Category: ಸುದ್ದಿ

  • ಕುಂದಾಪುರ :ಬಳ್ಳೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಉಡುಪ ಆಯ್ಕೆ

    ಕುಂದಾಪುರ :ಬಳ್ಳೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಉಡುಪ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಬಳ್ಳೂರು ಶ್ರೀ ಸಾರ್ವಜನಿಕ ಗಣೇಶೋತ್ಸವ 2024-25ನೇ ಸಾಲಿನ ಅಧ್ಯಕ್ಷರಾಗಿ ವೇದಮೂರ್ತಿ ಶ್ರೀಧರ ಉಡುಪ ಆಯ್ಕೆಗೊಂಡಿರುತ್ತಾರೆ.

    ಇವರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಧರ್ಮದರ್ಶಿಗಳಾಗಿ ಸೇವೆ ಸಲ್ಲಿಸುತ್ತಿದ್ದು ಬಳ್ಳೂರು ಗ್ರಾಮ ಪಂಚಾಯತ್‌ ಮಾಜಿ ಸದಸ್ಯರಾಗಿರುತ್ತಾರೆ. ವಿವಿಧ ಸಂಘ-ಸಂಸ್ಥೆಯ ಧಾರ್ಮಿಕ ಸಲಹೆಗಾರರಾಗಿ ಸೇವೆ ನೀಡುತ್ತಿರುವ ಇವರು ತಮ್ಮ ಸಾಮಾಜಿಕ ಕಾರ್ಯಗಳಿಂದ ಜನಾನುರಾಗಿಯಾಗಿದ್ದಾರೆ. ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಭಾಸ್ಕರ ಪೂಜಾರಿ ನಿಯುಕ್ತಿಗೊಂಡಿದ್ದಾರೆ.

  • ಕೋಟ – ಹೋರಾಟ ತೀವ್ರಗೊಳಿಸಿದ ಲಾರಿ ಮಾಲಿಕರು, ಸ್ಥಳಕ್ಕೆ ಶಾಸಕರ ಭೇಟಿ

    ಕೋಟ – ಹೋರಾಟ ತೀವ್ರಗೊಳಿಸಿದ ಲಾರಿ ಮಾಲಿಕರು, ಸ್ಥಳಕ್ಕೆ ಶಾಸಕರ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕಟ್ಟಡ ಸಾಮಾಗ್ರಿಗಳನ್ನು ಹೊತೊಯುವ ಲಾರಿಗಳು ಕಾನೂನು ಬದ್ಧವಾಗಿ ಸಾಗಾಟ ಮಾಡಬೇಕು ಎಂಬ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆದೇಶದ ಹಿನ್ನಲ್ಲೆಯಲ್ಲಿ ಕೋಟ ವಲಯ ಲಾರಿ ಮಾಲಕರು ಹಾಗೂ ಚಾಲಕರು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ.

    ಕೋಟ ಮೂರ್‍ಕೈ ಬಳಿ ಠಿಕಾಣಿ ಹೂಡಿದ್ದ ಲಾರಿ ಮಾಲಕರು ಹಾಗೂ ಚಾಲಕರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿ ಜಿಲ್ಲಾಡಳಿತ ಕ್ರಮವನ್ನು ಖಂಡಿಸಿದ್ದಾರೆ.

    ರಸ್ತೆಗಳಿದ ಲಾರಿಗಳ ಸಾಲು ಸಾಲು
    ಕಳೆದೊಂದು ವಾರದಿಂದ ಲಾರಿಗಳನ್ನು ರಸ್ತೆಗಿಳಸದೆ ಪ್ರತಿಭಟಿಸುತ್ತಿರುವ ಹಿನ್ನಲ್ಲೆಯಲ್ಲಿ ಲಾರಿ ಮಾಲಕರು ಬುಧವಾರ ತಮ್ಮ ಎಲ್ಲಾ ಲಾರಿಗಳನ್ನು ಕೋಟ ಹೈಸ್ಕೂಲ್ ನಿಂದ ಕೋಟದವರೆಗೆ ರಸ್ತೆ ಸನಿಹ ಸಾಲು ಸಾಲಾಗಿ ನಿಲ್ಲಿಸಿ ತಮ್ಮ ಹೋರಾಟ ಕಾವಿಗೆ ಮುನ್ನಡಿ ಬರೆದು ಪ್ರತಿಭಟಿಸಿ ತಮ್ಮ ಆಕ್ರೋಶ ಹೊರಹಾಕಿದರು..

    ಮಾಜಿ ಸಚಿವ, ಶಾಸಕರು ಭೇಟಿ
    ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ,ಶಾಸಕ ಕಿರಣ್ ಕುಮಾರ್ ಕೊಡ್ಗಿ,ಬಿಜೆಪಿ ಮುಖಂಡರಾದ ಕಿದಿಯೂರು ಉದಯ್ ಕುಮಾರ್ ಶೆಟ್ಟಿ ,ಸ್ಥಳೀಯ ನ್ಯಾಯವಾದಿಗಳು ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ ಇತ್ತ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ತಮ ಎಲ್ಲಾ ಶಾಸಕರ ಉಪಸ್ಥಿತಿಯಲ್ಲಿ ಸಭೆ ಅಯೋಜಿಸಲು ಸೂಚಿಸಿದ್ದಾರೆ.

    ಕೇಸು ದಾಖಲಿಸದಿರಿ
    ನಮ್ಮ ಲಾರಿಗಳು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವುದರಿಂದ ನಮ್ಮ ಲಾರಿಗಳ ಮೇಲೆ ಕೇಸು ದಾಖಲಿಸದಂತೆ ಲಾರಿ ಮಾಲಕರು ಆಗ್ರಹಿಸಿದ್ದಾರೆ.

    ಅಂತತ್ರರಾದ ಕೂಲಿ ಕಾರ್ಮಿಕರು
    ಲಾರಿ ಮಾಲಕ ಮುಷ್ಕರದಿಂದ ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಕಟ್ಟಡ ಕಾರ್ಮಿಕರು ಸಾಮಗ್ರಿಗಳಿಲ್ಲದೆ ಅತಂತ್ರವಾಗಿದ್ದಾರೆ.

    ಈ ಸಂದರ್ಭದಲ್ಲಿ ಹೋರಾಟಗಾರ ಪರವಾಗಿ ಭೋಜ ಪೂಜಾರಿ,ಜನಾರ್ದನ ಪೂಜಾರಿ,ವಿನೋದ್ ದೇವಾಡಿಗ,ಮತ್ತಿತರರು ಇದ್ದರು.

  • ಕುಂದಾಪುರ :ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ

    ಕುಂದಾಪುರ :ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಶ್ರೀ ವಿನಾಯಕ ಯುವಕ ಮಂಡಲ ಸಾೈಬ್ರಕಟ್ಟೆ-ಯಡ್ತಾಡಿ ಕೊಡಮಾಡುವ 2023ನೇ ಸಾಲಿನ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರಕ್ಕೆ ಈಜುಪಟು, ಮುಳುಗು ತಜ್ಞ, ಸಮಾಜ ಸೇವೆಯ ಮೂಲಕ ಸಮಾಜಕ್ಕೆ ಮಾದರಿಯಾಗಿರುವ ಅಪತ್ಭಾಂಧವ ಈಶ್ವರ್ ಮಲ್ಪೆ ಅವರನ್ನು ಆಯ್ಕೆ ಮಾಡಲಾಗಿದೆ. 900 ಕ್ಕೂ ಮಿಕ್ಕಿ ಶವವನ್ನು ಮೇಲೆಕೆತ್ತಿದ, ಅದೆಷ್ಟೋ ಜೀವಗಳನ್ನು ರಕ್ಷಿಸಿದ, ಬಂದರಿನಲ್ಲಿ ಮುಳುಗಿದ ವಾಹನಗಳನ್ನು, 200ಕ್ಕೂ ಮಿಕ್ಕಿ ಮೊಬೈಲ್ ಪೋನುಗಳನ್ನು, ಬೋಟುಗಳ ಬಿಡಿ ಭಾಗಗಳನ್ನು ಮೇಲೆ ತರುವಲ್ಲಿ ಅವರ ಸಾಹಸ ಅನನ್ಯವಾದುದು. ಇಂತಹ ಸಾಹಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಈಶ್ವರ್ ಮಲ್ಪೆ ಅವರನ್ನು 2023ನೇ ಸಾಲಿನಲ್ಲಿ ಆಯ್ಕೆ ಮಾಡಲಾಗಿದೆ. ಪುರಸ್ಕಾರ ಪ್ರದಾನ ಕಾರ್ಯಕ್ರಮ ಆಕ್ಟೋಬರ್ 20 ರ ಸಂಜೆ 7.30ಕ್ಕೆ ಮಹಾತ್ಮ ಗಾಂಧಿ ಫ್ರೌಡಶಾಲೆಯಲ್ಲಿ ಸಾೈಬ್ರಕಟ್ಟೆಯಲ್ಲಿ ನಡೆಯುವ ಶ್ರೀ ಸಾರ್ವಜನಿಕ ಶಾರದೋತ್ಸವದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಣ್ಯತಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದೆಂದು ಯುವಕ ಮಂಡಲದ ಅಧ್ಯಕ್ಷ ನಂದೀಶ್ ನಾಯ್ಕ, ಕಾರ್ಯದರ್ಶಿ ರಾಜೇಶ್ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

  • ಸಾಲಿಗ್ರಾಮದಲ್ಲಿ ಬೃಹತ್ ಅಂಚೆ ಸಂಪರ್ಕ ಅಭಿಯಾನ

    ಸಾಲಿಗ್ರಾಮದಲ್ಲಿ ಬೃಹತ್ ಅಂಚೆ ಸಂಪರ್ಕ ಅಭಿಯಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅಂಚೆ ಇಲಾಖೆಯಿಂದ ತಮ್ಮ ಕಾರ್ಯದ ನಡುವೆ ಸಾಮಾಜಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದೆ ಎಂದು ಉಡುಪಿ ಜಿಲ್ಲಾ ಅಂಚೆ ಅಧೀಕ್ಷಕ ರಮೇಶ್ ಪ್ರಭು ಹೇಳಿದರು.

    ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಜ್ಞಾನಮಂದಿರಲ್ಲಿ ಉಡುಪಿ ಅಂಚೆ ಇಲಾಖೆ ಆಶ್ರಯದಲ್ಲಿ ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನ, ಸಾಲಿಗ್ರಾಮ ಪಟ್ಟಣಪಂಚಾಯತ್ ಸಹಯೋಗದೊಂದಿಗೆ ಅಂಚೆ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅಂಚೆ ಇಲಾಖೆ ಬರೆ ಕಾಗದ ಪತ್ರಕ್ಕೆ ಸೀಮಿತಗೊಳ್ಳದೆ ಜನಸಾಮಾನ್ಯ ಸೇವೆಯೊಂದಿಗೆ ಜನಸ್ನೇಹಿಯಾಗಿ ಗುರುತಿಸಿಕೊಂಡಿದೆ ಸಾಮಾನ್ಯ ಜನರ ತುಡಿತಗಳಿಗೆ ಸ್ಪಂದಿಸುವ ತಮ್ಮ ಇಲಾಖೆಯ ಕಾರ್ಯವೈಕರಿಯ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.

    ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ ಎಸ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಸಾಲಿಗ್ರಾಮ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಶಿವ ಎಸ್ ನಾಯ್ಕ್, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಘವೇಂದ್ರ ರಾವ್,ಸಹಾಯಕ ಅಂಚೆ ಅಧೀಕ್ಷಕ ವಸಂತ್,ಕುಂದಾಪುರ ದಕ್ಷಿಣ ವಿಭಾಗದ ಅಂಚೆ ನಿರೀಕ್ಷಕ ರಾಮಚಂದ್ರ,ಉಡುಪಿ ಐಪಿಪಿಬಿ ವಿಭಾಗದ ನಿಖೀಲ್,ಸಾಲಿಗ್ರಾಮ ಅಂಚೆ ಪಾಲಕಿ ಗಾಯತ್ರಿ ಉಪಸ್ಥಿತರಿದ್ದರು. ಸಾಲಿಗ್ರಾಮ ಅಂಚೆ ಪೆದೆ ಪ್ರದೀಪ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಹಿರಿಯ ನಿವೃತ್ತ ಅಂಚೆ ಪೆದೆ ಮಂಜುನಾಥ್ ನಿರೂಪಿಸಿದರು.ಅಂಚೆ ಮೇಲ್ವಿಚಾರಕ ಕುಂದಾಪುರ ಮಹೇಂದ್ರ ವಂದಿಸಿದರು.

  • ಕುಂದಾಪುರ :ಅಂತರ್ ಕಾಲೇಜು ಭಕ್ತಿ ಗೀತೆ ಸ್ಪರ್ಧೆ – ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿಗೆ ಪ್ರಥಮ ಸ್ಥಾನ

    ಕುಂದಾಪುರ :ಅಂತರ್ ಕಾಲೇಜು ಭಕ್ತಿ ಗೀತೆ ಸ್ಪರ್ಧೆ – ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿಗೆ ಪ್ರಥಮ ಸ್ಥಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆದ ಕುಂದಾಪುರ ತಾಲೂಕು ಮಟ್ಟದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್. ಪ್ರಥಮ ಸ್ಥಾನ ಪಡೆದಿರುತ್ತಾಳೆ.

    ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

  • ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಅ. 3 ರಂದು ಕೋಟಕ್ಕೆ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್

    ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಅ. 3 ರಂದು ಕೋಟಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಸಹಯೋಗದಲ್ಲಿ  ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಅ. 3 ರಿಂದ 10ತನಕ  ನಡೆಯಲಿರುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮದ ಉದ್ಟಾಟನೆಯನ್ನು  ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಅಕ್ಟೋಬರ್ 3ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ಮಾಡಲಿದ್ದಾರೆ.
    ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದು. ಘನ ಉಪಸ್ಥಿತಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ  ಸಚಿವರಾದ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ನಲ್ನುಡಿ ಮಾತುಗಳನಾಡಲಿದ್ದು, , ಮುಖ್ಯ ಅತಿಥಿಗಳಾಗಿ  ಕಾರ್ಕಳ ವಿಧಾನಸಭಾ ಕ್ಷೇತ್ರ ಶಾಸಕ  ವಿ ಸುನೀಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ  ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ ಯಶ್‍ಪಾಲ್ ಎ ಸುವರ್ಣ, ಮಾಜಿ ಸಚಿವ ಹಾಗೂ ಕರ್ನಾಟಕ ವಿಧಾನ ಪರಿಷತ್ ಶಾಸಕ  ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟದ ಕಾರ್ಯಾಧ್ಯಕ್ಷ  ಆನಂದ್ ಸಿ ಕುಂದರ್ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ಯೆಡಾಡಿ-ಮತ್ಯಾಡಿ ಶಾಲೆಯಲ್ಲಿ ಶೆಫಿನ್ಸ್ ನ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟನೆ

    ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ಯೆಡಾಡಿ-ಮತ್ಯಾಡಿ ಶಾಲೆಯಲ್ಲಿ ಶೆಫಿನ್ಸ್ ನ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಕುಂದಾಪುರ ತಾಲೂಕಿನ ಹುಣ್ಸೆಮಕ್ಕಿ ಕ್ಲಸ್ಟರ್ನ ಯೆಡಾಡಿ-ಮತ್ಯಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇವರು ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದಡಿಯಲ್ಲಿ ನಡೆಸುತ್ತಿರುವ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ಶಾಲಾಭಿವೃದ್ಧಿ ಮಂಡಳಿಯವರ ವಿಶೇಷ ಕಾಳಜಿಯೊಂದಿಗೆ ಉದ್ಘಾಟಿಸಲಾಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲಯನ್ ಅರುಣ್ ಕುಮಾರ್ ಹೆಗ್ಡೆಯವರು ತಮ್ಮ ಉದ್ಘಾಟನಾ ಬಾಷಣದಲ್ಲಿ, ಸದ್ರಿ ಶಾಲೆಯಲ್ಲಿನ ಮುಖ್ಯೋಪಾಧ್ಯಾಯರು ಸಹ ಶೆಫಿನ್ಸ್ ಸಂಸ್ಥೆಯ ಪ್ರಭಾವದಿಂದ ಇಂಗ್ಲೀಷ್ ನಲ್ಲಿ ತಮ್ಮ ಸ್ವಾಗತ ಭಾಷಣ ಮಾಡಿರುವುದನ್ನು ಕಂಡು ಸಂತಸವಾಗುತ್ತದೆ ಎಂದರು. ಶೆಫಿನ್ಸ್ ಸಂಸ್ಥೆಯ 04 ದಿನದ ತರಬೇತಿ ಎಷ್ಟೊಂದು ಪರಿಣಾಮಕಾರಿಯಾಗಿತ್ತು ಎನ್ನುವುದನ್ನು ಇದು ಬಿಂಬಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಮುಖ್ಯ ಅತಿಥಿಯಾಗಿದ್ದ ಶೆಫಿನ್ಸ್ ನಿರ್ದೇಶಕ ಮನೋಜ್ ಕಡಬ ಮಾತನಾಡಿ, ಇತ್ತೀಚಿನ ಪತ್ರಿಕಾ ವರದಿಗಳ ಪ್ರಕಾರ ಉಡುಪಿ ಮತ್ತು ದಕ ಜಿಲ್ಲೆಗಳಲ್ಲಿ 55 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಾಗಿರುತ್ತದೆ. ಹಾಗೆಯೇ ಕರ್ನಾಟಕ ಸರಕಾರದ ಮಾಜಿ ಸಚಿವರೋರ್ವರು ಸುಳ್ಯದಲ್ಲಿ ನಡೆದ ಸಮಾರಂಭವೊಂದರಲ್ಲಿ ಮುಂದಿನ 5 ವರ್ಷಗಳಲ್ಲಿ 10,000ಕ್ಕಿಂತ ಹೆಚ್ಚು ಶಾಲೆಗಳು ಮುಚ್ಚುವ ಭೀತಿಯನ್ನು ವ್ಯಕ್ತಪಡಿಸಿದ್ದನ್ನು ಉಲ್ಲೇಖಿಸಿ, ತಾವು ಮಾಡುತ್ತಿರುವ ಆಂದೋಲನದಿಂದಾಗಿ ಸಾಲ ಮಾಡಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿರುವ ಪೋಷಕರು ಮುಂದಿನ ವರ್ಷಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಾಗಿ, ಆ ಮೂಲಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿ, ಕನ್ನಡ ಮಾಧ್ಯಮ ಶಾಲೆಗಳು ಉಳಿಯುವಂತಾಗಲೆಂದು ಆಶಿಸಿದರು.

    ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜುನಾಥ ಮೊಗವೀರ ವಹಿಸಿದ್ದು, ಅತಿಥಿಗಳಾಗಿ ಪಂಚಾಯತ್ ಸದಸ್ಯ ದಿನೇಶ್ ಮೊಗವೀರ, ರಾಜ್ಯ ಮುಖ್ಯೋಪಾಧ್ಯಾಯರ ಸಂಘದ ಸಂಘಟನಾ ಕಾರ್ಯದರ್ಶಿ ವೆಂಕಟ್, ಶಾಲೆಯ ಮುಖ್ಯೋಪಾಧ್ಯಾಯಿನಿ ರಮಣಿ, ಹಾಗೂ ಸಿದ್ದಾಪುರ ಸರಸ್ವತಿ ವಿದ್ಯಾಲಯದ ಸಹ-ಅಧ್ಯಾಪಿಕೆ ಸ್ಮಿತಾ ಕೆ.ಸಿ, ಶೆಫಿನ್ಸ್ ಸಂಯೋಜಕಿ ಅರ್ಪಿತಾ ಬ್ರಹ್ಮಾವರ, ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಮಂಜುಳ ವಿದ್ಯಾರ್ಥಿಗಳ ವಿವಿಧ ಚಟುವಟಿಕೆಗಳ ನೇತೃತ್ವ ವಹಿಸಿದ್ದರು.

    ಸಮಾರಂಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ನ ಚಟುವಟಿಕಾ ಪುಸ್ತಕಗಳನ್ನು ವಿತರಿಸಲಾಯಿತು. ಮಕ್ಕಳು ಆಂಗ್ಲ ಭಾಷೆಯಲ್ಲಿ ತಾವು ಕಲಿತ ಟಂಗ್ ಟ್ವಿಸ್ಟರ್, ಪದ್ಯ ಹಾಗೂ ಸಂಭಾಷಣೆಯನ್ನು ಪ್ರದರ್ಶಿಸಿದರು.

    ಶೆಫಿನ್ಸ್ ನಿಂದ ತರಬೇತಿ ಪಡೆದ ಶಿಕ್ಷಕಿ ಪೂರ್ಣಿಮ ಕಾರ್ಯಕ್ರಮ ನಿರೂಪಿಸಿ, ಶಾಲೆಯ ಮುಖ್ಯೋಪಾಧ್ಯಾಯಿನಿ ರಮಣಿ ಸ್ವಾಗತಿಸಿ, ಅತಿಥಿ ಶಿಕ್ಷಕಿ ಶಾಂತಾ ವಂದಿಸಿದರು.

  • ಕುಂದಾಪುರ: ಹೊಸ ನಿಯಮದ ವಿರುದ್ದ ಲಾರಿ ಚಾಲಕ-ಮಾಲಕರ ಸಂಘದಿಂದ ಪ್ರತಿಭಟನೆ

    ಕುಂದಾಪುರ: ಹೊಸ ನಿಯಮದ ವಿರುದ್ದ ಲಾರಿ ಚಾಲಕ-ಮಾಲಕರ ಸಂಘದಿಂದ ಪ್ರತಿಭಟನೆ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ: ಉಡುಪಿ ಜಿಲ್ಲಾ ಆಡಳಿತ ತಂದ ಹೊಸ ನಿಯಮಾವಳಿಯಿಂದ ಲಾರಿ ಚಾಲಕರ ಮತ್ತು ಮಾಲಕರಿಗೆ ಕೆಲಸ ಇಲ್ಲದಂತಾಗಿದೆ ಎಂದು ಆರೋಪಿಸಿದ ಕೋಟ ವಲಯದ ಲಾರಿ ಚಾಲಕರ ಮತ್ತು ಮಾಲಕರ ಸಂಘ ಮಂಗಳವಾರ ಕೋಟ ಹೈಸ್ಕೂಲ್ ಮೂರಕೈ ನಿಂದ ಪೊಲೀಸ್ ಠಾಣೆಯವರೆಗೂ ಕಾಲ್ನಡಿಗೆ ಮೂಲಕ ಜಾಥಾ ನಡೆಸಿ ಮನವಿ ಸಲ್ಲಿಸಿತು.

    ಈ ಸಂದರ್ಭ ಮಾತನಾಡಿದ ಲಾರಿ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಭೋಜ ಪೂಜಾರಿ, ಜಿಲ್ಲಾಡಳಿತ ತಂದಿರುವಂತಹ ಹೊಸ ನಿಯಮಾವಳಿ ಪ್ರಕಾರ ಲಾರಿ ಚಾಲಕರ ಮತ್ತು ಮಾಲಕರಿಗೆ ಬಹಳ ಸಮಸ್ಯೆವಾಗುತ್ತಿದೆ ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಲಂಕುಶವಾಗಿ ಪರಿಶೀಲಿಸಿ ವಾಹನ ಚಲಾವಣೆ ಮಾಡುವಲ್ಲಿ ತಂದಿರುವಂತಹ ಅನ್ವಯಗಳು ಮೊದಲನೇ ರೀತಿಯಲ್ಲಿ ಇರುವಂತೆ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಸ್ತೆಯ ಬದಿಯಲ್ಲಿ ತಮ್ಮ ಟಿಪ್ಪರ್ ಹಾಗೂ ಉಳಿದ ವಾಹನಗಳನ್ನು ನಿಲ್ಲಿಸಿ ಪ್ರತಿಭಟನೆಯನ್ನು ಮಾಡಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು

    ಮನವಿ ಸ್ವೀಕರಿಸಿದ ಬ್ರಹ್ಮಾವರ ಸರ್ಕಲ್ ಇನ್ಸ್ಪೆಕ್ಟರ್ ದಿವಾಕರ್, ಮನವಿಯನ್ನು ಜಿಲ್ಲಾಡಳಿತ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಸುಧೀರ್ ಮಲ್ಯಾಡಿ, ಮಹಾಬಲ ಪೂಜಾರಿ, ಗಣೇಶ್ ಸಂದೀಪ್ ಕೊಯಿಕೂರು, ವಿಜಯ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕೋಟ ಎಸೈ ಸುಧಾ ಪ್ರಭು ಹಾಜರಿದ್ದರು.

  • ಉಡುಪಿ :ಜನಸಾಮಾನ್ಯರ ಕೆಲಸಗಳಿಗೆ ಸ್ಪಂದಿಸುವುದು ಸರ್ಕಾರದ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

    ಉಡುಪಿ :ಜನಸಾಮಾನ್ಯರ ಕೆಲಸಗಳಿಗೆ ಸ್ಪಂದಿಸುವುದು ಸರ್ಕಾರದ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ :ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸಿ, ಅವರುಗಳ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಇದಕ್ಕನುಗುಣವಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ತಿಳಿಸಿದರು.

    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಜನರು ನಮ್ಮನ್ನು ನಂಬಿ ಸರ್ಕಾರ ನಡೆಸಲು ಅವಕಾಶ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಅವರಿಗೆ ನೀಡಿರುವ ಭರವಸೆಗಳನ್ನು ಹಂತಹಂತವಾಗಿ ನೂರು ದಿನಗಳಲ್ಲಿ ಈಡೇರಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಅದರ ಜೊತೆಯಲ್ಲಿ ಜನರ ಕುಂದು ಕೊರತೆಗಳನ್ನು ಆಲಿಸಿ, ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಇಡೀ ರಾಜ್ಯದಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಇಂದು ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸ್ಪಂದಿಸಲು ಮುಂದಾಗಲಾಗುವುದು ಎಂದರು.

    ಸರ್ಕಾರ ಹಾಗೂ ಅಧಿಕಾರಿಗಳಿರುವುದು ಜನರ ಸಮಸ್ಯೆಗಳನ್ನು ಪರಿಹರಿಸಲು. ಇವುಗಳನ್ನು ಅರಿತು ನಾವುಗಳು ಕೆಲಸ ಮಾಡಬೇಕಿದೆ. ಜಿಲ್ಲೆಯ ಉಸ್ತುವಾರಿ ಸಚಿವೆ ಯಾಗಿರುವವರೆಗೂ ಇಲ್ಲಿನ ಜನರ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ತಿಳಿಸಿದರು.

    ಮಾನ್ಯ ಮುಖ್ಯಮಂತ್ರಿಗಳು ಜನ ಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯವಾಗಿ ಆಲಿಸಿ, ಅವುಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸಬೇಕೆಂಬ ಉದ್ದೇಶದಿಂದ ಮಹತ್ವಾಕಾಂಕ್ಷಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುವುದರೊಂದಿಗೆ ಇದಕ್ಕೆ ಸ್ಪಂದಿಸಬೇಕು ಎಂದರು.

    ಸಾಮಾನ್ಯವಾಗಿ ಪೊಲೀಸ್, ಅರಣ್ಯ, ಆರೋಗ್ಯ, ಕಂದಾಯ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ದಿನನಿತ್ಯ ಜನರು ಕೆಲಸಗಳನ್ನು ಅರಸಿ, ಬರುತ್ತಾರೆ. ಈ ರೀತಿ ತಮ್ಮ ಕೆಲಸಗಳಿಗಾಗಿ ಕಚೇರಿಗೆ ಬಂದಾಗ ಅವರನ್ನು ಅಲೆಯುವಂತೆ ಮಾಡುವುದು ಸರಿಯಲ್ಲ. ಅಧಿಕಾರಿಗಳು ತಮ್ಮ ಅಹಂ ಅನ್ನು ಬಿಟ್ಟು ಜನಸಾಮಾನ್ಯರ ಕಷ್ಟಗಳಿಗೆ ಹೃದಯವಂತರಾಗಿ ಸ್ಪಂದಿಸಬೇಕು ಎಂದರು.

    ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸಗಳನ್ನು ಅರಸಿ, 143 ಅರ್ಜಿಗಳು ಬಂದಿದ್ದು, ಇವುಗಳನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಬಗೆಹರಿಸಲಾಗುವುದು. ಕೆಲವು ಅರ್ಜಿಗಳು ಸ್ಥಳದಲ್ಲಿಯೇ ಬಗೆಹರಿಸಲು ಸಾಧ್ಯವಾಗದಿದ್ದಲ್ಲಿ ಕಾಲಮಿತಿಯೊಳಗೆ ಸ್ಪಂದಿಸಲು ಸೂಚಿಸಲಾಗುವುದು ಎಂದ ಅವರು, ಮುಂದಿನ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಈ ದಿನ ಬಂದಿರುವ ಎಲ್ಲಾ ಅರ್ಜಿಗಳ ವಿಲೇವಾರಿ ಆಗಿರುವ ಬಗ್ಗೆ ಕೂಲಂಕುಷವಾಗಿ ಮೊದಲ ಒಂದು ಗಂಟೆಯಲ್ಲಿ ಪರಿಶೀಲಿಸಿ, ಅರ್ಜಿದಾರರಿಂದ ತಮ್ಮ ಸಮಸ್ಯೆಗಳಿಗೆ ಸ್ಪಂದಿಸಿರುವ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

    ಸಾರ್ವಜನಿಕರಿಂದ ವಿವಿಧ ಅಹವಾಲು ಅರ್ಜಿ ಸ್ವೀಕರಿಸಲು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿ ಮನ್ನಾ ಜಾಗದ ಹಕ್ಕುಪತ್ರಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಿಸಲಾಯಿತು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ವಸ್ತು ಪ್ರದರ್ಶನದ ಮಳಿಗೆಯನ್ನು ತೆರೆಯಲಾಗಿತ್ತು.

    ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಅಹವಾಲು ಹೊತ್ತು ತಂದ ಸಾವಿರಾರು ಸಾರ್ವಜನಿಕರು, ಸಂಘ-ಸAಸ್ಥೆಗಳು, ಸ್ವಯಂ-ಸೇವಕರು, ಮಹಿಳಾ ಮಂಡಳಗಳು ತಮ್ಮ ಸಮಸ್ಯೆಗಳ ಬಗೆಹರಿಸಲು ಅಹವಾಲುಗಳನ್ನು ಸಲ್ಲಿಸಿ, ಕೆಲವೊಂದು ತಕ್ಷಣದಲ್ಲಿಯೇ ಸ್ಥಳೀಯವಾಗಿ ಬಗೆಹರಿಸಲಾಯಿತು. ಕೆಲವುಗಳನ್ನು ಕಾಲಮಿತಿಯೊಳಗೆ ಬಗೆಹರಿಸಲು ಸೂಚಿಸಲಾಯಿತು.

    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಕುಂದಾಪುರ ಉಪವಿಭಾಗಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಉಡುಪಿ :ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಸಂಸದೆ ಶೋಭಾ ಕರಂದ್ಲಾಜೆ

    ಉಡುಪಿ :ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಸಂಸದೆ ಶೋಭಾ ಕರಂದ್ಲಾಜೆ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

    ಅವರು ಇಂದು ನಗರದ ಅಲೆವೂರು ಗ್ರಾಮದ ಪ್ರಗತಿನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಎದುರು ಉಡುಪಿಯ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಬರಬೇಕೆನ್ನುವುದು ಜನರ ಅಪೇಕ್ಷೆಯಾಗಿದ್ದು, ಈ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ 2015 ರಲ್ಲಿ ಉಡುಪಿ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯವು ಪ್ರಾರಂಭವಾಗಿದ್ದು, ಇದಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಇತ್ತು. ಈಗ ಕಟ್ಟಡ ನಿರ್ಮಾಣಕ್ಕೆ ಇದ್ದಂತಹ ಸ್ಥಳಾವಕಾಶ ಹಾಗೂ ಇತರೆ ಅಡೆತಡೆಗಳು ನಿವಾರಣೆಗೊಂಡಿದ್ದು, ಕಟ್ಟಡದ ನಿರ್ಮಾಣ ಕಾರ್ಯಗಳು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.

    ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ನಾಳೆ ಮೈಸೂರಿನಲ್ಲಿ ನಡೆಯುವ ರೋಜ್‌ಗಾರ್ ಮೇಳದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಅಗತ್ಯವಿರುವ ಶಿಕ್ಷಕರನ್ನು ನೇಮಿಸಲು ಕ್ರಮವಹಿಸಲಾಗುವುದು ಎಂದರು.

    ಇಲ್ಲಿ ನಿರ್ಮಾಣವಾಗುವ ಕೇಂದ್ರೀಯ ವಿದ್ಯಾಲಯವು ಸುಸಜ್ಜಿತ ಕಟ್ಟಡ, ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರದಲ್ಲಿ ಉದ್ಘಾಟನೆಗೊಳ್ಳಲಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ಅದನ್ನು ಬಗೆಹರಿಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದ ಅವರು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉನ್ನತ ಮಟ್ಟದ ಹುದ್ದೆಗಳನ್ನು ಪಡೆಯುವಂತೆ ಶುಭ ಹಾರೈಸಿದರು.

    ಶಾಸಕ ಗುರ್ಮೆ ಸುರೇಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಕುಮಾರ್, ಕೇಂದ್ರೀಯ ವಿದ್ಯಾಲಯದ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಬೆಂಗಳೂರು ಕೇಂದ್ರೀಯ ವಿದ್ಯಾಲಯ ಸಂಘಟನೆ ಪ್ರಾದೇಶಿಕ ಕಚೇರಿಯ ಉಪ ಆಯುಕ್ತ ಧರ್ಮೇಂದ್ರ ಪಟ್ಲೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಉಡುಪಿಯ ಬಿ.ಇ.ಓ ಡಾ. ಅಶೋಕ್ ಕಾಮತ್ ಮತ್ತು ಶಿಕ್ಷಕಿ ಮಾರ್ಗರೇಟ್ ಅಬ್ರಾಹಂ ನಿರೂಪಿಸಿದರೆ, ಪ್ರಾಂಶುಪಾಲ ನಾರಾಯಣ ರಾವ್ ವಂದಿಸಿದರು.