Category: ಸುದ್ದಿ

  • ತಾಯಿಯಿಂದ ದೂರವಾಗಿದ್ದ ಫಿಜಿ ದೇಶದ ಮಕ್ಕಳು ಮರಳಿ ತಾಯ್ನಿನಾಡಿಗೆ, ಜೀವನ್ ಮಿತ್ರ ಸೇವಾ ಟ್ರಸ್ಟ್ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

    ತಾಯಿಯಿಂದ ದೂರವಾಗಿದ್ದ ಫಿಜಿ ದೇಶದ ಮಕ್ಕಳು ಮರಳಿ ತಾಯ್ನಿನಾಡಿಗೆ, ಜೀವನ್ ಮಿತ್ರ ಸೇವಾ ಟ್ರಸ್ಟ್ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೌಟುಂಬಿಕ ಕಾರಣದಿಂದ ತಾಯಿಯಿಂದ ದೂರವಾಗಿ ಎಂಟು ವರ್ಷ ಕಾಲ ಭಾರತದಲ್ಲಿ ವಾಸವಾಗಿದ್ದ ಮಕ್ಕಳಿಬ್ಬರು ಕೋಟದ ಜೀವನ್ ಮಿತ್ರ ಸೇವಾ ಟ್ರಸ್ಟ್ ನೆರವಿನಿಂದ ಮರಳಿ ತಾಯಿ ಮಡಿಲು ಸೇರಿ ಫಿಜಿ ದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

    ಫಿಜಿ ದೇಶದ ಪ್ರಜೆ ಕ್ರಿಶ್ಚಿನಾ ಎನ್ನುವವರು ಉಡುಪಿಯ ಕಾರ್ಕಳ ಮೂಲದ, ಫಿಜಿಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದ ಯುವಕನ್ನು ಮದುವೆಯಾಗಿದ್ದು ಇವರಿಗೆ ಪುತ್ರ ಹಾಗೂ ಪುತ್ರಿ ಇದ್ದರು. ಕೌಟುಂಬಿಕ ಸಮಸ್ಯೆಯಿಂದ ಇಬ್ಬರು ಹಲವು ವರ್ಷದ ಹಿಂದೆ ವಿಚ್ಚೇದನ ಪಡೆದಿದ್ದರು. ವಿಚ್ಚೇದನದ ಅನಂತರ ಎಂಟು ವರ್ಷದ ಹಿಂದೆ ಮಕ್ಕಳಾದ ಟ್ರೆಸ್ಸಿಮತ್ತು ಜೆಬ್ಬಾನ್ ಅವರನ್ನು ತಂದೆ ಫಿಜಿಯಿಂದ ಕಾರ್ಕಳಕ್ಕೆ ಕರೆತಂದು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದರು.

    ಇತ್ತೀಚೆಗೆ ಈ ಇಬ್ಬರು ಮಕ್ಕಳು ಸಾಮಾಜಿಕ ಜಾಲತಾಣದ ಮೂಲಕ ತಾಯಿಯನ್ನು ಸಂಪರ್ಕಿಸಿ ತಾವು ಫಿಜಿ ದೇಶಕ್ಕೆ ಬರುವುದಾಗಿ ಕೋರಿದ್ದರು. ಆದರೆ ವೀಸಾ ಅವಧಿ ಮುಗಿದು ಹಲವು ವರ್ಷ ಕಳೆದಿದ್ದರಿಂದ ಹಿಂದಿರುಗಲು ಕಾನೂನು ಪ್ರಕ್ರಿಯೆ ಕಠಿನವಿತ್ತು, ಅದರಂತೆ ಕ್ರಿಶ್ಚಿನಾ ಅವರು ಫಿಜಿಯಲ್ಲಿ ವಾಸವಿದ್ದ ಕೋಟ ಮೂಲದ ರಾಮ ಮೊಗವೀರ ಅವರಲ್ಲಿ ಮಕ್ಕಳನ್ನು ವಾಪಸು ಕರೆಸಲು ಸಹಕಾರ ನೀಡುವಂತೆ ಕೋರಿದ್ದರು.

    ಮಕ್ಕಳು ಮರಳಿ ತಾಯಿ ಮಡಿಲಿಗೆ
    ಜೀವನ್ ಮಿತ್ರ ಸಂಘಟನೆಯವರು ಮಕ್ಕಳನ್ನು ಪತ್ತೆಹಚ್ಚಿ ಕಾನೂನಾತ್ಮಕ ಪ್ರಕ್ರಿಯೆ ನೆರವೇರಿಸಿದ್ದರು. ಕ್ರಿಶ್ಚಿನಾ ಅವರು ನ.15 ರಂದು ಕೋಟಕ್ಕೆ ಆಗಮಿಸಿ ತಮ್ಮ ಮಕ್ಕಳೊಂದಿಗೆ ಫಿಜಿ ದೇಶಕ್ಕೆ ಹಿಂದಿರುಗಿದ್ದಾರೆ. ಸಂಘಟನೆಯ ಮುಖ್ಯಸ್ಥರಾದ ನಾಗೇಂದ್ರ ಪುತ್ರನ್, ನಾಗರಾಜ್ ಪುತ್ರನ್ ಈ ಕಾರ್ಯದಲ್ಲಿ ಶ್ರಮಿಸಿದ್ದು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರು ಮತ್ತು ಜಿಲ್ಲಾ ಪೆÇಲೀಸರು, ವಿದೇಶಾಂಗ ವ್ಯವಹಾರ ಕಚೇರಿಯ ಮುಖ್ಯಸ್ಥರು ಕಾನೂನು ಪ್ರಕ್ರಿಯೆ ನಿರ್ವಹಿಸಲು ಸಹಕರಿಸಿದ್ದಾರೆ ಎಂದು ಜೀವನ್‍ಮಿತ್ರ ಸಂಘಟನೆಯ ಮುಖ್ಯಸ್ಥರು ತಿಳಿಸಿದ್ದಾರೆ.

  • ಅಬ್ಬಿ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಗುರುವಂದನೆ

    ಅಬ್ಬಿ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಗುರುವಂದನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ವಂಡ್ಸೆ ಸಮೀಪದ ಅಬ್ಬಿ ಚಿತ್ತೇರಿಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಎ.ಜಿ ಮಂಜುನಾಥ ಗುರುಸ್ವಾಮಿ ಇವರ 18ನೇ ವರ್ಷದ ಹಾಗೂ ಅಯ್ಯಪ್ಪ ಭಕ್ತವೃಂದದವರ ಶಬರಿಮಲೈ ಯಾತ್ರೆಯ ಪ್ರಯುಕ್ತ ಗುರುವಂದನೆ ಕಾರ್ಯಕ್ರಮ ಜರಗಿತು.

    ಕೊಲ್ಲೂರು ದೇವಸ್ಥಾನದ ಮಾಜಿ ಧರ್ಮದರ್ಶಿ, ಸುದೀರ್ಘ ಅವಧಿಯಿಂದ ಶಬರಿಮಲೈ ಯಾತ್ರೆ ಮಾಡುತ್ತಿರುವ ವಂಡಬಳ್ಳಿ ಜಯರಾಮ ಶೆಟ್ಟಿ, ಗುರುಸ್ವಾಮಿಗಳಾದ ಸೂರ್ಯನಾರಾಯಣ ಪೂಜಾರಿ, ಪ್ರಭಾಕರ ಗಾಣಿಗ, ಸದಾನಂದ ನಾಯ್ಕ್ ಅವರಿಗೆ ಎ.ಜಿ ಮಂಜುನಾಥ ಅವರು ಗುರುವಂದನೆ ಸಲ್ಲಿಸಿದರು.

    ಅಯ್ಯಪ್ಪ ವ್ರತಧಾರಿಗಳು ಉಪಸ್ಥಿತರಿದ್ದರು. ವಾಸು ಜಿ. ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.

    ಬಳಿಕ ಮಹಾಪೂಜೆ, ಅನ್ನಸಂತರ್ಪಣೆ, ಸ್ಥಳೀಯ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಸಂಜೆ ಇರುಮುಡಿ ಕಾರ್ಯಕ್ರಮ ಜರುಗಿತು.

  • ಕೋಟ :ಪಂಚವರ್ಣಯ ರೈತರೆಡೆಗೆ ನಮ್ಮ ನಡಿಗೆ –ಯಶೋಧ ಭಂಡಾರಿ ಆಯ್ಕೆ

    ಕೋಟ :ಪಂಚವರ್ಣಯ ರೈತರೆಡೆಗೆ ನಮ್ಮ ನಡಿಗೆ –ಯಶೋಧ ಭಂಡಾರಿ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಸೇರಿದಂತೆ ವಿವಿಧ ಭಾಗಗಳ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 30ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಬರುವ ನ.28ರ ಸಂಜೆ.4.30ಗ ನಡೆಯಲಿದ್ದು ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಗುಂಡ್ಮಿ ಪರಿಸರದ ಯಶೋಧ ಭಂಡಾರಿ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

  • ಕುಂದಾಪುರ: ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ರಾಜ್ಯ ಪ್ರಶಸ್ತಿ

    ಕುಂದಾಪುರ: ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ರಾಜ್ಯ ಪ್ರಶಸ್ತಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ರಾಜ್ಯ ಸರಕಾರದಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಯು ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಲಭಿಸಿದೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಈ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮೀನುಗಾರಿಕಾ ಮತ್ತು ಬಂದರು ಖಾತೆ ಸಚಿವ ಮಂಕಾಳ್ ಎಸ್.ವೈದ್ಯ,ಇಲಾಖೆಯ ನಿರ್ದೇಶಕರು ಮತ್ತು ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

    ಬಿ.ಮಂಜುನಾಥ ಕುಂದರ್ ಚಾತ್ರಬೆಟ್ಟು, ಉಪಾಧ್ಯಕ್ಷ ರಾಜು ತೋಟದ ಬೆಟ್ಟು, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಮೇಶ್ ಕೆ ಕಾಂಚನ್, ನಿರ್ದೇಶಕರಾದ ಬಿ. ಶೇಖರ್ ಮೊಗವೀರ ಅಂಕದಕಟ್ಟೆ, ಸಿಬ್ಬಂದಿಗಳಾದ ಗಣೇಶ್ ಮತ್ತು ಶ್ರೀಧರ್ ರವರು ಪ್ರಶಸ್ತಿ ಸ್ವೀಕರಿಸಿದರು.

    ಮೀನುಗಾರಿಕೆ ಇಲಾಖೆಯಿಂದ ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ಈ ವಲಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ, ಅತ್ಯುತ್ತಮ ಮೀನುಗಾರಿಕೆ ಸಹಕಾರ ಸಂಘಗಳನ್ನು ಹಾಗೂ ಪ್ರಗತಿ ಪರ ಮೀನುಕೃಷಿಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಅಲ್ಲದೇ ನವೆಂಬರ್ 18ರಂದು 70ನೇ ಅಖಿಲ ಭಾರತ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ “ಅತ್ಯುತ್ತಮ ಮೀನುಗಾರರ ಸಹಕಾರಿ ಸಂಘ” ಪ್ರಶಸ್ತಿ ಕೂಡ ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಲಭಿಸಿದೆ.

  • ಕುಂದಾಪುರ :ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ, ಸಾಹಿತ್ಯಕ ಸ್ಪರ್ಧೆಗಳಲ್ಲಿ ಸಾಧನೆ ಮೆರೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು.

    ಕುಂದಾಪುರ :ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ, ಸಾಹಿತ್ಯಕ ಸ್ಪರ್ಧೆಗಳಲ್ಲಿ ಸಾಧನೆ ಮೆರೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು.

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ: ಕುಂದಾಪುರದ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನವರು ಆಯೋಜಿಸಿದ ‘ಉಗಮ’ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಸಾಂಸ್ಕೃತಿಕ, ಸಾಹಿತ್ಯಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ದ್ವಿತೀಯ ಸ್ಥಾನ, ಪೋಟೋ ಕ್ಯಾಪ್ಚರ್ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅಮರನಾಥ್ ದ್ವಿತೀಯ ಸ್ಥಾನ, ಹ್ಯಾಸ್ಟ್ಯಾಗ್ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅನಘಾ ಪ್ರಥಮ ಸ್ಥಾನ, ಸಾಮೂಹಿಕ ಸಾಮೂಹಿಕ ಫಿಲ್ಮಿ ಡ್ಯಾನ್ಸ್ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಸಮನ್ವಿತ,ಅಲಕಾ, ಹೆಬ್ಬಾರ್, ಇಂಪಾ,ವನಿಧಿ, ಕಾರ್ತಿಕ್, ಲಾಸ್ಯ,ವಂದಿತಾ ತೃತೀಯ ಸ್ಥಾನ ಪಡೆದಿರುತ್ತಾರೆ.

    ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

  • ನಾಗೂರು :ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನೇತೃತ್ವದಲ್ಲಿ ಸಹಕಾರಿ ಸಪ್ತಾಹ ಸಮಾರೋಪ

    ನಾಗೂರು :ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನೇತೃತ್ವದಲ್ಲಿ ಸಹಕಾರಿ ಸಪ್ತಾಹ ಸಮಾರೋಪ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಸಹಕಾರಿ ಸಂಸ್ಥೆಗಳು ಜನರಿಗೆ ಹೆಚ್ಚು ಸೇವೆ ನೀಡುತ್ತಿವೆ. ಸಾಲ ಸೌಲಭ್ಯವನ್ನು ನೀಡುವುದರ ಜೊತೆಗೆ ಶಿಕ್ಷಣ ಸಾಮಾಜಿಕ ವಲಯಕ್ಕೂ ನೆರವು ನೀಡುವ ಮೂಲಕ ಖಂಬದಕೋಣೆ ರೈತರ ಸೇವಾ ಸಹಕಾರಿ ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

    ನಾಗೂರು ಶ್ರೀ ಕೃಷ್ಣಲಲಿತ ಕಲಾಮಂದಿರದಲ್ಲಿ ನ.20ರಂದು ನಡೆದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಒಳ್ಳೆಯ ಸಂಸ್ಥೆಯಾಗಿ ಬೆಳೆದಿದೆ. 9 ಕೋಟಿ ವೆಚ್ಚದಲ್ಲಿ ಸಹಕಾರಿ ಮಾಲ್ ನಿರ್ಮಾಣದಂತಹ ದೂರದೃಷ್ಟಿಯ ಕಾರ್ಯಕ್ರಮ ಹಾಕಿಕೊಂಡಿದ್ದಾರೆ. ಪ್ರಕಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಂಸ್ಥೆಯನ್ನು ಲಾಭದಾಯಕವನ್ನಾಗಿ ನಡೆಸುವ ಮೂಲಕ ಭದ್ರ ಬುನಾದಿ ಹಾಕಿದ್ದಾರೆ ಎಂದರು.

    ದಿಕ್ಸೂಚಿ ಭಾಷಣ ಮಾಡಿದ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಅವರು ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆಯ ಬಗ್ಗೆ ಮಾತನಾಡಿ 119 ವರ್ಷಗಳ ಇತಿಹಾಸ ಹೊಂದಿರುವ ಸಹಕಾರ ಚಳವಳಿ ಅವಿಭಜಿತ ದ.ಕ ಜಿಲ್ಲೆಯಲ್ಲಿ ಬಿರುಸಾಗಿ ಬೆಳೆಯಲು ಮೊಳಹಳ್ಳಿ ಶಿವರಾಯರು ಕಾರಣ. ನಾನು ಬೆಳೆಯುವುದರೊಂದಿಗೆ ಇನ್ನೊಬ್ಬರನ್ನು ಬೆಳೆಸುವುದು ಸಹಕಾರದ ತತ್ವ. ಸಹಕಾರದ ಅರಿವು, ಪ್ರಜ್ಞಾವಂತಿಕೆಯಿಂದ ಆರ್ಥಿಕ ವಿಕಾಸವಾಗಿದೆ. ಸಹಕಾರ ಕ್ಷೇತ್ರಗಳ ಬೆಳವಣಿಗೆಯಲ್ಲಿ ಮಹಿಳೆಯರ ಕೊಡುಗೆಯೂ ಇದೆ ಎಂದರು.

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್.ಪ್ರಕಾಶಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಹಕಾರ ಕ್ಷೇತ್ರದ ಏಳು-ಬೀಳುಗಳ ಬಗ್ಗೆ ಚರ್ಚೆ ಮಾಡುವ, ವಿಶ್ಲೇಷಣೆ ಮಾಡುವ ಸಂದರ್ಭವೇ ಸಹಕಾರ ಸಪ್ತಾಹ. ಇವತ್ತು ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಳ್ಳೆಯ ದಿನಗಳು ಬರುತ್ತಿವೆ. ವಿವಿಧೋದ್ದೇಶ ಸಹಕಾರಿ ಸಂಘಗಳನ್ನಾಗಿ ಪರಿವರ್ತನೆ ಮಾಡುವ ಅವಕಾಶಗಳನ್ನು ಸರ್ಕಾರ ನೀಡಿದೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಲಭಾಂಶದಲ್ಲಿ ಇವತ್ತು ಒಟ್ಟು ಶಿಕ್ಷಣ, ಸಮುದಾಯಕ್ಕೆ ರೂ.9.86 ಲಕ್ಷ ನೀಡುತ್ತಿದೆ. ಬಹು ನಿರೀಕ್ಷೆಯ ರೈತ ಮಾಲ್ ನಿರ್ಮಾಣದ ಬಗ್ಗೆ ಇ-ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದರು.

    ಪ್ರಾಥಮಿಕ ಕೃಷಿ ಭೂ ಅಭಿವೃದ್ದಿ ಬ್ಯಾಂಕ್ ಕುಂದಾಪುರ ಇದರ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ರಾಜು ಪೂಜಾರಿ, ಎಂ.ಮಹೇಶ ಹೆಗ್ಡೆ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಶೇಖರ ಖಾರ್ವಿ, ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
    ಈ ಸಂದರ್ಭದಲ್ಲಿ ಸಂಘದ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗೌರವ ಶಿಕ್ಷಕರಿಗೆ ಗೌರವಧನ ವಿತರಣೆ, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

    ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ನಿರ್ದೇಶಕರಾದ ಬಿ.ರಘುರಾಮ ಶೆಟ್ಟಿ, ಕೆ.ಮೋಹನ ಪೂಜಾರಿ, ಬಿ.ಎಸ್ ಸುರೇಶ ಶೆಟ್ಟಿ, ಗುರುರಾಜ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ ದೇವಾಡಿಗ, ಹೂವ ನಾಯ್ಕ, ದಿನೀತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್.ಪೈ ಸ್ವಾಗತಿಸಿದರು. ಆಕಾಶವಾಣಿ ಕಲಾವಿದ ಡಾ.ಗಣೇಶ ಗಂಗೊಳ್ಳಿ ನಾಡಗೀತೆ ಹಾಡಿದರು. ಹಿರಿಯ ವ್ಯವಸ್ಥಾಪಕ ಚಂದ್ರ ಶೆಟ್ಟಿ ವಂದಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಜಿ ಕಾರ್ಯಕ್ರಮ ನಿರ್ವಹಿಸಿದರು.

  • ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

    ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ರಾಜ್ಯದ ಕಾರ್ಮಿಕ ಕಲ್ಯಾಣ ಖಾತೆ ಸಚಿವ ಸಂತೋಷ್ ಲಾಡ್ ಸೋಮವಾರ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಸಚಿವರನ್ನು ಶ್ರೀ ದೇಗುಲದ ಮಾಜಿ ಅಧ್ಯಕ್ಷ ಆನಂದ್ ಸಿ. ಕುಂದರ್ ಸ್ವಾಗತಿಸಿಕೊಂಡರು.

    ನಂತರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಗುಲದ ವತಿಯಿಂದ ಶಾಲು ಹೊದಿಸಿ ಪ್ರಸಾದ ವಿತರಿಸಿ ಗೌರವಿಸಲಾಯಿತು.

    ಕಾಂಗ್ರೆಸ್ ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಜಿ ತಿಮ್ಮ ಪೂಜಾರಿ, ನಿರ್ದೇಶಕ ಮಹೇಶ್ ಶೆಟ್ಟಿ,ಕಾಂಗ್ರೆಸ್ ಸ್ಥಳೀಯ ಮುಖಂಡ ದೇವೇಂದ್ರ ಗಾಣಿಗ, ಧಾರವಾಡದ ಹೋಟೆಲ್ ಉದ್ಯಮಿ ಅಶೋಕ್ ಶೆಟ್ಟಿ,
    ಶ್ರೀ ದೇಗುಲದ ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ಅರ್ಚಕರಾದ ಕೃಷ್ಣ ಜೋಗಿ ,ಅಶ್ವಥ್ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಮತ್ತಿತರರು ಇದ್ದರು.

  • ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

    ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ 2023-24 ರ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಿನನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಶ್ರವಣ್ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

    ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

  • ಕುಂದಾಪುರ :ಜಿಲ್ಲಾ ಮಟ್ಟದ ರಸಪ್ರಶ್ನೆಯಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

    ಕುಂದಾಪುರ :ಜಿಲ್ಲಾ ಮಟ್ಟದ ರಸಪ್ರಶ್ನೆಯಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ :ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಶಾಶ್ವತ್ ಮತ್ತು ಪ್ರಥ್ವಿನ್ ಪ್ರಥಮ ಸ್ಥಾನ ಪಡೆದಿದ್ದಾರೆ.

    ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ತೃತೀಯ ಸ್ಥಾನ ಪಡೆದಿದ್ದಾಳೆ.

    ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ್ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ

  • ಕೋಟ :ಅಘೋರೇಶ್ವರ ಕಲಾರಂಗದ ರಾಜ್ಯೋತ್ಸವ ಪ್ರಶಸ್ತಿಯನ್ನು ಶಿಕ್ಷಕ, ವಾಗ್ಮಿ ಸತೀಶ್ಚಂದ್ರ ಶೆಟ್ಟಿಯವರಿಗೆ ಪ್ರದಾನ

    ಕೋಟ :ಅಘೋರೇಶ್ವರ ಕಲಾರಂಗದ ರಾಜ್ಯೋತ್ಸವ ಪ್ರಶಸ್ತಿಯನ್ನು ಶಿಕ್ಷಕ, ವಾಗ್ಮಿ ಸತೀಶ್ಚಂದ್ರ ಶೆಟ್ಟಿಯವರಿಗೆ ಪ್ರದಾನ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಭಾಷೆ ಎಂಬುವುದು ವ್ಯವಹಾರಕ್ಕೆ ಸೀಮಿತಗೊಳ್ಳದೆ ಮನೆ ಮನಗಳಲ್ಲಿ ಮೊಳಗಬೇಕು ಆಗ ಮಾತ್ರ ಮಾತೃಭಾಷೆ ಉಳಿಸಿ ಬೆಳಸಲು ಸಾಧ್ಯ ಎಂದು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ ಹೇಳಿದರು.

    ಶನಿವಾರ ಸಾಲಿಗ್ರಾಮದ ಚಿತ್ರಪಾಡಿ ಕಾರ್ತಟ್ಟು ಅಘೋರೇಶ್ವರ ಕಲಾರಂಗ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಸಂಭ್ರಮ ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿ ಭಾಷೆ ಉಳಿಸುವ ಹೊಣೆಗಾರಿಗೆ ಸಂಘ ಸಂಸ್ಥೆಗಳಿಗೆ ಸಿಮಿತವಲ್ಲ ಬದಲಾಗಿ ಪ್ರತಿಯೊಬ್ಬ ಕನ್ನಡಿಗನಲ್ಲೂ ಪಸರಿಸಬೇಕು, ಪ್ರಸ್ತುತ ಕಾಲಘಟ್ಟದಲ್ಲಿ ಆಂಗ್ಲ ಶಿಕ್ಷಣದ ವ್ಯಾಮೂಹಕ್ಕೆ ಬಲಿಯಾಗುತ್ತಿದ್ದಾರೆ ಅದೊಂದು ಕಾರ್ಖಾನೆಯಾಗಿ ಪರಿವರ್ತನೆಗೊಂಡಿರುವುದು ದುರದೃಷ್ಟಕರ, ತಾಯಂದಿರರು ಮಕ್ಕಳಿಗೆ ಮೊದಲು ನೈಜ ಸಂಸ್ಕಾರ ಕಲಿಸುವ ಕಾರ್ಯ ಮಾಡಲಿ ಇದರಿಂದ ಬದುಕಿನ ನೈಜ ಪಯಣ ಸಾಗಲಿದೆ. ಮೊಬೈಲ್ ವ್ಯಾಮೂಹದಿಂದ ದೂರವಿರಿಸಲು ಕರೆಇತ್ತರಲ್ಲದೆ ಗ್ರಾಮ ಅಭಿವೃದ್ಧಿಯಾದರೆ ದೇಶ ಉದ್ಧಾರವಾದಂದೆ ಎಂದರು.

    ಇದೇ ವೇಳೆ ಅಘೋರೇಶ್ವರ ಕಲಾರಂಗದ ರಾಜ್ಯೋತ್ಸವ ಪ್ರಶಸ್ತಿಯನ್ನು ಶಿಕ್ಷಕ ,ವಾಗ್ಮಿ ಸತೀಶ್ಚಂದ್ರ ಶೆಟ್ಟಿಯವರಿಗೆ ಪ್ರದಾನಿಸಲಾಯಿತು.

    ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಇವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.

    ಕಾರ್ಯಕ್ರಮವನ್ನು ಅಘೋರೇಶ್ವರ ದೇಗುಲದ ಅಧ್ಯಕ್ಷ ಚಂದ್ರಶೇಖರ ಕಾರಂತ್ ಉದ್ಘಾಟಿಸಿದರು.

    ಮುಖ್ಯ ಅಭ್ಯಾಗತರಾಗಿ ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ,ನಿವೃತ್ತ ಕಾರ್ಯವಾಹಕ ಇಂಜಿನಿಯರ್ ಮಂಜುನಾಥ ನಾಯರಿ, ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಅಧ್ಯಕ್ಷ ಗಿರೀಶ್ ಮಯ್ಯ,ಜಯಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಇದ್ದರು. ಅಘೋರೇಶ್ವರ ಕಲಾರಂಗದ ಅಧ್ಯಕ್ಷ ಉಮೇಶ್ ನಾಯರಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸೂರಜ್ ಹಾವಂಜೆ ನಿರೂಪಿಸಿದರು. ಕಾರ್ಯದರ್ಶಿ ನಾಗರಾಜ್ ಐತಾಳ್ ವಂದಿಸಿದರು. ಸದಸ್ಯರಾದ ಸಂದೀಪ್, ರವಿ ಬನ್ನಾಡಿ ಸಹಕರಿಸಿದರು.