Category: ಸುದ್ದಿ

  • ಕುಂದಾಪುರ :ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಶಿವ ಸಹಸ್ರನಾಮ ಭಸ್ಮಾರ್ಚನೆ ಪೂಜೆ

    ಕುಂದಾಪುರ :ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಶಿವ ಸಹಸ್ರನಾಮ ಭಸ್ಮಾರ್ಚನೆ ಪೂಜೆ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ: ಇಲ್ಲಿನ ಅಧಿ ದೇವರಾದ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಕರಾವಳಿ ಭಾಗದಲ್ಲೇ ಪ್ರಥಮ ಬಾರಿಗೆ ವಾಸುದೇವ ಜೋಯಿಷರ ನೇತೃತ್ವದಲ್ಲಿ 1200ಕ್ಕೂ ಮಿಕ್ಕಿ ಮಹಿಳೆಯರಿಂದ ಸಾಮೂಹಿಕ ಶಿವ ಸಹಸ್ರನಾಮ ಭಸ್ಮಾರ್ಚನೆ ಪೂಜಾ ಕಾರ್ಯಕ್ರಮ ನಡೆಯಿತು.

    ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ, ಸಮಾಜ ಸೇವಕರಾದ ಸುಬ್ರಹ್ಮಣ್ಯ ಹೊಳ್ಳ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸತೀಶ್ ಶೆಟ್ಟಿ, ವಿಶ್ವನಾಥ್ ಪೂಜಾರಿ ಗರಡಿ ಮನೆ, ನಾಗರಾಜ್ ರಾಯಪ್ಪನ ಮಠ, ಜಯಾನಂದ ಖಾರ್ವಿ, ಸತೀಶ್, ವೀಣಾ ಎಚ್, ಸವಿತ ಜಗದೀಶ್ ಊರಿನ ಪ್ರಮುಖರಾದ ಕಿಶೋರ್ ಹೆಗ್ಡೆ, ಚಂದ್ರಶೇಖರ್ ಕಲ್ಪತರು, ಸಟ್ವಡಿ ವಿಜಯ್ ಶೆಟ್ಟಿ, ರಾಜೀವ ಕೋಟ್ಯಾನ್,ಹೃದಯ ಕುಮಾರ್ ಶೆಟ್ಟಿ, ಮಂಜುನಾಥ್ ರಾವ್, ಜಿ ಎಸ್ ಭಟ್, ಸಚಿನ್ ನಕ್ಕತ್ತಾಯ, ಚಂದ್ರಶೇಖರ್ ಶೆಟ್ಟಿ ಶ್ರವಣ್ ಚಾತ್ರ ಮುಂತಾದವರು ಉಪಸ್ಥಿತರಿದ್ದರು,

  • ಗ್ರಾಮೀಣ ಭಾಷೆ ಸೊಗಡುಗಾರ ಹಾಗೂ ಕರಾವಳಿ ವಾಟ್ಸಪ್ ಹೀರೋ ಖ್ಯಾತಿಯ ಎ.ಕೆ ಶೆಟ್ಟಿ ನಡೂರು ಇವರಿಗೆ ಪಂಚವರ್ಣ ರಜತ ಗೌರವ

    ಗ್ರಾಮೀಣ ಭಾಷೆ ಸೊಗಡುಗಾರ ಹಾಗೂ ಕರಾವಳಿ ವಾಟ್ಸಪ್ ಹೀರೋ ಖ್ಯಾತಿಯ ಎ.ಕೆ ಶೆಟ್ಟಿ ನಡೂರು ಇವರಿಗೆ ಪಂಚವರ್ಣ ರಜತ ಗೌರವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸಾಧನೆಗೆ ಹಲವು ಕವಲುಗಳಿವೆ ಆದರೆ ಸದ್ಭಿನಿಯೋಗ ಹೇಗೆ ಮಾಡಿಕೊಳ್ಳುತ್ತೇವೆ ಅನುವುದರ ಮೇಲೆ ತಿರ್ಮಾನಗೊಳ್ಳುತ್ತದೆ ಇದಕ್ಕೆ ಎ.ಕೆ ಶೆಟ್ಟಿ ಅಂತವರು ಸಾಕ್ಷಿಯಾಗಿದ್ದಾರೆ ಎಂದು ನಡೂರು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹೇಳಿದರು.

    ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌವಾರ್ಪಣೆ ಎಂಬ ಶೀರ್ಷಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಷೆ ಸೊಗಡುಗಾರ ಹಾಗೂ ಕರಾವಳಿ ವಾಟ್ಸಪ್ ಹೀರೋ ಖ್ಯಾತಿಯ ಎ.ಕೆ ಶೆಟ್ಟಿ ನಡೂರು ಇವರಿಗೆ ರಜತ ಗೌರವ ಸಲ್ಲಿಸಿ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಯುವ ಸಮುದಾಯ ಒಳ್ಳೆಯ ಸಂದರ್ಭವನ್ನು ಉಪಯೋಗಿಸಿಕೊಳ್ಳದೆ ವ್ಯರ್ಥಮಾಡುತ್ತಿರುವುದು ನಾವುಗಳು ಕಾಣುತ್ತಿದ್ದೇವೆ. ಆದರೆ ಎ.ಕೆ ಶೆಟ್ಟಿ ಸಾಮಾಜಿಕ ಜಾಲವನ್ನು ಸಮರ್ಪಕವಾಗಿ ಬಳಸಿಕೊಂಡು ಅದರಿಂದಲೇ ಸಾಧನೆಯ ಶಿಖರವನ್ನು ಏರಿದ್ದಾರೆ. ಇದೊಂದು ಇಂದಿನ ಯುವ ಪೀಳಿಗೆಗೆ ಮಾದರಿ ಎಂದರೆ ಅತಿಶಯೋಕ್ತಿಯಲ್ಲ ,ಇಂಥಹ ಪ್ರತಿಭೆಗಳನ್ನು ಅವರ ಸ್ವಗೃಹಕ್ಕೆ ತೆರಳಿ ಗೌರವಿಸುವ ಪಂಚವರ್ಣ ಸಂಸ್ಥೆಯ ಕಾರ್ಯ ನಿಜಕ್ಕೂ ಪ್ರಶಂಸನೀಯ ಈ ದಿಸೆಯಲ್ಲಿ ಇನ್ನಷ್ಟು ಸಾಧನೆಯ ಮೆಟ್ಟಿಲು ಏರಲು ಸಹಕಾರಿಯಾಗಿದೆ.ನಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ವೇದಿಕೆ ಸಿದ್ಧಪಡಿಸಿಕೊಳ್ಳಿ ಎಂದು ಯುವ ಸಮೂಹಕ್ಕೆ ಕರೆ ನೀಡಿದರು.

    ಸಭೆಯಲ್ಲಿ ಎ.ಕೆ ಶೆಟ್ಟಿ ನಡೂರು ಇವರನ್ನು ಗೌರವಿಸಲಾಯಿತು. ಅಲ್ಲದೆ ನೆನಪಿನ ಬುತ್ತಿಯಾಗಿ ಗಿಡ ನೆಟ್ಟು ಸಂಭ್ರಮಿಸಲಾಯಿತು.
    ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆಯನ್ನು ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ನಡೂರು ಗ್ರಾಮಪಂಚಾಯತ್ ಅಧ್ಯಕ್ಷ ಜಲಂಧರ್ ಶೆಟ್ಟಿ, ಮಾಜಿ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ ಶೆಟ್ಟಿ, ವಾಣಿಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಸುಗುಣ ಟೀಚರ್ ,ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಪುಷ್ಭಾ ಕೆ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಹಂದಟ್ಟು ಸ್ವಾಗತಿಸಿದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸುಜಾತ ಬಾಯರಿ ನಿರೂಪಿಸಿದರು. ಸದಸ್ಯೆ ಶಕೀಲ ನಾಗರಾಜ್ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್ ಸಹಕರಿಸಿದರು.

  • ಕುಂದಾಪುರ :ಜೆಸಿಐ ಕುಂದಾಪುರ ಸಿಟಿ ಸಪ್ತಾಹ ಉದ್ಘಾಟನೆ

    ಕುಂದಾಪುರ :ಜೆಸಿಐ ಕುಂದಾಪುರ ಸಿಟಿ ಸಪ್ತಾಹ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಕಾನೂನು ಪಾಲನೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹದಿ ಹರೆಯದ ಮಕ್ಕಳು ಕಾನೂನು ಉಲ್ಲಂಘನೆ ಮಾಡಿ, ಅಪರಾಧ ಚಟವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು, ಇವರಲ್ಲಿ ಬಹುತೇಕರಿಗೆ ಕಾನೂನಿನ ಅರಿವೇ ಇರುವುದಿಲ್ಲ. ಪೋಷಕರು ಮಕ್ಕಳಿಗೆ ಈ ಬಗ್ಗೆ ತಿಳಿ ಹೇಳಬೇಕಾಗಿದೆ. ಆತ್ಮಸಾಕ್ಷಿಯೇ ನಿಜವಾದ ಕಾನೂನು. ಆತ್ಮ ಸಾಕ್ಷಿಗೆ ವಂಚನೆ ಮಾಡದೇ ಇರುವುದೇ ಕಾನೂನಿನ ಉತ್ತಮ ಪಾಲನೆ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಹೇಳಿದರು.

    ಅವರು ಜೇಸಿಐ ಕುಂದಾಪುರ ಸಿಟಿ ಇದರ ಸಪ್ತಾಹ ಸೆ.೯ ರಿಂದ ಸೆ.೧೫ರವರೆಗೆ ಜೂನಿಯರ್ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆಯಲಿದ್ದು, ಶನಿವಾರ ಸಂಜೆ ಸಪ್ತಾಹವನ್ನು ಉದ್ಘಾಟಿಸಿ, ಕಾನೂನಿನ ಅರಿವು ಕುರಿತು ಮಾತನಾಡಿದರು.

    ಹಿರಿಯ ಸಿವಿಲ್ ನ್ಯಾಯಾಽಶ ರಾಜು ಎನ್. ಮಾತನಾಡಿದರು. ಕುಂದಾಪುರದ ಹೋಲಿ ರೋಜರಿ ಚರ್ಚ್‌ನ ಧರ್ಮಗುರು ವಂ| ಸ್ಟ್ಯಾನಿ ತಾವ್ರೊ ಆಶೀರ್ವಚಿಸಿದರು.

    ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷೆ ಡಾ| ಸೋನಿ ಡಿಕೋಸ್ಟಾ ಅಧ್ಯಕ್ಷತೆ ವಹಿಸಿದ್ದರು.

    ಕುಂದಾಪುರದ ಉದ್ಯಮಿ ರೋನಾಲ್ಡ್ ರೊಡ್ರಿಗಸ್ ಅವರಿಗೆ ಬ್ಯುಸಿನೆಸ್ ಐಕಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಭಾ ಕಾರ್‍ಯಕ್ರಮದ ಬಳಿಕ ಹೆಮ್ಮಾಡಿಯ ಜನತಾ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ನವರಂಗ್ ಸಾಂಸ್ಕೃತಿಕ ಕಾರ್‍ಯಕ್ರಮ ಪ್ರದರ್ಶನಗೊಂಡಿತು.

    ಕುಂದಾಪುರ ಆಸ್ಪತ್ರೆಯ ಜನರಲ್ ಸರ್ಜನ್ ಡಾ| ಮಹೇಂದ್ರ ಕುಮಾರ್ ಶೆಟ್ಟಿ, ರೆಡ್‌ಕ್ರಾಸ್ ಕುಂದಾಪುರದ ಸಭಾಪತಿ ಜಯಕರ ಶೆಟ್ಟಿ, ಜೆಸಿಐ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ನಿಕಟಪೂರ್ವಾಧ್ಯಕ್ಷ ಅಭಿಲಾಷ್ ಬಿ.ಎ., ಸಪ್ತಾಹ ಸಭಾಪತಿ ರಾಘವೇಂದ್ರ ಕುಲಾಲ್, ಸಂಚಾಲಕ ನಾಗೇಶ ನಾವಡ, ಕಾರ್‍ಯದರ್ಶಿಗಳಾದ ವಿಜಯ ಭಂಡಾರಿ, ಸಂದೇಶ್ ಶೆಟ್ಟಿ, ಖಜಾಂಚಿ ಶ್ರೀಧರ ಸುವರ್ಣ, ಸಂಯೋಜಕಿ ಪ್ರೇಮ ಡಿ’ಕುನ್ಹ, ಯುವ ಜೆಸಿ ಅಧ್ಯಕ್ಷೆ ಚಂದ್ರಿಕಾ ಕಾಮತ್, ಸದಸ್ಯರು ಉಪಸ್ಥಿತರಿದ್ದರು.

    ಪೂರ್ವಾಧ್ಯಕ್ಷ ರಾಘವೇಂದ್ರ ಚರಣ್ ನಾವಡ ಪರಿಚಯಿಸಿ, ಸದಸ್ಯೆ ಡಾ| ಸರೋಜಾ ಎಂ. ಕಾರ್‍ಯಕ್ರಮ ನಿರೂಪಿಸಿದರು.

  • ಸಮಗ್ರ ಬೈಂದೂರಿನ ಅಭಿವೃದ್ಧಿಗಾಗಿ ಶಿವಮೊಗ್ಗ ಸಂಸದರ ಭೇಟಿ

    ಸಮಗ್ರ ಬೈಂದೂರಿನ ಅಭಿವೃದ್ಧಿಗಾಗಿ ಶಿವಮೊಗ್ಗ ಸಂಸದರ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು : ಸಂಸದರಾದ ಬಿ.ವೈ ರಾಘವೇಂದ್ರ ಅವರು ಇಂದು ಉಪ್ಪುಂದ ಕಾರ್ಯಕರ್ತ ಶಾಸಕರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಇದೇ ವೇಳೆಯಲ್ಲಿ ವಿಕಲಚೇತನರಿಗೆ ವಿದ್ಯುತ್ ಚಾಲಿತ ವೀಲ್ ಚೇರನ್ನು ಶಾಸಕರು ಮತ್ತು ಮಂಡಲದ ಅಧ್ಯಕ್ಷರು ಉಪಸ್ಥಿತಿಯಲ್ಲಿ ಹಸ್ತಾಂತರಿಸಿದರು.

    ಸಂಸದರು ಶಾಸಕರ ಜೊತೆಗೂಡಿ ಬೈಂದೂರು ಕ್ಷೇತ್ರದ ಅಭಿವೃದ್ಧಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆಸಿ ಬೈಂದೂರು ವಿಧಾನಸಭಾ ಕ್ಷೇತ್ರದ ಮನೆ ಮನೆ ಶುದ್ದ ಕುಡಿಯುವ ನೀರಿನ ಯೋಜನೆ, ಮರವಂತೆ ಹೊರಬಂದರು ಹಾಗೂ ಗಂಗೊಳ್ಳಿ ಜಟ್ಟಿ ಅಭಿವೃದ್ಧಿ, ತ್ರಾಸಿ- ಮರವಂತೆ ಮತ್ತು ಸೋಮೇಶ್ವರ ಬೀಚ್ ಅಭಿವೃದ್ಧಿ, ಗೋಮಾಳಗಳ ಅಳತೆ ಹಾಗೂ ಅಭಿವೃದ್ಧಿ ಜೊತೆಗೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯನ್ನು ಬೈಂದೂರು ಶಾಸಕರ ಕಛೇರಿಯಲ್ಲಿ ನಡೆಸಲಾಯಿತು.

    ಬಿಜೆಪಿ ಕಚೇರಿ ಬೈಂದೂರು ಭೇಟಿ ಮುಂದಿನ ನಡೆಯ ಬಗ್ಗೆ ಪಕ್ಷದ ಪ್ರಮುಖರ ಜೊತೆ ಚರ್ಚಿಸಿದರು.

    ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ,ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ,ಸುರೇಶ್ ಶೆಟ್ಟಿ ಉಪ್ಪುಂದ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ವಿವಿಧ ಇಲಾಖೆ ಅಧಿಕಾರಿಗಳು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

  • ಸಕ್ಕರೆ ಕಾರ್ಖಾನೆ ಗುಜರಿಗೆ ಮಾರಾಟ: 14 ಕೋಟಿಗೂ ಮಿಕ್ಕಿ ಹಣ ಅವ್ಯವಹಾರ: ರೈತರ ಹಣ ವಸೂಲಾಗಲೇ ಬೇಕು -ಪ್ರತಾಪಚಂದ್ರ ಶೆಟ್ಟಿ

    ಸಕ್ಕರೆ ಕಾರ್ಖಾನೆ ಗುಜರಿಗೆ ಮಾರಾಟ: 14 ಕೋಟಿಗೂ ಮಿಕ್ಕಿ ಹಣ ಅವ್ಯವಹಾರ: ರೈತರ ಹಣ ವಸೂಲಾಗಲೇ ಬೇಕು -ಪ್ರತಾಪಚಂದ್ರ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯ ಆಸ್ತಿ ಯಾವುದೇ ರೀತಿಯಲ್ಲೂ ಪರಾಧಿನ ಆಗಲು ಬಿಡುವುದಿಲ್ಲ. ಈಗಾಗಲೇ ಕಾರ್ಖಾನೆಯನ್ನು ಗುಜರಿಗೆ ಮಾರಾಟ ಮಾಡುವ ಮೂಲಕ ರೈತರಿಗೆ ಹಾಗೂ ಸರ್ಕಾರಕ್ಕೆ ವಂಚನೆ ಮಾಡಲಾದ ಮೊತ್ತವನ್ನು ವಸೂಲಿ ಆಗಬೇಕು. ಆ ಹಿನ್ನೆಲೆಯಲ್ಲಿ ರೈತ ಸಂಘ ಶಾಸನಬದ್ದವಾಗಿ, ಕಾನೂನಾತ್ಮಕ ಹೋರಾಟ ಮುಂದುವರಿಸಲಿದೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಪ್ರತಾಪಚಂದ್ರ ಶೆಟ್ಟಿ ಹೇಳಿದರು.

    ಬ್ರಹ್ಮಾವರದಲ್ಲಿ ನಡೆದ ಉಡುಪಿ ಜಿಲ್ಲಾ ರೈತ ಸಂಘ (ರಿ.) ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ (ನಿ.) 14 ಕೋಟಿಗೂ ಮಿಕ್ಕಿ ಹಣವನ್ನು ವಂಚನೆ ಮಾಡಿರುವ ಕುರಿತು ಹೋರಾಟ- ಸಮಾಲೋಚನೆ ಸಭೆಯ ಉದ್ಘಾಟನೆಗೊಳಿಸಿ ಅವರು ಮಾತನಾಡಿದರು.

    ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಆಸ್ತಿ. ಸುಮಾರು 5 ಸಾವಿರ ಸದಸ್ಯರನ್ನು ಹೊಂದಿರುವ ಸಂಸ್ಥೆಯ ಮಹಾಸಭೆಗೆ 50 ಜನರಿಗೆ ನೋಟಿಸು ನೀಡಿದ್ದಾರೆ. ರೈತರ ಹಕ್ಕನ್ನು ಹತ್ತಿಕ್ಕುವ ಕೆಲಸವನ್ನು ಇಲ್ಲಿನ ಆಡಳಿತ ಮಂಡಳಿ ಮಾಡಿದೆ. ಆಡಳಿತ ಮಂಡಳಿ ಚುನಾವಣೆ ಸಂದರ್ಭ 41 ಜನರಿಗಷ್ಟೇ ಮತದಾನದ ಹಕ್ಕು ನೀಡಿ 10 ಜನ ಆಯ್ಕೆಯಾದರು. ರೈತರ ಆಸ್ತಿಯನ್ನು ಉಳಿಸಿಕೊಳ್ಳುವ ಸಲುವಾಗಿ ಕಳೆದ ಮಹಾಸಭೆಗೆ ಮುನ್ನ ರೈತ ಸಂಘದ ಮೂಲಕ ರೈತರನ್ನು ಸಂಘದ ಸದಸ್ಯರನ್ನಾಗಿ ಮಾಡಿದೆವು. ಆದರೆ ಈ ವರ್ಷವೂ ಮಹಾಸಭೆಗೆ ನೋಟಿಸು ಕೊಡಲಿಲ್ಲ. ನಮ್ಮ ಕಣ್ಣೇದುರೇ ರೈತರ ಸ್ವತ್ತು ಲೂಟಿ ಆಗುತ್ತಿರುವುದನ್ನು, ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವುದನ್ನು ರೈತ ಸಂಘ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ರೈತರಿಗೆ ನ್ಯಾಯ ಒದಗಿಸುವುದೇ ರೈತ ಸಂಘದ ಉದ್ದೇಶ ಎಂದರು.

    ಕಾರ್ಖಾನೆಯ ಗುಜರಿಗಳನ್ನು ಗುತ್ತಿಗೆದಾರರೊಂದಿಗೆ ಶಾಮೀಲು ಮಾಡಿಕೊಂಡು ಸುಮಾರು 14ಕೋಟಿಗೂ ಮಿಕ್ಕಿ ವಂಚನೆ ಮಾಡಿದ್ದಾರೆ. ಇದರಲ್ಲಿ ಜಿಲ್ಲಾ ಮಟ್ಟದಿಂದ ಹಿಡಿದು ರಾಜ್ಯಮಟ್ಟದ ಅಧಿಕಾರಿಗಳು ಶಾಮೀಲಾಗಿದ್ದಾರೆ. ಟೆಂಡರ್ ಪ್ರಕ್ರಿಯೆಯಲ್ಲಿ ಆದ ಭ್ರಷ್ಟಾಚಾರದ ಕುರಿತು ತನಿಖೆ ನಡೆಸುವಂತೆ ಮಾಡಿ ಇದರಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆಡಳಿತ ನಿರ್ದೇಶಕರಾಗಿರುವ ಡಿ.ಆರ್ ಸರ್ಕಾರಕ್ಕೆ ತಲುಪಿಸುವ ವರದಿಯಲ್ಲೂ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಕುರಿತಾಗಿ ಕಾನೂನು ಹೋರಾಟ ಮಾಡುವುದು ರೈತ ಸಂಘದ ಜವಾಬ್ದಾರಿ ಎಂದು ಅವರು ಹೇಳಿದರು.

    ಸಕ್ಕರೆ ಕಾರ್ಖಾನೆಯನ್ನು ಗುಜರಿಗೆ ಹಾಕುವಾಗಲೂ ಕೂಡಾ ಪಾರದರ್ಶಕ ವ್ಯವಸ್ಥೆ ಆಗಲಿಲ್ಲ. ಇ-ಟೆಂಡರ್ ಮಾಡಲು ಮೂಲಸೌಕರ್ಯಗಳ ಕೊರತೆ ಎನ್ನುವ ಉತ್ತರ ಕೊಟ್ಟರು. 14 ಕೋಟಿಗೂ ಮಿಕ್ಕಿ ವಂಚನೆ ಆಗಿರುವುದು ಮಾತ್ರವಲ್ಲದೇ ಈ ಹಗರಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಮಟ್ಟದ ಅಧಿಕಾರಿಗಳು ಶಾಮಿಲಾಗಿದ್ದಾರೆ. ಸರ್ಕಾರದ ಅಧೀನ ಕಾರ್ಯದರ್ಶಿಯವರ ಗಮನಕ್ಕೆ ತಂದರೂ ಕೂಡಾ ಅವರು ಏನೂ ಕೆಲಸ ಮಾಡಲಿಲ್ಲ. ಕೋಟ್ಯಾಂತರ ರೂಪಾಯಿ ಲೂಟಿಯಾಗುತ್ತಿದ್ದರೂ ತನಿಖೆ ಮಾಡಲಾಗದ ವ್ಯವಸ್ಥೆಯಡಿಯಲ್ಲಿ ನಾವಿಂದು ಇದ್ದೇವೆ. ಈಗ ಸಹಕಾರಿ ಸದಸ್ಯೆಗೆ ಮಹಾಸಭೆಗೆ ಆಹ್ವಾನ ಪತ್ರ ನೀಡದಿರುವುದು ವಂಚನೆಯ ಇನ್ನೂಂದು ಮುಖ ಎಂದರು.

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಎಸ್.ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಇವತ್ತು ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯ ಸ್ಥಳ ಮಾರಾಟವಾಗದೆ ಉಳಿಯಲು ಪ್ರತಾಪಚಂದ್ರ ಶೆಟ್ಟರ ಹೋರಾಟವೇ ಕಾರಣ. ಸಾಮಾನ್ಯ ಹಾಲು ಉತ್ಪಾದಕರ ಸಹಕಾರ ಸಂಘವೊಂದು 5 ಲಕ್ಷ ರೂಪಾಯಿಯಲ್ಲಿ ಕಟ್ಟಡ ಮಾಡಬೇಕಿದ್ದರೆ ಇ-ಟೆಂಡರ್ ಮಾಡಬೇಕು ಎನ್ನುವ ಸರ್ಕಾರ ನಿರ್ದೇಶನವಿದೆ. ಆದರೆ ಕೋಟ್ಯಾಂತರ ರೂಪಾಯಿಯಲ್ಲಿ ಸಕ್ಕರೆ ಕಾರ್ಖಾನೆ ಗುಜರಿಗೆ ಏಲಂ ಹಾಕುವಾಗ ಇ-ಟೆಂಡರ್ ಮಾಡಲು ಸಮಸ್ಯೆ ಎದುರಾಗುತ್ತದೆ. ಎಂದರು.

    ರೈತ ಸಂಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಣಿ ಮಾತನಾಡಿ, ಕಾರ್ಖಾನೆಯ ಆವರಣದಲ್ಲಿದ್ದ ಮರಗಳ ಮಾರಾಟ ಪ್ರಯತ್ನಕ್ಕೆ ತಾಂತ್ರಿಕ ಸಮಸ್ಯೆ ಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಕಾರ್ಖಾನೆಯ ಗುಜರಿ ಮಾರಾಟ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿತ್ತು. ಪ್ರಾರಂಭದಲ್ಲಿ ಶಾಸನಬದ್ಧವಾಗಿ ಇ-ಪ್ರಾಕ್ಯುರ್‍ಮೆಂಟ್ ಟೆಂಡರ್ ಮುಖೇನ ಮಾಡಬೇಕಾಗಿತ್ತು. ಅಥವಾ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಸೆಂಟ್ರಲ್ ಸ್ಕ್ರಾಪ್ ಬೋರ್ಡ್ ಮುಖಾಂತರ ವಿಲೇವಾರಿ ಮಾಡಬೇಕಾಗಿತ್ತು. ಆದರೆ ಈ ಆಡಳಿತ ಮಂಡಳಿ ಕಾನೂನುಗಳನ್ನು ಗಾಳಿಗೆ ತೂರಿ ಸ್ವೇಚ್ಚಾಚಾರವಾಗಿ ಸಂಬಂಧಪಟ್ಟ ಇಲಾಖೆಯ ಅನುಮೋಧನೆ ಪಡೆಯದೇ ನಾಲ್ವರ ತಾಂತ್ರಿಕ ಸಮಿತಿ ರಚಿಸಿಕೊಂಡು ಅವರಿಗೆ ಬೇಕಾದಂತೆ ಟೆಂಡರ್‍ನಲ್ಲಿ ಅತಿ ಹೆಚ್ಚು ಬಿಡ್ಡಿನ ದರ ನಮೂದಿಸಿ ನ್ಯೂ ರಾಯಲ್ ಟ್ರೇಡರ್ಸ್ ಚನ್ನೈ ಅವರಿಗೆ ಅನುಕೂಲವಾಗುವಂತೆ ನೀಡಿರುವುದು ಆಡಳಿತ ಮಂಡಳಿಯ ಸಭಾ ನಡಾವಳಿ ನೋಡಿದಾಗ ಅರಿವಾಗುತ್ತದೆ.
    ಕಾರ್ಯÀಕ್ರಮದಲ್ಲಿ ರೈತ ಸಂಘದ ಉಪಾಧ್ಯಕ್ಷ ರಾಜಾರಾಮ ತಲ್ಲೂರು, ಕೋಶಾಧಿಕಾರಿ ಭೋಜ ಕುಮಾರ್ ಬೆಳಂಜೆ, ರೈತ ಸಂಘದ ವಕ್ತಾರ ವಿಕಾಸ್ ಹೆಗ್ಡೆ, ರೈತ ಮುಖಂಡರಾದ ಪ್ರದೀಪ್ ಬಲ್ಲಾಳ್, ದಿನೇಶ ಹೆಗ್ಡೆ, ಶಿವರಾಮ ಶೆಟ್ಟಿ ಮಲ್ಯಾಡಿ, ಸಂಪಿಗೇಡಿ ಸಂಜೀವ ಶೆಟ್ಟಿ, ಬಾಕಿಸಂ ಅಧ್ಯಕ್ಷ ಸೀತಾರಾಮ ಗಾಣಿಗ, ಜಿಲ್ಲಾ ಕಾರ್ಯದರ್ಶಿ ಸತ್ಯನಾರಾಯಣ ಉಡುಪ, ಬಾಬು ಹೆಗ್ಡೆ, ಭುಜಂಗ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ರೈತ ಸಂಘದ ಎಲ್ಲಾ ವಲಯಗಳ ಅಧ್ಯಕ್ಷರು, ಪದಾಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.

    ನಿತ್ಯಾನಂದ ಶೆಟ್ಟಿ ಹಾರಾಡಿ ಸ್ವಾಗತಿಸಿದರು. ಉಪನ್ಯಾಸಕ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

  • ಕೋಟೇಶ್ವರ :ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪುಣ್ಯದ ಕೆಲಸ – ಅಬ್ದುಲ್ ರಹೀಮ್ ಹುಸೇನ್ ಶೇಖ್

    ಕೋಟೇಶ್ವರ :ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪುಣ್ಯದ ಕೆಲಸ – ಅಬ್ದುಲ್ ರಹೀಮ್ ಹುಸೇನ್ ಶೇಖ್

    ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯಿಂದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ, ಗುರುವಂದನ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ: ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪುಣ್ಯದ ಕೆಲಸ. ಪವಿತ್ರವಾದ ಕೆಲಸವನ್ನು ಶಿಕ್ಷಕರು ನಿರ್ವಹಿಸುವ ಮೂಲಕ ಶ್ರೇಷ್ಠತೆಯನ್ನು ಪಡೆಯುತ್ತಾರೆ. ವ್ಯಕ್ತಿಯೊಬ್ಬನ ಯಶಸ್ಸಿನ ಹಿನ್ನೆಲೆಯಲ್ಲಿ ಶಿಕ್ಷಕರ ನಿಸ್ವಾರ್ಥವಾದ ಸೇವೆ ಇರುತ್ತದೆ. ಮಕ್ಕಳು ಕೂಡಾ ತಂದೆ ತಾಯಿಗಳಿಗಿಂತ ಹೆಚ್ಚು ವಿಶ್ವಾಸವನ್ನು ಶಿಕ್ಷಕರಲ್ಲಿ ಇರಿಸಿಕೊಳ್ಳುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್ ಹೇಳಿದರು.

    ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ, ಉಡುಪಿ ಜಿಲ್ಲೆ ನೇತೃತ್ವದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ, ಬಾರ್ ಅಸೋಸಿಯೇಷನ್ ಕುಂದಾಪುರ. ಗೀತಾಹೆಚ್.ಎಸ್. ಫೌಂಡೇಶನ್ ಕೋಟೇಶ್ವರ, ಸರಸ್ವತಿ ಕಲ್ಯಾಣ ಮಂಟಪ ಕೋಟೇಶ್ವರ, ಎಮ್. ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ಚಿತ್ತೂರು ಮಾರಣಕಟ್ಟೆ ಇವರ ಸಹಭಾಗಿತ್ವದಲ್ಲಿ ಕೊಟೇಶ್ವರದ ಸರಸ್ವತೀ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಶಸ್ತಿ ಪ್ರದಾನ, ಗುರುವಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ತಂದೆ ತಾಯಿಯಲ್ಲಿ ಹೇಳಿಕೊಳ್ಳಲಾಗದ ವಿಚಾರವನ್ನು ಮಗು ಶಿಕ್ಷಕರಲ್ಲಿ ಹೇಳಿಕೊಳ್ಳುತ್ತದೆ. ಹಾಗಾಗಿ ಶಿಕ್ಷಕರು ತಿಂಗಳಿಗೊಮ್ಮೆಯಾದರೂ ವಿದ್ಯಾರ್ಥಿಗಳೊಂದಿಗೆ ಆಪ್ತವಾಗಿ ಮಾತನಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಮಹತ್ತರವಾದ ಬದಲಾವಣೆಯಲ್ಲಿ ವಿದ್ಯಾರ್ಥಿಗಳಲ್ಲಿ ಮತ್ತು ಅವರ ಕುಟುಂಬದಲ್ಲಿ ಕೂಡಾ ಕಾಣಲು ಸಾಧ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟರು.

    ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಕುಂದಾಪುರ ತಾಲೂಕು ಅಧ್ಯಕ್ಷ ಎಸ್.ವಿ ನಾಗರಾಜ ಅಧ್ಯಕ್ಷತೆ ವಹಿಸಿದ್ದರು.

    ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರಿಗೆ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ವೃತ್ತಿಯಿಂದ ನಿವೃತ್ತರಾದರೂ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಶಿಕ್ಷಕ ನಡೂರು ವಿಶ್ವನಾಥ ಶೆಟ್ಟಿಯವರಿಗೆ ಗುರುವಂದನೆ ಸಲ್ಲಿಸಲಾಯಿತು.

    ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿ ಸಾಧಕ ಪ್ರಶಸ್ತಿಯನ್ನು ಅಮಾಸೆಬೈಲು ಪರಿಸರದ ಶಾಲೆಗಳ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡುತ್ತಿರುವ ಶಂಕರ ಐತಾಳ ಅಮಾಸೆಬೈಲು ಇವರಿಗೆ ಪ್ರದಾನಿಸಲಾಯಿತು.

    ಶೂನ್ಯ ಶಿಕ್ಷಕರಿರುವ ಶಾಲೆಗಳಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ನಾಗರಾಜ ಶೆಟ್ಟಿ ಬೈಂದೂರು ವಲಯ, ಪ್ರಭಾಕರ ಶೆಟ್ಟಿ ಕುಂದಾಪುರ ವಲಯ, ಪರಿಮಳ ಅವಭೃತ ಉಡುಪಿ ವಲಯ, ಆಶಾಲತಾ ಬ್ರಹ್ಮಾವರ ವಲಯ, ಪ್ರೀತೇಶ್ ಕುಮಾರ್ ಕಾರ್ಕಳ ವಲಯ ಇವರಿಗೆ ಉತ್ತಮ ಸಿ.ಆರ್.ಪಿ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು, ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ರಾಜು ಎನ್., ನಿವೃತ್ತ ಮುಖ್ಯೋಪಾಧ್ಯಾಯರಾದ ಮಹಾಬಲ ಶೆಟ್ಟಿ ಚಿತ್ತೂರು ಮಾರಣಕಟ್ಟೆ, ಕೆನರಾ ಬ್ಯಾಂಕ್‍ನ ನಿವೃತ್ತ ಅಧಿಕಾರಿ ಯು.ದಿನೇಶ್ ಪೈ, ಪಡಿ ಮಂಗಳೂರು ನಿರ್ದೇಶಕ ರೆನ್ನಿ ಡಿಸೋಜ, ಶಿಕ್ಷಣಾಭಿಮಾನಿ ಪ್ರಕಾಶ್ ಆಚಾರ್ಯ, ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ರಾಜ್ಯ ಸಮಿತಿ ಸದಸ್ಯೆ ಶೋಭಾ ಭಾಸ್ಕರ್, ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಬೈಂದೂರು ತಾಲೂಕು ಅಧ್ಯಕ್ಷ ಅವನೀಶ ಹೊಳ್ಳ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಕಾರ್ಕಳ ತಾಲೂಕು ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಕುಂದಾಪುರ ತಾಲೂಕು ಕಾರ್ಯದರ್ಶಿ ಪ್ರಮೋದಾ ಕೆ. ಶೆಟ್ಟಿ, ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ರಾಜ್ಯ ಉಪಾಧ್ಯಕ್ಷ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು.

    ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ತಾಲೂಕು ಕೋಶಾಧಿಕಾರಿ ಕೃಷ್ಣಾನಂದ ಶ್ಯಾನುಭಾಗ್ ಪ್ರಾರ್ಥನೆ ಮಾಡಿದರು. ಸಮನ್ವಯ ವೇದಿಕೆಯ ಪುರಸಭೆ ಘಟಕದ ಅಧ್ಯಕ್ಷ ಅಶ್ವತ್ ಕುಮಾರ್ ಸ್ವಾಗತಿಸಿದರು. ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಸ್ತಾವಿಕ ಮಾತುಗಳನ್ನಾಡಿದರು. ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ದೀಪಾ ಮಹೇಶ ವಂದಿಸಿದರು. ಸಮನ್ವಯ ವೇದಿಕೆಯ ಕುಂದಾಪುರ ತಾಲೂಕು ಉಪಾಧ್ಯಕ್ಷ ರಾಜಶೇಖರ ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರ :ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಪರಿಸರ – ‘ನಮಗೊಂದಿಷ್ಟು ಉಳಿಸಿ’

    ಕುಂದಾಪುರ :ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಪರಿಸರ – ‘ನಮಗೊಂದಿಷ್ಟು ಉಳಿಸಿ’

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ನಗರದ ತಾಲೂಕ್ ಪಂಚಾಯತ್ ಮುಂಭಾಗ ಮತ್ತು ಕುಂದಾಪುರ ಸಂತೆ ಮಾರುಕಟ್ಟೆಯಲ್ಲಿ ಪರಿಸರ – ‘ನಮಗೊಂದಿಷ್ಟು ಉಳಿಸಿ’ ಬೀದಿ ನಾಟಕ ಪ್ರದರ್ಶನ ನಡೆಯಿತು.

    ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಕುರಿತ ಈ ಬೀದಿ ನಾಟಕವನ್ನು ಅಂತಿಮ ಬಿ.ಸಿ.ಎ. ವಿದ್ಯಾರ್ಥಿ ದೇವಿಪ್ರಸಾದ್ ಶೆಟ್ಟಿ ರಚಿಸಿ, ಅಂತಿಮ ಬಿ.ಎಸ್ಸಿ. ವಿದ್ಯಾರ್ಥಿ ಲಕ್ಷ್ಮಿಕಾಂತ್ ನಿರ್ದೇಶನ ಮಾಡಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್., ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ಸಂಯೋಜಿಸಿದರು.

    ಈ ಸಂದರ್ಭ ಕಛೇರಿ ಸಿಬ್ಬಂದಿ ರಮೇಶ್ ಮೊಗವೀರ, ರಾಮಕೃಷ್ಣ ಕಾಂತು ಉಪಸ್ಥಿತರಿದ್ದರು.

  • ಕುಂದಾಪುರದಲ್ಲಿ ಫೀಸಿಯೋಕೇರ್ ಸೆಂಟರ್ ನೂತನ ಶಾಖೆ ಶುಭಾರಂಭ

    ಕುಂದಾಪುರದಲ್ಲಿ ಫೀಸಿಯೋಕೇರ್ ಸೆಂಟರ್ ನೂತನ ಶಾಖೆ ಶುಭಾರಂಭ

    ಕುಂದಾಪುರ ಮಿರರ್ ಸುದ್ದಿ.

    ಕುಂದಾಪುರ: ಗುಣಮಟ್ಟದ ಸೇವೆಯ ಮೂಲಕ ಹೆಸರಾಗಿರುವ ಉಡುಪಿಯ ಗಿರಿಜಾ ಗ್ರೂಪ್ಸ್ ಅವರ ಫಿಸಿಯೋಕೇರ್ ಸೆಂಟರ್ನ ನೂತನ ಶಾಖೆ ಕುಂದಾಪುರದ ಅಥರ್ವ ಕಾಂಪ್ಲೆಕ್ಸ್ ನಲ್ಲಿ ಶನಿವಾರ ಶುಭಾರಂಭಗೊಂಡಿತು.

    ಕುಂದಪ್ರಭ ಸಂಪಾದಕ ಯು. ಎಸ್. ಶೆಣೈ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಜೀವನ ಪದ್ದತಿಯ ನಡುವೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ್ದು ಅಗತ್ಯವಾಗಿದೆ. ಫಿಸಿಯೋಥೆರಫಿ ಅಗತ್ಯ ಇಂದಿನ ದಿನದಲ್ಲಿ ಹೆಚ್ಚಿದ್ದು, ಈ ಚಿಕಿತ್ಸೆಯ ಮೂಲಕ ಚೇತರಿಸಿಕೊಂಡ ನೂರಾರು ಉದಾಹರಣೆಗಳಿದೆ. ಈ ಸೇವೆಯನ್ನು ಮನೆ ಮನೆ ವಿಸ್ತರಿಸುವಂತಾಗದೇ ಹತ್ತಾರು ಮಂದಿ ರೋಗಿಗಳು ಪೂರ್ಣ ಪ್ರಮಾಣದಲ್ಲಿ ಇದರ ಪ್ರಯೋಜನೆ ಪಡೆದುಕೊಂಡಂತಾಗುವುದು ಎಂದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಐಎಂಎ ಕುಂದಾಪುರದ ಅಧ್ಯಕ್ಷ ಡಾ. ಮಹೇಶ್ ಗಂಗೊಳ್ಲಿ, ಡಾ. ಎ.ವಿ. ಬಾಳಿಗ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ. ಭಂಡಾರಿ, ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರದ ಜಯಕರ ಶೆಟ್ಟಿ, ಅಮಾಸೆಬೈಲು ಆಯುಷ್ ಆಸ್ಪತ್ರೆಯ ಡಾ. ಹೇಮಲತಾ ಉಪಸ್ಥಿತರಿದ್ದರು.

    ಗಿರಿಜಾ ಗ್ರೂಪ್ನ ಪ್ರವರ್ತಕ ರವೀಂದ್ರ ಶೆಟ್ಟಿ ಸ್ವಾಗತಿಸಿದರು. ಫಿಸಿಯೋಥೆರೆಪಿಸ್ಟ್ ಡಾ. ದೀಪಾ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ವೇಳೆ ಸುರೇಖಾ ರವೀಂದ್ರ ಶೆಟ್ಟಿ ಹಾಗೂ ಹರೀಶ್ ಕುಮಾರ್ ಉಪಸ್ಥಿತರಿದ್ದರು. ಪತ್ರಕರ್ತ ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

    ಗಿರಿಜಾ ಹೆಲ್ತ್ಕೇರ್ ಮತ್ತು ಸರ್ಜಿಕಲ್ಸ್ ಮೂಲಕ ಕುಂದಾಪುರದಲ್ಲಿ ಉತ್ತಮ ಸೇವೆ ನೀಡುತ್ತಿರುವ ಗಿರಿಜಾ ಗ್ರೂಪ್ನ ಪಿಸಿಯೋಕೇರ್, ಪಿಸಿಯೋಥೆರಪಿ ಹಾಗೂ ರಿಹ್ಯಾಬಿಲಿಟೆಷನ್ ಸೆಂಟರ್ ಆಗಿದ್ದು, ಅಲ್ಪ ಕಾಲದ ಹಾಗೂ ಧೀರ್ಘ ಕಾಲದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ. ಅತ್ಯಾಧುನಿಕ ಸೌಕರ್ಯಗಳನ್ನು ಹೊಂದಿದೆ.

  • ಕುಂದಾಪುರ :ಡಾ.ಸರೋಜ ಎಂ. ಅವರಿಗೆ ಅತ್ಯುತ್ತಮ ಜೀವಶಾಸ್ತ್ರ ಉಪನ್ಯಾಸಕ ಪ್ರಶಸ್ತಿ

    ಕುಂದಾಪುರ :ಡಾ.ಸರೋಜ ಎಂ. ಅವರಿಗೆ ಅತ್ಯುತ್ತಮ ಜೀವಶಾಸ್ತ್ರ ಉಪನ್ಯಾಸಕ ಪ್ರಶಸ್ತಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಡಾ.ಸರೋಜ ಎಂ. ಇವರಿಗೆ ಯುಥ್ ಎಫರ್ಟ್ಸ್ ಫಾರ್ ಸೊಸೈಟಿ ಇವರು ಕೊಡಮಾಡುವ ಅತ್ಯುತ್ತಮ ಜೀವಶಾಸ್ತ್ರ ಉಪನ್ಯಾಸಕ ಪ್ರಶಸ್ತಿ ಮತ್ತು ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್ ಗೌರವ ದೊರೆತಿದೆ.

    ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

  • ಪಂಚವರ್ಣ ರಜತ ಗೌರವಕ್ಕೆ ಗ್ರಾಮೀಣ ಭಾಷಾ ಸೊಗಡುಗಾರ ಎ.ಕೆ.ಶೆಟ್ಟಿ ನಡೂರು ಆಯ್ಕೆ

    ಪಂಚವರ್ಣ ರಜತ ಗೌರವಕ್ಕೆ ಗ್ರಾಮೀಣ ಭಾಷಾ ಸೊಗಡುಗಾರ ಎ.ಕೆ.ಶೆಟ್ಟಿ ನಡೂರು ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ನೀಡುತ್ತಿದ್ದು, ಈ ಹಿನ್ನಲ್ಲೆಯಲ್ಲಿ ಈ ತಿಂಗಳು ಗ್ರಾಮೀಣ ಭಾಷಾ ಸೊಗಡುಗಾರ ಎ.ಕೆ ಶೆಟ್ಟಿ ನಡೂರು ಇವರನ್ನು ಇವರನ್ನು ಆಯ್ಕೆಗೊಳಿಸಲಾಗಿದೆ.

    ಪಂಚವರ್ಣ ಸಂಸ್ಥೆ ನೀಡುತ್ತಿರುವ ಹತ್ತನೇ ಸಾಧಕ ಶಕ್ತಿಯಾಗಿದ್ದು, ಈ ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಸಹಕಾರಿ ಕ್ಷೇತ್ರದ ಸಾಧಕ ಜಿ. ತಿಮ್ಮ ಪೂಜಾರಿ, ಸಮಾಜಸೇವಕ ಈಶ್ವರ್ ಮಲ್ಪೆ, ಅನಾಥರ ಬದುಕಿನ ಆಶಾಕಿರಣ ಹೊಸಬೆಳಕು ವಿನಯಚಂದ್ರ ಸಾಸ್ತಾನ, ವಿಶೇಷಚೇತನ ಸಾಧಕಿ ಲಲಿತಾ ಪೂಜಾರಿ, ಸಾಲಿಗ್ರಾಮದ ಹಿರಿಯ ವೈದ್ಯರಾದ ಡಾ. ವಿಶ್ವೇಶ್ವರ ತುಂಗ, ಸಹಕಾರಿ ಕ್ಷೇತ್ರದ ಕೊರಗ ಪೂಜಾರಿ , ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಪಾರಂಪಳ್ಳಿ ಗಣೇಶ್ ಅಡಿಗ, ವೆರಿಕೋಸ್ ತಜ್ಞ ಡಾ.ಎಂ ವಿ ಉರಾಳ ,ಕುಂದಗನ್ನಡದ ರಾಯಬಾರಿ ಮನು ಹಂದಾಡಿ ಇವರುಗಳನ್ನು ಗುರುತಿಸಿದ್ದು ಇಲ್ಲಿ ಸ್ಮರಿಸಬಹುದಾಗಿದೆ.

    ಇದೇ ಸೆ.10 ರಂದು ನಡೂರಿನ ಅವರ ಸ್ವಗೃಹದಲ್ಲಿ ಈ ಗೌರವ ಕಾರ್ಯಕ್ರಮ ನಡೆಯಲಿದೆ ಎಂದು ಪಂಚವರ್ಣ ಸಂಸ್ಥೆಯ ಅಧ್ಯಕ್ಷ ಅಜಿತ್ ಆಚಾರ್ಯ ತಿಳಿಸಿದ್ದಾರೆ.