಿಕಾ ದೇವಸ್ಥಾನದಲ್ಲಿ ನಡೆದ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಬುಧವಾರ ನಡೆಯಿತು. ಮಧ್ಯಾಹ್ನ ಅಭಿಜಿನ್ ಲಗ್ನ ಸಮುಹೂರ್ತದಲ್ಲಿ ಬೆಳಿಗ್ಗೆ 11.20 ರಿಂದ 12.20 ರವರೆಗೆ ವಿವಾಹ ಕಾರ್ಯಕ್ರಮ ನಡೆಯಿತು. ಸುಬ್ರಹ್ಮಣ್ಯ ಪೂಜಾರಿ – ಅಶ್ವಿನಿ, ಅಜಿತ – ಮೂಕಾಂಬು, ವಿಠಲ – ಅನಿತ, ಅನಿಲ್ – ವಸಂತಿ, ಚಂದ್ರಶೇಖರ – ಜಲಜಾ ದಂಪತಿಗಳೇ ಹಸೆಮಣೆಯೇರಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದವರು.

    ಈ ಸಂದರ್ಭ ಸರ್ಕಾರದ ವತಿಯಿಂದ ವರನಿಗೆ ಪ್ರೋತ್ಸಾಹ ಧನ(ಹೂವಿನ ಹಾರ,ಪಂಚೆ, ಶರ್ಟ್ ಮತ್ತು ಶಲ್ಯಕ್ಕಾಗಿ) ರೂ.ಐದು ಸಾವಿರ, ವಧುವಿಗೆ ಪ್ರೋತ್ಸಾಹ ಧನ(ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣಕ್ಕಾಗಿ) ರೂ ಹತ್ತು ಸಾವಿರ ಹಾಗೂ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ರೂ. ನಲ್ವತ್ತು ಸಾವಿರ ಸೇರಿದಂತೆ ಒಟ್ಟು 55 ಸಾವಿರ ಮೌಲ್ಯದ ಪ್ರೋತ್ಸಾಹಧನವನ್ನು ಪ್ರತೀ ದಂಪತಿಗಳಿಗೆ ವಿತರಿಸಲಾಯಿತು.

    ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಉದಯ ಶೇರುಗಾರ್, ಉಪಾಧ್ಯಕ್ಷ ನಾಗೇಶ್, ಕುಂದಾಪುರ ಉಪವಿಭಾಗಾಧಿಕಾರಿ, ಕೊಲ್ಲೂರು ದೇವಳದ ಆಡಳಿತಾಧಿಕಾರಿ ರಶ್ಮಿ ಎಸ್. ಆರ್, ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ, ಬೈಂದೂರು ತಹಸೀಲ್ದಾರ್ ಪ್ರದೀಪ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕೊಲ್ಲೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ವೀರೇಶ್ ಮೊದಲಾದವರು ಉಪಸ್ಥಿತರಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಉಪಾಧಿವಂತ ವೆ.ಮೂ.ಗಜಾನನ ಜೋಯಿಸರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

  • ಕುಂದಾಪುರ: ಸೌಹಾರ್ದ ಕರ್ನಾಟಕ ವೇದಿಕೆಯಿಂದ ಬೃಹತ್ ಮಾನವ ಸರಪಳಿ

    ಕುಂದಾಪುರ: ಸೌಹಾರ್ದ ಕರ್ನಾಟಕ ವೇದಿಕೆಯಿಂದ ಬೃಹತ್ ಮಾನವ ಸರಪಳಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಮಹಾತ್ಮ ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ಸೌಹಾರ್ದ ಕರ್ನಾಟಕ ವೇದಿಕೆ ಆಶ್ರಯದಲ್ಲಿ ವಿವಿಧ ಸಮಾನಮನಸ್ಕ ಸಂಘಟನೆಗಳ ಜೊತೆ ಸೇರಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹೆದ್ದಾರಿ 66ರ ಇಕ್ಕೆಲಗಳಲ್ಲಿ ಶಿರೂರು ,ಬೈಂದೂರು, ಮರವಂತೆ , ತ್ರಾಸಿ ಮಾನವ ಸರಪಳಿ ನಡೆಸಲಾಯಿತು.

    ಕುಂದಾಪುರದಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದ ಬಳಿಕ ಶಾಸ್ತ್ರಿಸರ್ಕಲ್ ಬಳಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜನಪರ ಚಿಂತಕ ಫ್ರೋಫೆಸರ್ ಮೊಳಹಳ್ಳಿ ದಿನೇಶ್ ಹೆಗ್ಡೆ, “ಸೌಹಾರ್ದ ಬಯಸುವ ಶಾಂತಿಪ್ರಿಯ ಮನಸ್ಸುಗಳು ಕೈ ಕೈ ಬೆಸೆಯುವ ಮುಖಾಂತರ ಗಾಂಧಿ ಸಂದೇಶವನ್ನು ಜಗತ್ತಿಗೆ ಸಾರುವ ಕೆಲಸ ಮಾಡಿರುವುದು ಶ್ಲಾಘನಿಯ” ಎಂದರು.

    “ಅನಾದಿ ಕಾಲದಿಂದಲೂ ಮನುಷ್ಯರು ಪರಸ್ಪರ ಸೌಹಾರ್ದತೆಯಿಂದ ಬೆಳೆದು ಬಂದವರು. ಹಿಂದಿನಿಂದಲೂ ಕಾಯಕ ಮತ್ತು ದಾಸೋಹ ಅಂದರೆ ಉತ್ಪಾದನೆ ಮತ್ತು ವಿತರಣೆ ವಿಚಾರದಲ್ಲಿ ಬಸವಣ್ಣ ಹಾಕಿಕೊಟ್ಟ ಮಾರ್ಗ, ನಾರಾಯಣ ಗುರುಗಳ ಮೌನ ಕ್ರಾಂತಿ ಅಸ್ಪೃಷ್ಯತೆಯನ್ನು ಹೊಡೆದು ಹಾಕುವ ಜನಪರ ಹೋರಾಟಗಳು ಅಂದಿನಿಂದಲೂ ನಡೆದು ಬಂದಿವೆ. ಶೋಷಿತ ವರ್ಗಕ್ಕೆ ದೇಗುಲ ಪ್ರವೇಶಕ್ಕೆ ಅವಕಾಶಗಳನ್ನು ಕಲ್ಪಿಸುವ ಹೋರಾಟ ವೂ ನಡೆದು ಬಂದಿದೆ. ವರ್ಣಬೇಧಗಳು, ಲಿಂಗಬೇಧಗಳು ಹಿಂದಿನಿಂದಲೂ ಬೆಳೆದು ಬಂದಿತ್ತು. ಶಿಕ್ಷಣ ಕ್ರಾಂತಿಯಲ್ಲಿ ಹೊಸ ಭಾಷ್ಯ ಬರೆದ ಜ್ಯೋತಿ ಬಾಪುಲೆ ಸ್ಮರಣೀಯರು ಎಂದರು.

    ಸಹಬಾಳ್ವೆ, ಮುಸ್ಲಿಂ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ದಲಿತ ಸಂಘರ್ಷ ಸಮಿತಿ, ಭೀಮ ಘರ್ಜನೆ,ಸಮುದಾಯ, ಕ್ಯಾಥೋಲಿಕ್ ಸಭಾ, ಸಿಐಟಿಯು,ಜನವಾದಿ ಮಹಿಳಾ ಸಂಘಟನೆ, ಡಿವೈಎಫ್ಐ,ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಮುಸ್ಲಿಂ ಜಮಾತೆ, ಆದಿವಾಸಿ ಹಕ್ಕುಗಳ ಸಮಿತಿ, ದಲಿತ ಹಕ್ಕುಗಳ ಸಮಿತಿ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ಮಾನವ ಸರಪಳಿಯಲ್ಲಿ ಭಾಗವಹಿಸಿದ್ದವು. ಕರ್ನಾಟಕ ಸೌಹಾರ್ದ ವೇದಿಕೆಯ ಚಂದ್ರಶೇಖರ ವಿ ನಿರೂಪಿಸಿದರು. ಸುರೇಶ್ ಕಲ್ಲಾಗರ ವಂದಿಸಿದರು.

  • ಕುಂದಾಪುರ :ತೆಕ್ಕಟ್ಟೆಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ

    ಕುಂದಾಪುರ :ತೆಕ್ಕಟ್ಟೆಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಸಂವಿಧಾನ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಸಂವಿಧಾನ ಜಾಗೃತಿ ಜಾಥಾವು ಇಂದು ತೆಕ್ಕಟ್ಟೆಗೆ ಆಗಮಿಸಿದ್ದು, ತೆಕ್ಕಟ್ಟೆ ಗ್ರಾಮ ಪಂಚಾಯತ್ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

    ಸಂವಿಧಾನ ಜಾಗೃತಿ ಜಾಥಾಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ ನೀಡಿ, ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಸಮ್ಮ ದೇಶವೂ ಸಂವಿಧಾನದ ಆಶಯದ ಮೇಲೆ ನಡೆಯುತ್ತಿದೆ ಸಂವಿಧಾನದ ಮಹತ್ವ ಮತ್ತು ಮೌಲ್ಯವನ್ನು ಪ್ರತಿಯೊಬ್ಬರು ಅರಿವನ್ನು ಹೊಂದಬೇಕು ಸಂವಿಧಾನದ ಚೌಕಟ್ಟಿನಲ್ಲಿ ಎಲ್ಲರೂ ಸಮಾನರು ಈ ಜಾಥಾ ಕಾರ್ಯಕ್ರಮಕ್ಕೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

    ಮಹಾಲಿಂಗೇಶ್ವರ ದೇವಸ್ಥಾನದಿಂದ ತೆಕ್ಕಟ್ಟೆ ಗ್ರಾಮ ಪಂಚಾಯತ್ ವರೆಗೆ ಚಂಡೆ ಮತ್ತು ವಾದ್ಯಗಳೊಂದಿಗೆ ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ, ತಹಶೀಲ್ದಾರ್ ಶೋಭಾಲಕ್ಷ್ಮೀ ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ರಾವ್, ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಟಿ.ಶೋಭನಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ಪಂಚಾಯ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು, ಪಂಚಾಯತ ವ್ಯಾಪ್ತಿಯ ಶಿಕ್ಷಕ ಹಾಗೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎಸ್.ಎಲ್.ಆರ್.ಎಂ ಘಟಕದ ಕಾರ್ಯಕರ್ತರು, ಸಂಜೀವಿನಿ ಸಂಘದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮಕ್ಕೂ ಮುನ್ನ ಸೈಕಲ್ ಜಾಥಾದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ, ತಹಶೀಲ್ದಾರ್ ಶೋಭಾಲಕ್ಷ್ಮೀ ಭಾಗಿಯಾದರು.

  • ಕುಂದಾಪುರ :ಪಂಚಗಂಗಾ ರೈಲು ವೇಳಾಪಟ್ಟಿ ಬದಲಿಸದೇ ಕೋಚ್ ಹೆಚ್ಚಿಸಿ – ಗಣೇಶ್ ಪತ್ರನ್ ಆಗ್ರಹ

    ಕುಂದಾಪುರ :ಪಂಚಗಂಗಾ ರೈಲು ವೇಳಾಪಟ್ಟಿ ಬದಲಿಸದೇ ಕೋಚ್ ಹೆಚ್ಚಿಸಿ – ಗಣೇಶ್ ಪತ್ರನ್ ಆಗ್ರಹ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಪಂಚಗಂಗಾ ರೈಲು ಕರಾವಳಿಯ ಉದ್ಯೋಗಿಗಳಿಗೆ ಜೀವನ ರೇಖೆಯಾಗಿದ್ದು, ಈ ರೈಲು ಯಶಸ್ವಿಯಾಗಲು ಮೂಲ ಕಾರಣವೇ ಅದರ ಟೈಮ್ ಟೇಬಲ್. ಆದುದರಿಂದ ರೈಲಿನ ವೇಳಾಪಟ್ಟಿ ಬದಲಿಸದೇ ಹೆಚ್ಚುವರಿ ಕೋಚ್ ಅಳವಡಿಸುವಂತೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಆಗ್ರಹಿಸಿದ್ದಾರೆ.

    ಹೆಚ್ವುವರಿ ಕೋಚ್ ಹಾಕಿದರೆ ಬೆಂಗಳೂರು ಮುಟ್ಟುವ ಸಮಯ ವಿಳಂಭವಾಗಲಿದೆ ಎಂಬ ಉತ್ತರ ಹಿಂದಿನಿಂದಲೂ ರೈಲ್ವೇ ಇಲಾಖೆ ನೀಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಕೋಚ್ ಹಾಕುವುದಾದರೆ ಯಾವ ಕಾರಣಕ್ಕೂ ರೈಲಿನ ಸಮಯ ಬದಲಾಗ ಬಾರದು ಎಂದು ಅವರು ಎಚ್ಚರಿಸಿದ್ದಾರೆ.

    ಬೆಂಗಳೂರಿಗೆ ಐದೇ ಐದು ನಿಮಿಷ ವಿಳಂಭವಾಗಿ ಹೋದರೂ ಬೆಂಗಳೂರು ಟ್ರಾಪಿಕ್ ನಲ್ಲಿ ಸಿಲುಕಿ ಜನ ಕಚೇರಿಗಳಿಗೆ ರಜೆ ಹಾಕಬೇಕಾದ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೇ ನಿಗಮ ಕೆಲವೊಂದು ಖಾಸಗಿ ಲಾಬಿಗಳ ಜತೆ ಶಾಮೀಲಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬರುತಿದ್ದು , ಹೆಚ್ವುವರಿ ಬೋಗಿ ಹಾಕಿ ಪಂಚಗಂಗಾ ರೈಲಿನ ಸಮಯ ಹಾಳು ಮಾಡುವ ಸಂಚು ರೂಪಿಸಲಾಗಿದೆಯೇ ಎಂಬ ಅನುಮಾನ ಮೂಡಿದೆ. ಎಷ್ಟೇ ಬೋಗಿ ಹಾಕಿದರೂ ಕೂಡಾ ರೈಲಿನ ಬೇಡಿಕೆ ಕಡಿಮೆಯಾಗದು ಮತ್ತು ಹೊಸ ರೈಲೇ ಈ ಸಮಸ್ಯೆಗೆ ಪರಿಹಾರವಾಗಿದೆ. ಹಾಗು ಘಾಟ್ ಸಮಸ್ಯೆ ಪರಿಹಾರವಾದರೆ ಎಲ್ಲಾ ರೈಲುಗಳೂ ಹೆಚ್ಚು ಬೋಗಿ ಹೊಂದ ಬಹುದಾಗಿದ್ದು ಈ ಸಮಸ್ಯೆ ಪರಿಹಾರ ಮಾಡದೇ ಪಂಚಗಂಗಾ ರೈಲಿನ ಸಮಯ ಹಾಳು ಮಾಡಿದರೆ ತೀವ್ರ ಪ್ರತಿಭಟನೆ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

  • ಕುಂದಾಪುರ :ಧರ್ಮಸ್ಥಳದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ರಿಷಿಕಾ ದೇವಾಡಿಗ ಪ್ರಥಮ

    ಕುಂದಾಪುರ :ಧರ್ಮಸ್ಥಳದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ರಿಷಿಕಾ ದೇವಾಡಿಗ ಪ್ರಥಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಜ್ಞಾನ ವಾರಿಧಿ ಮತ್ತು ಜ್ಞಾನ ಶರಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಜನವರಿ 27 ರಂದು ಆಯೋಜಿಸಿರುವ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8ನೆಯ ತರಗತಿಯ ಕುಮಾರಿ ರಿಷಿಕಾ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈಕೆ ಕಳೆದ ವರ್ಷ ನಡೆದ ಇದೇ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.
    ವಿಜೇತ ವಿದ್ಯಾರ್ಥಿನಿಯನ್ನು ಧರ್ಮಸ್ಥಳದಲ್ಲಿ ನಡೆದ “ಪುರಸ್ಕಾರ ಸಮಾರಂಭದಲ್ಲಿ” ಖ್ಯಾತ ಸಾಹಿತಿ ಡಾ. ವಸಂತ ಭಾರದ್ವಾಜ್, ಕಬ್ಬಿನಾಲೆ ಇವರು ಸನ್ಮಾನಿಸಿದ್ದಾರೆ.

    ವಿದ್ಯಾರ್ಥಿಯ ಈ ಸಾಧನೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರೂ ಆದ ಶ್ರೀ ಶರಣ ಕುಮಾರ ಅವರು ಅಭಿನಂದಿಸಿದರು.

  • ಬೆಂಗಳೂರು-ಕಾರವಾರ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಲು ಕೇಂದ್ರ ರೈಲ್ವೇ ಸಚಿವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

    ಬೆಂಗಳೂರು-ಕಾರವಾರ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಲು ಕೇಂದ್ರ ರೈಲ್ವೇ ಸಚಿವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು :ಬೆಂಗಳೂರು-ಕಾರವಾರ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16595/16596 ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಲು ಕೇಂದ್ರ ರೈಲ್ವೇ ಸಚಿವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.

    ಬೆಂಗಳೂರಿನಿಂದ ಮಂಗಳೂರು ಬೈಂದೂರು ಮಾರ್ಗವಾಗಿ ಕಾರವಾರಕ್ಕೆ ರೈಲು ಸೇವೆಗಳನ್ನು ನೇರ ಮಾರ್ಗದಲ್ಲಿ ವಿಸ್ತರಿಸಿದ್ದಕ್ಕೆ ನಾನು ಕೇಂದ್ರ ಸರಕಾರಕ್ಕೆ ಕೃತಜ್ಞನಾಗಿದ್ದೇನೆ ಹಾಗೂ SMVT ಬೆಂಗಳೂರಿನಿಂದ ಮಂಗಳೂರುವರೆಗೆ ಇದ್ದ ರೈಲಿನ ಸೇವೆಗಳನ್ನು ಮುರ್ಡೇಶ್ವರದವರೆಗೆ ವಿಸ್ತರಿಸಿದ್ದಕ್ಕಾಗಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಕೃತಜ್ಜತೆ ಸಲ್ಲಿಸಿದ್ದಾರೆ

    ಬೈಂದೂರು ಶಾಸಕರಾದ ಗುರುರಾಜ್ ಶಟ್ಟಿ ಗಂಟಿಹೊಳೆ ಅವರು ರೈಲು ಸಂಖ್ಯೆ 16595/16596 ಪಂಚಗಂಗಾ ಎಕ್ಸ್‌ಪ್ರೆಸ್‌ನ ಸಾಮರ್ಥ್ಯವನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ ಹಾಗೂ ಇದು ಕರಾವಳಿ ಕರ್ನಾಟಕ ಪ್ರದೇಶದ ಸಾರ್ವಜನಿಕರ ನಿರಂತರ ಬೇಡಿಕೆಯೂ ಸಹ ಆಗಿದೆ. ಪ್ರಸ್ತುತ, ಎಲ್ಲಾ ಇತರ ರೈಲುಗಳು 22 LHB ಕೋಚ್‌ಗಳೊಂದಿಗೆ ಓಡುತ್ತಿದ್ದರೂ, ಪಂಚಗಂಗಾ ಎಕ್ಸ್ ಪ್ರೆಸ್ ರೈಲು ಕೇವಲ 14 LHB ಕೋಚ್‌ಗಳೊಂದಿಗೆ ಓಡುತ್ತಿದೆ. ಕರಾವಳಿ ಕರ್ನಾಟಕ ಪ್ರದೇಶದಿಂದ ಬೆಂಗಳೂರಿಗೆ ಕನಿಷ್ಠ ಸಮಯದೊಂದಿಗೆ ತಲುಪುವ ಏಕೈಕ ರೈಲು ಇದಾಗಿದ್ದು, ಈ ರೈಲಿನಲ್ಲಿ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸುವುದು ಅತ್ಯಗತ್ಯ. ಶಿರಾಡಿ ಘಾಟ್ ಮೂಲಕ ರಸ್ತೆ ಪ್ರಯಾಣ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಮತ್ತು ಇತರ ಘಾಟ್ ರಸ್ತೆಗಳೂ ಹಾಳಾಗಿವೆ. ಕರಾವಳಿ ಕರ್ನಾಟಕ ಪ್ರದೇಶಕ್ಕೆ ಬೇರೆ ಯಾವುದೇ ಪರ್ಯಾಯ ರೈಲು ಮಾರ್ಗ ಲಭ್ಯವಿಲ್ಲ. ಅನೇಕ ಜನರು ತಮ್ಮ ಜೀವನೋಪಾಯಕ್ಕಾಗಿ ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಅವಲಂಬಿಸಿದ್ದಾರೆ ಮತ್ತು ನಿರಂತರವಾಗಿ ಬೆಂಗಳೂರಿನಿಂದ ಕರಾವಳಿಗೆ ಹಾಗೂ ಕರಾವಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಾರೆ.

    ಪಂಚಗಂಗಾ ರೈಲು ಸುಬ್ರಹ್ಮಣ್ಯ, ಕಟೀಲು, ಧರ್ಮಸ್ಥಳ, ಉಡುಪಿ, ಕೊಲ್ಲೂರು, ಮುರ್ಡೇಶ್ವರ, ಗೋಕರ್ಣ ಮುಂತಾದ ಯಾತ್ರಾ ಕೇಂದ್ರಗಳ ಜೊತೆಗೆ ಮಣಿಪಾಲ, ಮೂಡಬಿದ್ರೆ, ಮಂಗಳೂರು ಹಾಗೂ ಇತರೆ ಭಾಗಗಳ ಶಿಕ್ಷಣ ಸಂಸ್ಥೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಅಸಂಘಟಿತ ಕಾರ್ಮಿಕರಿಗೆ ರೈಲು ಅತ್ಯಂತ ಅಗ್ಗದ ಮತ್ತು ಅನುಕೂಲಕರ ಸಾರಿಗೆ ಸಂಪರ್ಕವಾಗಿದೆ.

    ಪ್ರಸ್ತುತ ಈಗಿರುವ ಪಂಚಗಂಗಾ ರೈಲಿನ ನಿರ್ಗಮನ ಹಾಗೂ ಆಗಮನದ ಸಮಯದಲ್ಲಿ ಯಾವುದೇ ವ್ಯತ್ಯಾಸಗಳು ಆಗದ ರೀತಿಯಲ್ಲಿ ಬೋಗಿಗಳನ್ನು ಹೆಚ್ಚಿಸಲು ಅವಕಾಶವಿರುತ್ತದೆ.

    ಆದ್ದರಿಂದ ರೈಲು ಸಂಖ್ಯೆ 16595/16596 ಪಂಚಗಂಗ ಎಕ್ಸ್‌ಪ್ರೆಸ್‌ನ 14 LHB ಕೋಚ್‌ಗಳನ್ನು 22 LHB ಕೋಚ್‌ಗಳಿಗೆ ಬೆಂಗಳೂರು ಹಾಗೂ ಕಾರವಾರದ ಆಗಮನ ಮತ್ತು ನಿರ್ಗಮನ ಸಮಯದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಹೆಚ್ಚಿಸುವ ಮೂಲಕ ಕರಾವಳಿ ಕರ್ನಾಟಕದ ಜನರಿಗೆ ಅನುಕೂಲ ಮಾಡಿಕೊಡಬೇಕೇಂದು ಸಚಿವರಲ್ಲಿ ಸಂಸದ ಬಿ.ವೈ.ರಾಘವೇಂದ್ರ ವಿನಂತಿಸಿದ್ದಾರೆ

  • ಕುಂದಾಪುರ: ರಾಷ್ಟ್ರೀಯ ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ನಲ್ಲಿ ತ್ರಿಷಾ ದೇವಾಡಿಗ ದ್ವಿತೀಯ

    ಕುಂದಾಪುರ: ರಾಷ್ಟ್ರೀಯ ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ನಲ್ಲಿ ತ್ರಿಷಾ ದೇವಾಡಿಗ ದ್ವಿತೀಯ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಐಡಿಯಲ್ ಪ್ಲೇ ಅಭಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಕೊಯಮುತ್ತೂರಿನಲ್ಲಿ ನಡೆದ 19ನೇ ರಾಷ್ಟ್ರೀಯ ಮಟ್ಟದ ಅಭಾಕಸ್ ಮತ್ತು 15 ನೇ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರ್ ನ ತ್ರಿಷಾ ಆರ್ ದೇವಾಡಿಗ ಮೊದಲ ಲೆವೆಲ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

    ಜನವರಿ 28ರಂದು ತಮಿಳುನಾಡಿನ ಕೊಯಮುತ್ತೂರಿನಲ್ಲಿ ರಾಷ್ಟ್ರ ಮಟ್ಟದ ಅಭಾಕಸ್ ಮತ್ತು 15 ನೇ ವೇದಿಕ್ ಮಾಥ್ಸ್ ಸ್ಪರ್ಧೆ ನಡೆದಿದೆ. ಕುಂದಾಪುರ ಸೆಂಟರ್ ನ ಮುಖ್ಯಸ್ಥ ಪ್ರಸನ್ನ ಕೆ. ಬಿ ಹಾಗೂ ಭೋದಕ ಮಹಾಲಕ್ಷ್ಮೀ ಮತ್ತು ದೀಪಾ ತರಭೇತಿ ನೀಡಿದ್ದಾರೆ. ತ್ರಿಷಾ ದೇವಾಡಿಗ ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ನ ನಾಲ್ಕನೆ ತರಗತಿ ವಿದ್ಯಾರ್ಥಿನಿ.

  • ಕೋಟ :ಸಮಾಜಸೇವೆಯೇ ಸಂಘಸಂಸ್ಥೆಗಳ ನೈಜ ಕಾಳಜಿಯಾಗಲಿ- ಗಣೇಶ್.ಜಿ.ಚಲ್ಲಮಕ್ಕಿ

    ಕೋಟ :ಸಮಾಜಸೇವೆಯೇ ಸಂಘಸಂಸ್ಥೆಗಳ ನೈಜ ಕಾಳಜಿಯಾಗಲಿ- ಗಣೇಶ್.ಜಿ.ಚಲ್ಲಮಕ್ಕಿ

    ಪಂಚವರ್ಣದ 194ನೇ ವಾರದ ಸ್ವಚ್ಛತಾ ಅಭಿಯಾನ ಚೆಲ್ಲಮಕ್ಕಿ ನಾಗಬನ ವರ್ಧಂತ್ಯುತ್ಸವದ ಪ್ರಯುಕ್ತ ಸ್ವಚ್ಛತೆ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಸಮಾಜ ಸೇವೆಯ ಧ್ಯೇಯ ಅರಿತು ಅದನ್ನು ಸಮಾಜಕ್ಕೆ ನೈಜವಾಗಿ ಅರ್ಪಿಸಿಕೊಳ್ಳಬೇಕು ಆಗಮಾತ್ರ ಅದರ ಮಹತ್ವ ಹೆಚ್ಚಿಸುತ್ತದೆ ಎಂದು ಶಿಕ್ಷಣತಜ್ಞ ಗಣೇಶ್ ಜಿ ಚಲ್ಲಮಕ್ಕಿ ಹೇಳಿದರು.

    ಸಾಸ್ತಾನದ ಗುಂಡ್ಮಿ ಚೆಲ್ಲಮಕ್ಕಿ ನಾಗ ದೇವಸ್ಥಾನ ಇದರ 15ನೇ ವರ್ಧಂತ್ಯುತ್ಸವ ಪ್ರಯುಕ್ತ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತ್ರತ್ವದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಡಿ194ನೇ ಪರಿಸರಸ್ನೇಹಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಿಸ್ವಾರ್ಥ ಸೇವೆಯನ್ನು ತನ್ನ ಸಂಘದ ತಳಹದಿಯಾಗಿ ಇರಿಸಿಕೊಂಡು ಸತತ 25 ವರ್ಷಗಳಿಂದ ಕನ್ನಡಪರ, ಸಾಮಾಜಿಕ ಕಾರ್ಯಕ್ರಮಗಳ ನಡುವೆ ಪರಿಸರಸ್ನೇಹಿ ಕಾರ್ಯಕ್ರಮಗಳಿಂದ ರಸ್ತೆ,ದೇವಳಗಳ ಸ್ವಚ್ಛತಾ ಕಾರ್ಯ ,ಗಿಡನೆಟ್ಟು ಪೋಷಿಸುವ ಕಾರ್ಯಗಳನ್ನು ಹಮ್ಮಿಕೊಂಡ ಪಂಚವರ್ಣದ ಸಾಮಾಜಿಕ ಬದ್ಧತೆಯನ್ನು ಸಮಾಜದ ಮುಂದೆ ತೆರೆದಿಟ್ಡರು.

    ಸಂಘಸಂಸ್ಥೆಗಳು ಹೆಸರಿಗಾಗಿ ಉಳಿಯದೆ ನಿತ್ಯನಿರಂತರ ಸಾಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಒಂದಿಷ್ಟು ಜನರಿಗೆ ಪರೋಪಕಾರದ ಬೀಜ ಬಿತ್ತುವ ಕಾರ್ಯಗಳಾಗಲಿ ಎಂದು ತಮ್ಮ ಅಭಿಮತ ವ್ಯಕ್ತಪಡಿಸಿದ್ದರು.

    ದೇಗುಲದ ಆಡಳಿತ ಮಂಡಳಿಯ ಪ್ರಮುಖರಾದ ದಿನಕರ್ ವಿ. ರಾವ್,ರಾಘವೇಂದ್ರ ಸರ್ವೇಗಾರ್ ,ವಿವೇಕ ಗುಂಡ್ಮಿ,ವಿಘ್ನೇಶ ಗಣೇಶ್,ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ,ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಜತೆಕಾರ್ಯದರ್ಶಿ ಶಕೀಲ ಎನ್ ಪೂಜಾರಿ, ಯುವಕ ಮಂಡಲದ ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.